ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ಮಧ್ಯೆ ಆಪ್ತತೆ ಇದೆ ಅನ್ನೋದು ಗೊತ್ತಿರುವ ವಿಚಾರ. ಅವರೂ ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ, ಪ್ರೀತಿ ಇದೆ ಎಂಬುದನ್ನು ಒಪ್ಪಿಕೊಳ್ಳಲು ಇವರು ರೆಡಿ ಇಲ್ಲ. ಆದರೆ, ಇವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದನ್ನು ಸಾಬೀತು ಮಾಡಲು ಹಲವು ಉದಾಹರಣೆಗಳು ಸಿಗುತ್ತವೆ. ಈ ಮಧ್ಯೆ ರಶ್ಮಿಕಾ ಮಾಡಿರುವ ಹೊಸ ಪೋಸ್ಟ್ ವೈರಲ್ ಆಗಿದೆ. ‘ನನ್ನ ಜೀವನದಲ್ಲಿ ಬಂದಿದ್ದಕ್ಕೆ ಧನ್ಯವಾದಗಳು’ ಎಂದು ರಶ್ಮಿಕಾ ಪೋಸ್ಟ್ ಮಾಡಿದ್ದಾರೆ. ಇದು ವಿಜಯ್ಗೆ ಹೇಳಿರುವ ಸೀಕ್ರೆಟ್ ಮೆಸೇಜ್ ಎಂದು ಅನೇಕರು ಊಹಿಸುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಕಡಿಮೆ ಸಮಯದಲ್ಲಿ ದೊಡ್ಡ ಹೀರೋಯಿನ್ ಆಗಿ ಬೆಳೆದಿದ್ದಾರೆ. ಕನ್ನಡದಿಂದ ಆರಂಭವಾದ ಅವರ ವೃತ್ತಿ ಜೀವನ ಈಗ ಬಾಲಿವುಡ್ವರೆಗೆ ಹೋಗಿದೆ. ತೆಲುಗು, ತಮಿಳಿನಲ್ಲೂ ಬೇಡಿಕೆ ಇದೆ. ನಟಿಯ ಸಾಧನೆಯನ್ನು ಫ್ಯಾನ್ಸ್ ಹೊಗಳುತ್ತಿದ್ದಾರೆ. ಈ ಮಧ್ಯೆ ರಶ್ಮಿಕಾ ಅವರ ವೈಯಕ್ತಿಕ ಜೀವನ ಕೂಡ ಆಗಾಗ ಚರ್ಚೆ ಆಗುತ್ತದೆ.
ರಶ್ಮಿಕಾ ಮಂದಣ್ಣ ಅವರು ಇನ್ಸ್ಟಾಗ್ರಾಮ್ನಲ್ಲಿ ಒಂದು ಸ್ಟೇಟಸ್ ಹಾಕಿದ್ದರು. ‘ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು ಎಂದು ನಾನು ನಿನಗೆ ಹೇಳಲು ಬಯಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಹಾರ್ಟ್ ಎಮೋಜಿ ಹಾಕಿದ್ದಾರೆ. ರಶ್ಮಿಕಾ ಹೀಗೆ ಪೋಸ್ಟ್ ಮಾಡಿದ್ದು ಯಾರಿಗೆ, ಅವರು ಹೀಗೆ ಹೇಳಲು ಕಾರಣ ಏನು ಎಂಬ ಪ್ರಶ್ನೆ ಫ್ಯಾನ್ಸ್ ತಲೆಯಲ್ಲಿ ಕೊರೆಯುತ್ತಿದೆ. ರಶ್ಮಿಕಾ ಮಂದಣ್ಣ ಸಿನಿಮಾ ಪ್ರಚಾರದ ಭಾಗ ಇರಬಹುದೇ ಎನ್ನುವ ಪ್ರಶ್ನೆಯೂ ಮೂಡಿದೆ.
ಇದನ್ನೂ ಓದಿ: ರಶ್ಮಿಕಾ To ಸಮಂತಾ: ಪ್ರತಿ ಇನ್ಸ್ಟಾಗ್ರಾಮ್ ಪೋಸ್ಟ್ಗೆ ಈ ಸೆಲೆಬ್ರಿಟಿಗಳು ಪಡೆಯೋ ಹಣ ಎಷ್ಟು?
ರಶ್ಮಿಕಾ ಮಂದಣ್ಣ ಅವರ ಈ ಪೋಸ್ಟ್ನ ಪಾಪರಾಜಿಗಳು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಅವರದ್ದು ರಬ್ ನೇ ಬನಾದಿ ಜೋಡಿ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಇವರು ಮದುವೆ ಆಗಲಿ’ ಎಂದು ಕೋರಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಸದ್ಯಕ್ಕೆ ವಿವಾಹ ಆಗುವ ಆಲೋಚನೆಯಲ್ಲಿ ಇಲ್ಲ. ಅವರು ವೃತ್ತಿ ಜೀವನದತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ‘ಪುಷ್ಪ 2’ ಮೊದಲಾದ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಅನಿಮಲ್’ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ