AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಬಿಡಿ ದುಬಾರಿ ನಟಿ’ ಎಂದವರಿಗೆ ರಶ್ಮಿಕಾ ಮಂದಣ್ಣ ಕೊಟ್ಟ ಉತ್ತರವೇನು?

ರಶ್ಮಿಕಾ ಮಂದಣ್ಣ ಅವರು ಭಾರತದ ಅತಿ ಹೆಚ್ಚು ಬೇಡಿಕೆಯ ನಟಿಯಾಗಿದ್ದಾರೆ. "ದುಬಾರಿ ನಟಿ" ಎಂಬ ಹಣೆಪಟ್ಟಿಯನ್ನು ಅವರು ನಿರಾಕರಿಸಿದ್ದಾರೆ. ಹಣಕ್ಕಿಂತ ಕಥೆ ಮತ್ತು ಪಾತ್ರ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರ ಜನಪ್ರಿಯತೆ ಮತ್ತು ಚಿತ್ರರಂಗದಲ್ಲಿನ ಅವರ ಯೋಜನೆಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

‘ನೀವು ಬಿಡಿ ದುಬಾರಿ ನಟಿ’ ಎಂದವರಿಗೆ ರಶ್ಮಿಕಾ ಮಂದಣ್ಣ ಕೊಟ್ಟ ಉತ್ತರವೇನು?
ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 11, 2025 | 8:29 AM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಭಾರತದ ಬಹುಬೇಡಿಕೆಯ ನಟಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇರೋದು ಗೊತ್ತೇ ಇದೆ. ಈ ಕಾರಣದಿಂದಲೇ ಅವರ ಕಾಲ್​ಶೀಟ್ ಪಡೆಯಲು ಎಲ್ಲರೂ ಆಸಕ್ತಿ ತೋರಿಸುತ್ತಾರೆ. ಆದರೆ, ಅದು ಅಷ್ಟು ಸುಲಭ ಅಲ್ಲ. ಈಗ ರಶ್ಮಿಕಾ ಈ ಮೊದಲು ನೀಡಿರೋ ಹೇಳಿಕೆ ವೈರಲ್ ಆಗಿದೆ. ತಾವು ದುಬಾರಿ ನಟಿ ಎಂಬುದನ್ನು ಅವರು ಒಪ್ಪಿಕೊಳ್ಳಲೇ ಇಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

ರಶ್ಮಿಕಾ ಮಂದಣ್ಣ ಅವರ ಜೊತೆ ಸಿನಿಮಾ ಮಾಡಬೇಕು ಎಂದರೆ ಅವರಿಗೆ ಕಥೆ ಹಾಗೂ ಪಾತ್ರ ಎರಡೂ ಇಷ್ಟ  ಆಗಬೇಕು. ಹಣ ನೀಡುತ್ತಾರೆ ಎನ್ನುವ ಕಾರಣಕ್ಕೆ ಅವರು ಹೊಸ ಸಿನಿಮಾ ಒಪ್ಪಿಕೊಳ್ಳೋದಿಲ್ಲ ಎಂಬುದು ಅನೇಕರಿಗೆ ಗೊತ್ತಿಲ್ಲ. ಈ ಮೊದಲು ಕಾರ್ಯಕ್ರಮ ಒಂದರಲ್ಲಿ ಅವರು ಹೇಳಿದಂತಹ ಮಾತು ವೈರಲ್ ಆಗಿ ಗಮನ ಸೆಳೆದಿದೆ.

ಇದನ್ನೂ ಓದಿ
Image
Agnyathavasi Review: ಕೊಲೆಯ ಮಧ್ಯೆ ‘ಅಜ್ಞಾತದ’ ಕಥೆ; ಬಗೆದಷ್ಟು ವಿಶೇಷತೆ
Image
ಅಪರೂಪಕ್ಕೆ ಕಾಣಿಸಿಕೊಂಡ ಅಜಿತ್ ಕುಮಾರ್ ಮಗಳು ಅನುಷ್ಕಾ; ವಿಡಿಯೋ ವೈರಲ್
Image
ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?
Image
ಕಂಗನಾ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದ್ದು ನಿಜವೇ? ಕಳ್ಳಾಟ ಬಯಲು

ರಶ್ಮಿಕಾ ಮಂದಣ್ಣ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಆಗ ರಶ್ಮಿಕಾಗೆ ‘ನೀವು ಭಾರತದ ದುಬಾರಿ ನಟಿ’ ಎಂದು ಹೇಳಲಾಯಿತು. ಆದರೆ, ಇದನ್ನು ಅವರು ಒಪ್ಪಿಕೊಳ್ಳಲಿಲ್ಲ. ‘ಇಲ್ಲ ನಾನು ಇದನ್ನು ಒಪ್ಪಿಕೊಳ್ಳುವುದಿಲ್ಲ. ಏಕೆಂದರೆ ಅದು ನಿಜವಲ್ಲ’ ಎಂದು ಹೇಳುವ ಮೂಲಕ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದರು. ರಶ್ಮಿಕಾ ಚಿತ್ರರಂಗಕ್ಕೆ ಬಂದು ದಶಕ ಕಳೆದಿಲ್ಲ. ಆದಾಗ್ಯೂ ಅವರು ದೊಡ್ಡ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ ಎನ್ನಬಹುದು. ವರ್ಷ ಕಳೆದಂತೆ ಅವರ ಬೇಡಿಕೆ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: ಒಮನ್​ನಲ್ಲಿ ರಶ್ಮಿಕಾ ಮಂದಣ್ಣ-ವಿಜಯ್ ಸುತ್ತಾಟ; ಅಭಿಮಾನಿಗಳ ಬಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ  

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’, ‘ಛಾವಾ’, ‘ಅನಿಮಲ್’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಆದರೆ, ಈ ಸಿನಿಮಾ ಯಶಸ್ಸು ಕಾಣಲೇ ಇಲ್ಲ. ಇದು ಅವರ ವೃತ್ತಿ ಜೀವನಕ್ಕೆ ಕೊಂಚ ಹಿನ್ನಡೆ ತಂದಿದೆ. ಆದರೆ, ಇದು ಅವರ ವೃತ್ತಿ ಜೀವನವನ್ನು ನಾಶ ಮಾಡಿಲ್ಲ. ಅವರ ಬೇಡಿಕೆ ಈಗಲೂ ಮುಂದುವರಿದಿದೆ. ಅವರ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂಥದ್ದಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:26 am, Fri, 11 April 25

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ