Rashmika Mandanna: ‘ಈ ಸಲ ಕಪ್​ ನಮ್ದೇ’ ಎಂದ ರಶ್ಮಿಕಾ ಮಂದಣ್ಣಗೆ ಆರ್​ಸಿಬಿ ಫ್ಯಾನ್ಸ್​ ಫಿದಾ

Ee Sala Cup Namde: ರಶ್ಮಿಕಾ ಮಂದಣ್ಣ ಇತ್ತೀಚೆಗೆ ಲೈವ್​ ಬಂದಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಅವರು ತಮ್ಮಿಷ್ಟದ ಐಪಿಎಲ್​ ಟೀಂ ಬಗ್ಗೆ ಹೇಳಿಕೊಂಡಿದ್ದಾರೆ.

Rashmika Mandanna: 'ಈ ಸಲ ಕಪ್​ ನಮ್ದೇ' ಎಂದ ರಶ್ಮಿಕಾ ಮಂದಣ್ಣಗೆ ಆರ್​ಸಿಬಿ ಫ್ಯಾನ್ಸ್​ ಫಿದಾ
ರಶ್ಮಿಕಾ ಮಂದಣ್ಣ
Follow us
ರಾಜೇಶ್ ದುಗ್ಗುಮನೆ
|

Updated on:Apr 28, 2021 | 3:11 PM

ಐಪಿಎಲ್​ 14ನೇ ಸೀಸನ್​ ಆರಂಭವಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ತಮ್ಮಿಷ್ಟದ ತಂಡವನ್ನು ಬೆಂಬಲಿಸಿ ಟ್ವೀಟ್​ ಮಾಡುತ್ತಿದ್ದಾರೆ. ಕೊರೊನಾ ಹೆಚ್ಚುತ್ತಿರುವುದರಿಂದ ಜನರು ಮನೆಯಲ್ಲೇ ಉಳಿದುಕೊಳ್ಳುತ್ತಿದ್ದಾರೆ. ಹೀಗಾಗಿ, ಐಪಿಎಲ್​ ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡುತ್ತಿದೆ. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ತಮ್ಮಿಷ್ಟದ ತಂಡ ಯಾವುದು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಲೈವ್​ ಬಂದಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ನಾನು ಲೈವ್​​ ಬರಬೇಕು ಎಂದು ತುಂಬಾ ದಿನಗಳಿಂದ ಅಂದುಕೊಂಡಿದ್ದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಲೈವ್​ ಬಂದಿದ್ದೇನೆ ಎಂದಿದ್ದರು. ಅಲ್ಲದೆ ಸಾಕಷ್ಟು ವಿಚಾರಗಳ ಬಗ್ಗೆ ಅಭಿಮಾನಿಗಳ ಜತೆ ಚರ್ಚೆ ನಡೆಸಿದ್ದರು.

ಈ ವೇಳೆ ಅಭಿಮಾನಿಯೋರ್ವ ನಿಮ್ಮಿಷ್ಟದ ಟೀಂ ಯಾವುದು ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿರುವ ರಶ್ಮಿಕಾ, ಈ ಸಲ ಕಪ್​ ನಮ್ದೇ ಎಂದಿದ್ದಾರೆ. ಈ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ನೇರವಾಗಿಯೇ ಹೇಳಿದ್ದಾರೆ.

ಆರ್​ಸಿಬಿ ತಂಡಕ್ಕೆ ಕಿಚ್ಚ ಸುದೀಪ್​ ಸೇರಿದಂತೆ ಸಾಕಷ್ಟು ಕನ್ನಡ ನಟ-ನಟಿಯರು ಬೆಂಬಲ ನೀಡುತ್ತಿದ್ದಾರೆ. ಈಗ ರಶ್ಮಿಕಾ ಕೂಡ ಆರ್​ಸಿಬಿಗೆ ಬೆಂಬಲ ನೀಡುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಆಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳನ್ನು ಗೆದ್ದು ಆರ್​ಸಿಬಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮಂಗಳವಾರ (ಏಪ್ರಿಲ್​ 27) ದೆಹಲಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಒಂದು ರನ್​ನಿಂದ ಆರ್​ಸಿಬಿ ಗೆದ್ದಿದೆ. ಶುಕ್ರವಾರ (28) ಕೆಎಲ್​ ರಾಹುಲ್​ ನೇತೃತ್ವದ ಪಂಜಾಬ್​ ಕಿಂಗ್ಸ್​ ವಿರುದ್ಧ ಆರ್​ಸಿಬಿ ಸೆಣೆಸಲಿದೆ.

ಸದ್ಯ ಲಾಕ್ಡೌನ್ ಇರುವ ಕಾರಣಕ್ಕೆ ರಶ್ಮಿಕಾ ಕರ್ನಾಟಕಕ್ಕೆ ಬರಲು ಸಾಧ್ಯವಾಗಿಲ್ಲ. ಅಲ್ಲು ಅರ್ಜುನ್ ಜೊತೆಗಿನ ಪುಷ್ಪ ಸೇರಿದಂತೆ ಅನೇಕ ಸಿನಿಮಾ ಕೆಲಸಗಳ ಸಲುವಾಗಿ ಹೈದರಾಬಾದ್ನಲ್ಲೇ ಅವರು ಕಾಲ ಕಳೆಯುತ್ತಿದ್ದಾರೆ. ಕುಟುಂಬದವರನ್ನು ಭೇಟಿ ಮಾಡದೇ ತಿಂಗಳುಗಳೇ ಕಳೆದಿವೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್ನಲ್ಲಿ ಗುಡ್ ಬೈ, ಮಿಷನ್ ಮಜ್ನು ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇದನ್ನೂ ಒದಿ: Rashmika Mandanna: ಒಳ್ಳೆ ಸ್ಕ್ರೀಪ್ಟ್ ಬಂದ್ರೆ ನಟ ವಿಜಯ್‌ ದೇವರಕೊಂಡ ಜತೆ ನಟಿಸ್ತೀನಿ: ರಶ್ಮಿಕಾ ಮಂದಣ್ಣ

Published On - 2:47 pm, Wed, 28 April 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ