Rashmika Mandanna: ರಶ್ಮಿಕಾ ಮಂದಣ್ಣ ಸಿನಿ ಬದುಕಿಗೆ ಐದು ವರ್ಷ; ತಾವು ಕಲಿತ ಪಾಠದ ಬಗ್ಗೆ ಹೇಳಿಕೊಂಡ ನಟಿ

ಸಿನಿ ಬದುಕಿನಲ್ಲಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ ರಶ್ಮಿಕಾ. ಈ ಫೋಟೋಗೆ ಉದ್ದನೆಯ ಕ್ಯಾಪ್ಶನ್​ ಬರೆದಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಸಿನಿ ಬದುಕಿಗೆ ಐದು ವರ್ಷ; ತಾವು ಕಲಿತ ಪಾಠದ ಬಗ್ಗೆ ಹೇಳಿಕೊಂಡ ನಟಿ
ರಶ್ಮಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2021 | 7:05 PM

2016ರ ಡಿಸೆಂಬರ್​ 30ರಂದು ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾ ತೆರೆಗೆ ಬಂದಿತ್ತು. ರಕ್ಷಿತ್​ ಶೆಟ್ಟಿ (Rakshit Shetty) ನಟನೆಯ ಈ ಸಿನಿಮಾದ ಮೂಲಕ ರಶ್ಮಿಕಾ ಮಂದಣ್ಣ (Rashmika Mandanna) ಬಣ್ಣದ ಬದುಕು ಆರಂಭಿಸಿದರು. ಈ ಸಿನಿಮಾ ತೆರೆಗೆ ಬಂದು ಇಂದಿಗೆ ಐದು ವರ್ಷ ಕಳೆದಿದೆ. ‘ಕಿರಿಕ್​ ಪಾರ್ಟಿ’ ಸಿನಿಮಾ ರಶ್ಮಿಕಾ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿದೆ. ಈ ಐದು ವರ್ಷದಲ್ಲಿ ರಶ್ಮಿಕಾ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರು ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಕಲಿತಿದ್ದಾರೆ. ಈ ಬಗ್ಗೆ ರಶ್ಮಿಕಾ ಬರೆದುಕೊಂಡಿದ್ದಾರೆ. ಸಿನಿ ಬದುಕಿನಲ್ಲಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ ರಶ್ಮಿಕಾ. ಈ ಫೋಟೋಗೆ ಉದ್ದನೆಯ ಕ್ಯಾಪ್ಶನ್​ ಬರೆದಿದ್ದಾರೆ. ತಾವು ಕಲಿತ ವಿಚಾರಗಳ ಬಗ್ಗೆ ಇಲ್ಲಿ ಹೇಳಿಕೊಂಡಿದ್ದಾರೆ. ಹಾಗಾದರೆ, ರಶ್ಮಿಕಾ ಮಂದಣ್ಣ ಕಲಿತ ಅಂಶಗಳೇನು? ಆ ಬಗ್ಗೆ ಇಲ್ಲಿದೆ ಮಾಹಿತಿ.

  1. ಸಮಯ ಬೇಗ ಕಳೆದು ಹೋಗುತ್ತದೆ. ಪ್ರತಿ ದಿನವೂ ಸವಿ ನೆನಪುಗಳನ್ನು ಸೃಷ್ಟಿಸಿಕೊಳ್ಳಿ.
  2. ಮನಸ್ಸಿನಿಂದ ಸಂತೋಷವಾಗಿರುವುದನ್ನು ಹೇಗೆ ಎಂಬುದನ್ನು ಕಲಿತೆ.
  3. ಜೀವನದಲ್ಲಿ ಯಾವುದೂ ಸುಲಭವಲ್ಲ ಎಂದು ನಾನು ಅರಿತೆ. ನಿಮಗೆ ಬೇಕಾದ ವಿಚಾರಕ್ಕೆ ಯಾವಾಗಲೂ ಹೋರಾಡುತ್ತಲೇ ಇರಬೇಕು.
  4. ಆದರೆ, ತಾಳ್ಮೆಯಿಂದಿರಿ. ಎಲ್ಲವೂ ಆಗಬೇಕಾದ ಸಂದರ್ಭದಲ್ಲಿ ಆಗುತ್ತದೆ. ಎಲ್ಲದಕ್ಕೂ ತಾಳ್ಮೆ ಬೇಕು.
  5. ಜನರು ಯಾವಾಗಲೂ ನಿಮಗೆ ಏನನ್ನಾದರೂ ಕಲಿಸುತ್ತಾರೆ. ಕಲಿಯಲು ಯಾವಾಗಲೂ ಮುಕ್ತರಾಗಿರಿ. ಅಂದಾಗ ಮಾತ್ರ ನೀವು ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.
  6. ಭಾವನಾತ್ಮಕ, ಮಾನಸಿಕ ಹೊರೆಯನ್ನು ಹೊತ್ತುಕೊಂಡು ಸಾಗಬೇಡಿ. ಹೋಗಲು ಬಿಡಿ. ಬಿಟ್ಟು ಬದುಕುವುದನ್ನು ಕಲಿಯಿರಿ.
  7. ನಿಮಗೆ ಇಷ್ಟವಾದವರಿಗೆ ಸಮಯ ನೀಡಿ.
  8. ಉತ್ತಮವಾದ ಆಹಾರ ಸೇವಿಸಿ. ಹಾಯಾಗಿ ನಿದ್ರಿಸಿ, ವರ್ಕೌಟ್​ ಮಾಡಿ. ದೊಡ್ಡದಾದ ನಗು ಇರಲಿ. ಮುಕ್ತವಾಗಿ ಪ್ರೀತಿಸಿ
  9. ನೀವು ಮೊದಲು ನಿಮ್ಮ ಬಗ್ಗೆ ಯೋಚಿಸಿ. ನಿಮಗೆ ನೀವು ಆದ್ಯತೆ ನೀಡಿ.

ರಶ್ಮಿಕಾ ಸದ್ಯ ‘ಪುಷ್ಪ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದಲ್ಲದೆ, ಬಾಲಿವುಡ್​ನ ಎರಡು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್