ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು

ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು
ರಶ್ಮಿಕಾ-ವಿಜಯ್​ ದೇವರಕೊಂಡ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 11, 2021 | 8:51 AM

ರಶ್ಮಿಕಾ ಮಂದಣ್ಣ ಬಾಲಿವುಡ್ಗೆ ಕಾಲಿಡುತ್ತಿದ್ದಂತೆಯೇ ಒಟ್ಟೊಟ್ಟಿಗೆ ಎರಡೆರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳಲ್ಲಿ ಸ್ಟಾರ್ ನಟರಿದ್ದಾರೆ ಅನ್ನೋದು ವಿಶೇಷ. ರಶ್ಮಿಕಾ ಬಾಲಿವುಡ್ಗೆ ಕಾಲಿಡೋಕೆ ಕಾರಣವಾಗಿದ್ದು, ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ ಅನ್ನೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರತೀ ಚಿತ್ರಕ್ಕೂ ಅವರು ಆಯ್ದುಕೊಳ್ಳುವ ಪಾತ್ರ ಕೂಡ ಭಿನ್ನವಾಗಿರುತ್ತದೆ. ಇದು ರಶ್ಮಿಕಾಗೆ ವರದಾನವಾಗಿದೆ. ರಶ್ಮಿಕಾ ಬಾಲಿವುಡ್ ಹಾದಿಯನ್ನು ಸುಗಮ ಮಾಡಿದ್ದು ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ.

ಈ ಬಗ್ಗೆ ಮಿಷನ್ ಮಜ್ನು ಸಿನಿಮಾದ ನಿರ್ದೇಶಕ ಶಾಂತನು ಬಾಗ್ಚಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ರಶ್ಮಿಕಾ ಅವರ ನಟನೆಯನ್ನು ತುಂಬಾನೇ ಸೂಕ್ಷ್ಮವಾಗಿ ಗಮನಿಸುತ್ತಾ ಬಂದಿದ್ದೆ. ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಅವರ ಅಭಿನಯ ತುಂಬಾನೇ ಏಳ್ಗೆ ಕಂಡಿತ್ತು. ಹೀಗಾಗಿ, ನಾನು ಅವರನ್ನು ಮಿಷನ್ ಮಜ್ನು ಸಿನಿಮಾಗೆ ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದೆ ಎಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಮುಗ್ಧತೆ ಹಾಗೂ ಅವರ ಬ್ಯೂಟಿ ಮಿಷನ್ ಮಜ್ನು ಸಿನಿಮಾದಲ್ಲಿನ ಅವರ ಪಾತ್ರಕ್ಕೆ ಅಗತ್ಯವಿದೆ. ನಾನು ಮೊದಲ ಬಾರಿಗೆ ಕಥೆಯನ್ನು ಜೂಮ್ ಕಾಲ್ನಲ್ಲಿ ವಿವರಿಸಿದ್ದೆ. ಅವರಿಗೆ ಪಾತ್ರ ಇಷ್ಟವಾಗಿತ್ತು. ಆಗಲೇ ಸಿನಿಮಾ ಒಪ್ಪಿಕೊಂಡರು ಎಂದಿದ್ದಾರೆ ಶಾಂತನು.

ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್