ವಿಜಯ್ ದೇವರಕೊಂಡಗೆ ರಶ್ಮಿಕಾ ಪ್ರೀತಿಯಿಂದ ಏನೆಂದು ಕರೆಯುತ್ತಾರೆ?

| Updated By: ರಾಜೇಶ್ ದುಗ್ಗುಮನೆ

Updated on: Mar 18, 2025 | 7:53 AM

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ನಡುವಿನ ಸಂಬಂಧದ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ರಶ್ಮಿಕಾ ಅವರು ವಿಜಯ್ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಎಂದು ಬಹಿರಂಗಪಡಿಸಿದ್ದಾರೆ. "ಗೀತ ಗೋವಿಂದ" ಮತ್ತು "ಡಿಯರ್ ಕಾಮ್ರೇಡ್" ಚಿತ್ರಗಳ ನಂತರ ಅವರ ನಡುವೆ ಬಾಂಡಿಂಗ್ ಹೆಚ್ಚಾಗಿದೆ.

ವಿಜಯ್ ದೇವರಕೊಂಡಗೆ ರಶ್ಮಿಕಾ ಪ್ರೀತಿಯಿಂದ ಏನೆಂದು ಕರೆಯುತ್ತಾರೆ?
ವಿಜಯ್-ರಶ್ಮಿಕಾ
Follow us on

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದರು. ಈ ಕಾರಣಕ್ಕೆ ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು. ಈಗ ಗೆಳೆತನ ಪ್ರೀತಿಗೆ ತಿರುಗಿದೆ ಎನ್ನಲಾಗುತ್ತಿದೆ. ಇವರು ಶೀಘ್ರವೇ ಮದುವೆ ಆಗುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಹಾಗಾದರೆ ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ? ಆ ಪ್ರಶ್ನೆಗೆ ಉತ್ತರ ಇದೆ. ರಶ್ಮಿಕಾ ಅವರು ಸಂದರ್ಶನ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಮೊದಲ ಬಾರಿಗೆ ‘ಗೀತ ಗೊಂವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಹಾಗೂ ವಿಜಯ್ ಜೋಡಿ ಸಾಕಷ್ಟು ಗಮನ ಸೆಳೆಯಿತು. ಈ ಜೋಡಿಯನ್ನು ಜನರು ಹೆಚ್ಚು ಇಷ್ಟಪಡೋಕೆ ಆರಂಭಿಸಿದರು. ಆ ಬಳಿಕ ಬಂದ ‘ಡಿಯರ್ ಕಾಮ್ರೇಡ್’ ಚಿತ್ರವು ಅಷ್ಟಾಗಿ ಸದ್ದು ಮಾಡಿಲ್ಲ. ಈಗ ವಿಜಯ್ ಹಾಗೂ ರಶ್ಮಿಕಾ ಮಧ್ಯೆ ಆಪ್ತತೆ ಬೆಳೆದಿದೆ. ಇದು ಬಹುತೇಕರಿಗೆ ಗೊತ್ತಿದೆ.

ಇದನ್ನೂ ಓದಿ
ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಭಿಮಾನ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್, ಕಾರಣ?

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡಗೆ ಒಂದು ನಿಕ್​ನೇಮ್ ಕೊಟ್ಟಿದ್ದಾರೆ. ಅದುವೇ ವಿಜು. ಹೌದು, ವಿಜಯ್ ದೇವರಕೊಂಡ ಅವರನ್ನು ರಶ್ಮಿಕಾ ಅವರು ಪ್ರೀತಿಯಿಂದ ವಿಜು ಎಂದು ಕರೆಯುತ್ತಾರಂತೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಈ ವಿಚಾರ ರಿವೀಲ್ ಮಾಡಿದ್ದಕ್ಕೆ ಅನೇಕರಿಗೆ ಖುಷಿ ಆಗಿದೆ.

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ತೆರೆಮೇಲೆ ಮತ್ತೆ ಒಂದಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಸೂಕ್ತವಾದ ಸ್ಕ್ರಿಪ್ಟ್ ಸಿಕ್ಕಿಲ್ಲ. ಹೀಗಾಗಿ, ಇವರು ಒಟ್ಟಾಗಿ ಸಿನಿಮಾ ಮಾಡಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಇವರ ಕಡೆಯಿಂದ ಈ ವಿಚಾರದಲ್ಲಿ ಗುಡ್ ನ್ಯೂಸ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ರಶ್ಮಿಕಾಗೆ ಭದ್ರತೆ ನೀಡಿ’; ಕೇಂದ್ರಕ್ಕೆ ಮನವಿ ಮಾಡಿದ ಕೊಡವ ಸಮುದಾಯ

‘ಛಾವಾ’ ಸಿನಿಮಾದಲ್ಲಿ ರಶ್ಮಿಕಾ ನಟಿಸಿದ್ದಾರೆ. ಈ ಸಿನಿಮಾ ಭಾರತದಲ್ಲೇ 500+ ಕೋಟಿ ರೂಪಾಯಿ ಗಳಿಕೆ ಮಾಡಿ ಗಮನ ಸೆಳೆದಿದೆ. ಈ ಚಿತ್ರದಿಂದ ರಶ್ಮಿಕಾ ದೊಡ್ಡ ಗೆಲುವು ಕಂಡಿದ್ದಾರೆ. ಅವರ ನಟನೆಯ ಮೂರು ಸಿನಿಮಾಗಳು 500 ಕೋಟಿ ರೂಪಾಯಿ ಗಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Tue, 18 March 25