ಹೇಗಿದ್ದಾರೆ ನೋಡಿ ರಶ್ಮಿಕಾ ತಂಗಿ; ಇಲ್ಲಿದೆ ಮಂದಣ್ಣ ಫ್ಯಾಮಿಲಿಯ ಲೇಟೆಸ್ಟ್​ ಫೋಟೋ

Rashmika Mandanna Family Photo: ರಶ್ಮಿಕಾ ಗೆಳತಿ ಮದುವೆ ಇತ್ತೀಚೆಗೆ ನಡೆಯಿತು. ಈ ಕಾರಣಕ್ಕೆ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡಿದ್ದರು. ಮದುವೆ ನಂತರದ ಅವರು ಕುಟುಂಬದ ಜತೆ ಸಮಯ ಕಳೆದಿದ್ದಾರೆ.

ಹೇಗಿದ್ದಾರೆ ನೋಡಿ ರಶ್ಮಿಕಾ ತಂಗಿ; ಇಲ್ಲಿದೆ ಮಂದಣ್ಣ ಫ್ಯಾಮಿಲಿಯ ಲೇಟೆಸ್ಟ್​ ಫೋಟೋ
ಕುಟುಂಬದ ಜತೆ ರಶ್ಮಿಕಾ
Follow us
| Edited By: Rajesh Duggumane

Updated on:May 19, 2022 | 1:50 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ದೇಶ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಿಂದ ಆರಂಭವಾದ ಅವರ ಸಿನಿ ಬದುಕು ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಅನೇಕ ಸ್ಟಾರ್​ಗಳ ಜತೆ ರಶ್ಮಿಕಾ ತೆರೆಹಂಚಿಕೊಂಡಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ರಶ್ಮಿಕಾ ಮಂದಣ್ಣ ಇತ್ತೀಚೆಗೆ ಹುಟ್ಟೂರಾದ ಕೊಡಗಿಗೆ (Kodagu) ಭೇಟಿ ನೀಡಿದ್ದರು. ಈ ವೇಳೆ ಅವರು ಫ್ಯಾಮಿಲಿ (Rashmika Mandanna Family) ಜತೆ ಸಮಯ ಕಳೆದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ರಶ್ಮಿಕಾ ಅವರ ತಂಗಿ ಶಿಮನ್ ಮಂದಣ್ಣ ಹೈಲೈಟ್ ಆಗಿದ್ದಾಳೆ.

ರಶ್ಮಿಕಾ ಮಂದಣ್ಣ ಸಖತ್ ಬ್ಯುಸಿ ಆಗಿದ್ದಾರೆ. ಬಾಲಿವುಡ್​ನಲ್ಲಿ ಅವರು ನಟಿಸಿರುವ ‘ಗುಡ್​ಬೈ’ ಹಾಗೂ ‘ಮಿಷನ್​ ಮಜ್ನು’ ಚಿತ್ರದ ಕೊನೆಯ ಹಂತದ ಕೆಲಸಗಳು ಪ್ರಗತಿಯಲ್ಲಿದೆ. ‘ಪುಷ್ಪ 2’ ಚಿತ್ರದ ಕೆಲಸಗಳು ಜುಲೈನಿಂದ ಆರಂಭವಾಗಲಿದೆ. ‘ದಳಪತಿ’ ವಿಜಯ್ ಮುಂದಿನ ಸಿನಿಮಾಗೆ ರಶ್ಮಿಕಾ ನಾಯಕಿ. ಈ ಚಿತ್ರದ ಕೆಲಸಗಳೂ ಪ್ರಗತಿಯಲ್ಲಿವೆ. ಇದರ ಮಧ್ಯೆ ಬ್ರೇಕ್​ ತೆಗೆದುಕೊಳ್ಳಬೇಕು ಎಂದರೆ ಅದು ಕಷ್ಟವೇ. ಆದಾಗ್ಯೂ, ರಶ್ಮಿಕಾ ಬಿಡುವು ಮಾಡಿಕೊಂಡು ಕೊಡಗಿಗೆ ಬಂದಿದ್ದಾರೆ.

ಇದನ್ನೂ ಓದಿ

ರಶ್ಮಿಕಾ ಗೆಳತಿ ಮದುವೆ ಇತ್ತೀಚೆಗೆ ನಡೆಯಿತು. ಈ ಕಾರಣಕ್ಕೆ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡಿದ್ದರು. ಮದುವೆ ನಂತರದ ಅವರು ಕುಟುಂಬದ ಜತೆ ಸಮಯ ಕಳೆದಿದ್ದಾರೆ. ಕೊಡಗಿನಲ್ಲಿ ನಿರಂತರವಾಗಿ ಮಳೆ ಆಗುತ್ತಲೇ ಇದೆ. ಈ ಮಳೆಯನ್ನು ಅವರು ಎಂಜಾಯ್ ಮಾಡಿದ್ದಾರೆ. ಕುಟುಂಬದ ಜತೆಗೆ ಸೆಲ್ಫೀ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಇನ್​​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ತಂದೆ ಮದನ್ ಮಂದಣ್ಣ, ತಾಯಿ ಸುಮನ್ ಮಂದಣ್ಣ ಹಾಗೂ ಶಿಮನ್ ಮಂದಣ್ಣ ಜತೆ ಅವರು ಪೋಸ್ ನೀಡಿದ್ದಾರೆ. ರಶ್ಮಿಕಾ ಸ್ಮೈಲ್ ಸಖತ್ ಹೈಲೈಟ್ ಆಗಿದೆ. ಈ ಫೋಟೋ ಕಂಡು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ.

ರಶ್ಮಿಕಾ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವುದರಿಂದ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಅಪರೂಪಕ್ಕೆ ಅವರು ಇಡೀ ಕುಟುಂಬವನ್ನು ಪರಿಚಯಿಸಿರುವುದಕ್ಕೆ ಫ್ಯಾನ್ಸ್ ಸಂತಸಗೊಂಡಿದ್ದಾರೆ. ಈ ಫೋಟೋಗೆ 13 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿವೆ. ರಶ್ಮಿಕಾಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 3.1 ಕೋಟಿ ಹಿಂಬಾಲಕರಿದ್ದಾರೆ. ರಶ್ಮಿಕಾ ಅಭಿಮಾನಿ ಬಳಗ ದಿನ ಕಳೆದಂತೆ ದೊಡ್ಡದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:49 pm, Thu, 19 May 22

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ