ಮುಂಜಾನೆ ನಾಲ್ಕು ಗಂಟೆಗೆ ರಶ್ಮಿಕಾ ತಿನ್ನೋ ಸ್ನ್ಯಾಕ್ಸ್ ಏನು? ಫೋಟೋ ಹಂಚಿಕೊಂಡ ನಟಿ

ರಶ್ಮಿಕಾ ಮಂದಣ್ಣ ಅವರು ತಮ್ಮ ಇತ್ತೀಚಿನ ಚಿತ್ರ 'ಸಿಖಂದರ್' ನ ಚಿತ್ರೀಕರಣದ ಬಗ್ಗೆ ಮತ್ತು ಮುಂಜಾನೆ 4 ಗಂಟೆಗೆ ಮ್ಯಾಗಿ ತಿನ್ನುವ ಅಭ್ಯಾಸದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 'ಸಿಖಂದರ್' ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿದ್ದು, ಸಲ್ಮಾನ್ ಖಾನ್ ಜೊತೆ ಅವರ ಅಭಿನಯ ಕುತೂಹಲ ಕೆರಳಿಸಿದೆ.

ಮುಂಜಾನೆ ನಾಲ್ಕು ಗಂಟೆಗೆ ರಶ್ಮಿಕಾ ತಿನ್ನೋ ಸ್ನ್ಯಾಕ್ಸ್ ಏನು? ಫೋಟೋ ಹಂಚಿಕೊಂಡ ನಟಿ
ರಶ್ಮಿಕಾ

Updated on: Feb 23, 2025 | 11:52 AM

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಛಾವಾ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಾ ಇದ್ದಾರೆ. ಇದರ ಜೊತೆಗೆ ‘ಸಿಖಂದರ್’ ಸಿನಿಮಾದಲ್ಲಿ ನಾಯಕಿ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ವರ್ಷ ಈದ್​ಗೆ ಸಿನಿಮಾ ರಿಲೀಸ್ ಆಗಲಿದೆ. ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಜೀವನದಲ್ಲಿ ನಡೆಯುವ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಈಗ ಅವರು ಮುಂಜಾನೆ 4 ಗಂಟೆಗೆ ತಿನ್ನೋ ಸ್ನಾಕ್ಸ್​ ಬಗ್ಗೆ ಮಾಹಿತಿ ನೀಡಿದ್ದಾರೆ.

ರಶ್ಮಿಕಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಬಗೆಯ ಫೋಟೋಗಳನ್ನು ಹಂಚಿಕೊಂಡು ಅಪ್​ಡೇಟ್ ನೀಡುತ್ತಾರೆ. ಈಗ ಇನ್​ಸ್ಟಾಗ್ರಾಮ್​ನಲ್ಲಿ ಅವರು ಮ್ಯಾಗಿ ಫೋಟೋ ಹಂಚಿಕೊಂಡಿದ್ದಾರೆ. ಬೌಲ್​ ತುಂಬ ಮ್ಯಾಗಿ ಇದೆ. ಇದಕ್ಕೆ ಅವರು ಕ್ಯಾಪ್ಶನ್ ಕೂಡ ನೀಡಿದ್ದಾರೆ.

‘ನಮ್ಮ ನಾಲ್ಕು ಗಂಟೆಯ ಸ್ನ್ಯಾಕ್ಸ್​. ಇದು ನೈಟ್​ ಶೂಟ್​​ನ ಇನ್ನೂ ಸುಲಭ ಮಾಡುತ್ತದೆ’ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ. ರಶ್ಮಿಕಾ ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಕೂಡ ಮ್ಯಾಗಿ ತಿನ್ನುತ್ತಾರೆ ಎನ್ನುವ ವಿಚಾರ ತಿಳಿದು ಅನೇಕರಿಗೆ ಅಚ್ಚರಿ ಆಗಿದೆ. ಈ ಫೋಟೋ ಅವರ ಅಭಿಮಾನಿಗಳ ಪೇಜ್​ಗಳಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ರಶ್ಮಿಕಾ ಮಂದಣ್ಣ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಕಾಲಿಗೆ ಪೆಟ್ಟಾಗಿದ್ದರಿಂದ ಸಿನಿಮಾ ಕೆಲಸಗಳು ವಿಳಂಬ ಆಗಿದ್ದವು. ಫೆಬ್ರವರಿ 14ರಂದು ರಶ್ಮಿಕಾ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಈ ಚಿತ್ರಕ್ಕೆ ಸಲ್ಮಾನ್ ಖಾನ್ ಹೀರೋ ಆದರೆ, ಎಆರ್ ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಖ್ಯಾತ ನಿರ್ಮಾಪಕ ಸಾಜಿದ್ ನಾಡಿಯಾದ್ವಾಲಾ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಬಳಿಕ ರಾಮ್ ಚರಣ್​ ಜೊತೆ ನಟಿಸಲಿರುವ ರಶ್ಮಿಕಾ ಮಂದಣ್ಣ

ಸದ್ಯ ‘ಸಿಖಂದರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಚಿತ್ರೀಕರಣ ಮಾರ್ಚ್​​ನಲ್ಲಿ ಪೂರ್ಣಗೊಳ್ಳಲಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಕಾಜಲ್ ಅಗರ್​ವಾಲ್, ಸತ್ಯರಾಜ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರೀತಮ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.