ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಈ ಕಾರಣಕ್ಕೆ ಸೆಲೆಬ್ರಿಟಿಗಳೆಲ್ಲರೂ ಮನೆಯಲ್ಲೇ ಇದ್ದಾರೆ. ಹೀಗಾಗಿ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆ್ಯಕ್ಟಿವ್ ಆಗಿರುವ ಸ್ಟಾರ್ಗಳು ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಸ್ಯಾಂಡಲ್ವುಡ್ನ ಸ್ಟಾರ್ ನಟಿ ಬಾಲ್ಯದ ದಿನಗಳ ಫೋಟೋ ಒಂದನ್ನು ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಈ ಫೋಟೋಗಳನ್ನು ಹಂಚಿಕೊಂಡಿದ್ದು ಬೇರಾರೂ ಅಲ್ಲ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಕೆಂಪು ಟಿ-ಶರ್ಟ ಧರಿಸಿ ಕಾಯುತ್ತಾ ಕೂತಿದ್ದಾರೆ. ಈ ಫೋಟೋದಲ್ಲಿ ಅವರು ತುಂಬಾನೇ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಕ್ಯಾಪ್ಶನ್ ನೀಡಿರುವ ಅವರು, ಕೊರೊನಾ ಹೋಗುವುದನ್ನು ಕಾಯುವುದು ಹೀಗೆಯೇ ಇರುತ್ತದೆ ಎಂದು ಕುಹಕವಾಡಿದ್ದಾರೆ. ಅಲ್ಲದೆ, ಇದಕ್ಕೆ #ThrowbackThursday ಎಂದು ಹ್ಯಾಶ್ಟ್ಯಾಗ್ ಕೂಡ ನೀಡಿದ್ದಾರೆ.
ಕಿರಿಕ್ ಪಾರ್ಟಿ ತೆರೆಕಂಡಾಗ ಕರ್ನಾಟಕದ ಕ್ರಶ್ ಆಗಿದ್ದ ರಶ್ಮಿಕಾ, ನಂತರ ಇಂಡಿಯಾ ಕ್ರಶ್ ಆದರು. ಇಂಥ ಬ್ಯೂಟಿ ಚಿಕ್ಕ ವಯಸ್ಸಿನಲ್ಲೂ ಕ್ಯೂಟ್ ಆಗಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ. ಚೈಲ್ಡ್ಹುಡ್ ಫೋಟೋ ನೋಡಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.
ಕೊರೊನಾ ವೈರಸ್ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಹೀಗಾಗಿ, ದೇಶದ ಅನೇಕ ರಾಜ್ಯಗಳಲ್ಲಿ ಕಠಿಣ ಲಾಕ್ಡೌನ್ ಜಾರಿಗೆ ತರಲಾಗಿದೆ. ಇದಕ್ಕಾಗಿ ಶೂಟಿಂಗ್ ಕೂಡ ನಿಲ್ಲಿಸಲಾಗಿದೆ. ಇದರಿಂದ ಸಿನಿಮಾ ಮಂದಿ ಮನೆಯಲ್ಲೇ ಇರುವಂತಾಗಿದೆ. ಹೀಗಾಗಿ, ಸೆಲೆಬ್ರಿಟಿಗಳು ವಿಡಿಯೋ ಹಾಗೂ Throwback ಫೋಟೋಗಳನ್ನು ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ. ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.
ಇದನ್ನೂ ಓದಿ: Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್; ಯಾಕಿಂಥ ನಿರ್ಧಾರ?
‘ಕಿರಿಕ್ ಪಾರ್ಟಿ ಹಿಂದಿ ರಿಮೇಕ್ನಲ್ಲಿ ನಾನು ನಟಿಸಲ್ಲ’; ರಶ್ಮಿಕಾ ಖಡಕ್ ನಿರ್ಧಾರಕ್ಕಿದೆ ಬಲವಾದ ಕಾರಣ