AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್; ತಪ್ಪಿತಸ್ಥರಿಗೆ ಆಗುತ್ತಾ ಶಿಕ್ಷೆ?

ಯುವತಿಯೊಬ್ಬರು ಸಣ್ಣ ಬಟ್ಟೆ ಧರಿಸಿ ಲಿಫ್ಟ್ ಏರುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಅಂಟಿಸಲಾಯಿತು. ಅನೇಕರು ಇದು ರಶ್ಮಿಕಾ ಎಂದೇ ಎಲ್ಲರೂ ಭಾವಿಸಿದ್ದರು. ಜೊತೆಗೆ ಬಟ್ಟೆ ಬಗ್ಗೆ ಅವರಿಗೆ ಪಾಠ ಹೇಳಿದರು. ಇದನ್ನು ಗಮನಿಸಿದ ಕೆಲವರು ಇದು ಡೀಪ್​ಫೇಕ್ ವಿಡಿಯೋ ಎಂದು ಎಚ್ಚರಿಸಿದರು.

ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್; ತಪ್ಪಿತಸ್ಥರಿಗೆ ಆಗುತ್ತಾ ಶಿಕ್ಷೆ?
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 12, 2024 | 7:02 AM

Share

ಇತ್ತೀಚೆಗೆ ಸೆಲೆಬ್ರಿಟಿಗಳಿಗೆ ಡೀಪ್​ಫೇಕ್ ವಿಡಿಯೋದಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಯಾರದ್ದೋ ದೇಹಕ್ಕೆ ನಟಿಯರ ಮುಖವನ್ನು ಎಡಿಟ್ ಮಾಡುವ ಕೆಲಸ ಆಗುತ್ತಿದೆ. ಇದರಿಂದ ಸಾಕಷ್ಟು ಮಂದಿಗೆ ತೊಂದರೆ ಆಗುತ್ತಿದೆ. ನಟಿಯರನ್ನು ಅಶ್ಲೀಲವಾಗಿ ಬಿಂಬಿಸುವ ಕೆಲಸ ಆಗುತ್ತಿದೆ. ಈ ರೀತಿ ಆಗಬಾರದು ಎಂದು ಸರ್ಕಾರ ಕೂಡ ಕ್ರಮಕೈಗೊಳ್ಳುತ್ತಿದೆ. ಆದರೆ, ಯಾವುದೇ ಪ್ರಯೋಜನ ಆಗುತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್ ಆಗಿದೆ.

ಡೀಪ್​ಫೇಕ್ ವಿಡಿಯೋ ಬಗ್ಗೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿದ್ದು ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಾಡಲಾದ ಫೇಕ್ ವಿಡಿಯೋದಿಂದ. ಯುವತಿಯೊಬ್ಬರು ಸಣ್ಣ ಬಟ್ಟೆ ಧರಿಸಿ ಲಿಫ್ಟ್ ಏರುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಅಂಟಿಸಲಾಯಿತು. ಅನೇಕರು ಇದು ರಶ್ಮಿಕಾ ಎಂದೇ ಭಾವಿಸಿದ್ದರು. ಜೊತೆಗೆ ಬಟ್ಟೆ ಬಗ್ಗೆ ಅವರಿಗೆ ಪಾಠ ಹೇಳಿದರು. ಇದನ್ನು ಗಮನಿಸಿದ ಕೆಲವರು ಇದು ಡೀಪ್​ಫೇಕ್ ವಿಡಿಯೋ ಎಂದು ಎಚ್ಚರಿಸಿದರು. ಇದನ್ನೂ ಓದಿ: ದಕ್ಷಿಣ ಭಾರತ-ಬಾಲಿವುಡ್ ಎಂದು ಬೇರೆ ಮಾಡುವವರಿಗೆ ರಶ್ಮಿಕಾ ಮಂದಣ್ಣ ಕೊಟ್ಟರು ಉತ್ತರ

ನಂತರ ಅಮಿತಾಭ್ ಬಚ್ಚನ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಧ್ವನಿ ಎತ್ತಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತಪ್ಪಿತಸ್ಥನ ಅರೆಸ್ಟ್ ಮಾಡಿದ್ದರು. ಆದರೂ ಜನರಲ್ಲಿ ಭಯ ಮೂಡಿಲ್ಲ. ಈಗ ರಶ್ಮಿಕಾ ಅವರ ಹೊಸ ಡೀಪ್​ಫೇಕ್ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಯುವತಿಯೊಬ್ಬರು ಡ್ಯಾನ್ಸ್ ಮಾಡುತ್ತಿದ್ದಾರೆ. ಇದಕ್ಕೆ ರಶ್ಮಿಕಾ ಮುಖ ಹಾಕಲಾಗಿದೆ. ಈ ವಿಡಿಯೋಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್ ವಿಡಿಯೋ ಮಾಡಬೇಡಿ’ ಎಂದು ಅವರ ಫ್ಯಾನ್ಸ್ ಕೋರಿಕೊಂಡಿದ್ದಾರೆ. ಕೆಲವರು ಪೊಲೀಸರ ಬಳಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ದೊಡ್ಡದಿದೆ. ಸದ್ಯ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಇದರ ಜೊತೆಗೆ ಇನ್ನೂ ಕೆಲವು ಪ್ರಮುಖ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್