ತಡವಾಗಿ ಫೋಟೋ ಪೋಸ್ಟ್​ ಮಾಡಿದರೂ ಸಿಕ್ಕಿಬಿದ್ದ ರಶ್ಮಿಕಾ; ದೇವರಕೊಂಡ ಜೊತೆ ಟರ್ಕಿಯಲ್ಲಿ ಸುತ್ತಾಟ?

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಸುತ್ತಾಟವನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ. ಅವರು ಕ್ಲಿಕ್ಕಿಸಿಕೊಂಡ ಫೋಟೋದ ಬ್ಯಾಕ್​ಗ್ರೌಂಡ್ ವಿಜಯ್ ದೇವರಕೊಂಡ ಟರ್ಕಿಯಿಂದ ಪೋಸ್ಟ್ ಮಾಡಿದ್ದ ಫೋಟೋ ಜೊತೆ ಸಾಮ್ಯತೆ ಹೊಂದಿದೆ.

ತಡವಾಗಿ ಫೋಟೋ ಪೋಸ್ಟ್​ ಮಾಡಿದರೂ ಸಿಕ್ಕಿಬಿದ್ದ ರಶ್ಮಿಕಾ; ದೇವರಕೊಂಡ ಜೊತೆ ಟರ್ಕಿಯಲ್ಲಿ ಸುತ್ತಾಟ?
ವಿಜಯ್-ರಶ್ಮಿಕಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Oct 08, 2023 | 7:06 AM

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಪ್ರೀತಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರು ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಅಭಿಮಾನಿಗಳ ವಲಯದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆಗಳು ಆಗುತ್ತಲೇ ಇರುತ್ತವೆ. ಇಬ್ಬರೂ ಒಂದೇ ಸ್ಥಳಕ್ಕೆ ತೆರಳಿರುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ದಿನಗಳಂದು ಫೋಟೋ ಪೋಸ್ಟ್ ಮಾಡುತ್ತಾರೆ. ಆದಾಗ್ಯೂ ಅಭಿಮಾನಿಗಳ ಕೈಲಿ ಸಿಕ್ಕಿ ಬೀಳುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರನ್ನು ಅಭಿಮಾನಿಗಳು ಸಾಕ್ಷಿ ಸಮೇತ ಹಿಡಿದಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ಟರ್ಕಿಯಲ್ಲಿ ಸುತ್ತಾಟ ನಡೆಸುತ್ತಿದ್ದರು ಎನ್ನಲಾಗಿದೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ನಟಿಸಿದರು. ಆ ಬಳಿಕ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮತ್ತೆ ತೆರೆ ಹಂಚಿಕೊಂಡರು. ಇವರ ಕೆಮಿಸ್ಟ್ರಿ ಅಭಿಮಾನಿಗಳಿಗೆ ಇಷ್ಟವಾಗಿದೆ. ಇವರು ಒಟ್ಟಾಗಿ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ವಿಜಯ್ ಹಾಗೂ ರಶ್ಮಿಕಾ ಲಿವ್ ಇನ್ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬುದಕ್ಕೆ ಹಲವು ಸಾಕ್ಷ್ಯಗಳು ಸಿಕ್ಕಿವೆ. ಆದರೆ, ಈ ವಿಚಾರವನ್ನು ಅವರು ಒಪ್ಪಿಕೊಳ್ಳುತ್ತಿಲ್ಲ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಸುತ್ತಾಟವನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ. ಅವರು ಕ್ಲಿಕ್ಕಿಸಿಕೊಂಡ ಫೋಟೋದ ಬ್ಯಾಕ್​ಗ್ರೌಂಡ್ ವಿಜಯ್ ದೇವರಕೊಂಡ ಟರ್ಕಿಯಿಂದ ಪೋಸ್ಟ್ ಮಾಡಿದ್ದ ಫೋಟೋ ಜೊತೆ ಸಾಮ್ಯತೆ ಹೊಂದಿದೆ.

ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಶೂಟಿಂಗ್​ ಟರ್ಕಿಯಲ್ಲಿ ನಡೆದಿತ್ತು. ವಿಜಯ್ ಸ್ವಲ್ಪ ದಿನ ಅಲ್ಲಿ ಸಮಯ ಕಳೆದಿದ್ದರು. ವಿಜಯ್ ಜೊತೆ ರಶ್ಮಿಕಾ ಮಂದಣ್ಣ ಕೂಡ ಜಾಯಿನ್ ಆಗಿದ್ದರು ಎನ್ನಲಾಗುತ್ತಿದೆ. ಶೂಟಿಂಗ್ ಸಂದರ್ಭದಲ್ಲೇ ವಿಜಯ್ ದೇವರಕೊಂಡ ಫೋಟೋ ಪೋಸ್ಟ್​ ಮಾಡಿದ್ದರು. ಆದರೆ, ರಶ್ಮಿಕಾ ಮಂದಣ್ಣ ಅವರು ತಡವಾಗಿ ಫೋಟೋ ಶೇರ್ ಮಾಡಿ ಸಿಕ್ಕಿ ಬಿದ್ದಿದ್ದಾರೆ.

ವಿಜಯ್ ದೇವರಕೊಂಡ ಹಾಕಿದ್ದ ಫೋಟೋ ಹಾಗೂ ರಶ್ಮಿಕಾ ಮಂದಣ್ಣ ಹಾಕಿದ್ದ ಫೋಟೋಗಳನ್ನು ಜೋಡಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ

ಈ ಮೊದಲು ಈ ರೀತಿಯ ಸಾಕಷ್ಟು ಫೋಟೋಗಳು ವೈರಲ್ ಆಗಿವೆ. ರಶ್ಮಿಕಾ ಮಂದಣ್ಣ ಬೀಚ್ ಸೈಡ್​ನಲ್ಲಿ ಪೋಸ್ ಕೊಟ್ಟಿದ್ದರು.  ವಿಜಯ್ ದೇವರಕೊಂಡ ಕೂಡ ಇಲ್ಲಿಯೇ ಫೋಟೋ ಹಾಕಿದ್ದರು. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಸಹಾಯಕನ ಮದುವೆಗೆ ತೆರಳಿದ್ದರು. ಸಾರಿಯಲ್ಲಿ ಅವರು ಗಮನ ಸೆಳೆದಿದ್ದರು. ಮನೆಯ ಸಮೀಪ ಒಂದು ಫೋಟೋನ ಕ್ಲಿಕ್ ಮಾಡಿಕೊಂಡಿದ್ದರು. ಇದು ವಿಜಯ್ ದೇವರಕೊಂಡ ಮನೆ ಎಂದು ಅನೇಕರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ