AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೋದ ಜೀವ ಬಂತು’; ಕಷ್ಟದಲ್ಲೂ ಖುಷಿಪಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದರು. ಅವರಿಗೆ ಇಲ್ಲಿ ಜನಪ್ರಿಯತೆ ಸಿಕ್ಕಿತು. ತೆಲುಗು ಚಿತ್ರರಂಗದವರು ಅವರಿಗೆ ಭರ್ಜರಿ ಸ್ವಾಗತ ನೀಡಿದರು. ಈ ಕಾರಣದಿಂದಲೇ ರಶ್ಮಿಕಾ ಮಂದಣ್ಣ ಅವರು ತೆಲುಗು ಸಿನಿಮಾಗಳಲ್ಲಿ ಹೆಚ್ಚು ಗುರುತಿಸಿಕೊಂಡರು.

‘ಹೋದ ಜೀವ ಬಂತು’; ಕಷ್ಟದಲ್ಲೂ ಖುಷಿಪಡುತ್ತಿದ್ದಾರೆ ರಶ್ಮಿಕಾ ಮಂದಣ್ಣ
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Sep 15, 2023 | 6:30 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಸಿಕ್ಕಿದೆ. ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಅವರಿಗೆ ಬೇಡಿಕೆ ಇದೆ. ಸದ್ಯ ವಿವಿಧ ಭಾಷೆಗಳಲ್ಲಿ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಹಾಗಂತ ಫಿಟ್ನೆಸ್ ಕಾಯ್ದುಕೊಳ್ಳೋದು ಅಷ್ಟು ಸುಲಭದ ವಿಚಾರ ಅಲ್ಲವೇ ಅಲ್ಲ. ರಶ್ಮಿಕಾ ಮಂದಣ್ಣ ಅವರು ಈಗ ವರ್ಕೌಟ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಇದರ ಜೊತೆಗೆ ಫಿಟ್ನೆಸ್ ಕಾಯ್ದುಕೊಳ್ಳೋದು ಎಷ್ಟು ಕಷ್ಟ ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದರು. ಅವರಿಗೆ ಇಲ್ಲಿ ಜನಪ್ರಿಯತೆ ಸಿಕ್ಕಿತು. ತೆಲುಗು ಚಿತ್ರರಂಗದವರು ಅವರಿಗೆ ಭರ್ಜರಿ ಸ್ವಾಗತ ನೀಡಿದರು. ಈ ಕಾರಣದಿಂದಲೇ ರಶ್ಮಿಕಾ ಮಂದಣ್ಣ ಅವರು ತೆಲುಗು ಸಿನಿಮಾಗಳಲ್ಲಿ ಹೆಚ್ಚು ಗುರುತಿಸಿಕೊಂಡರು. ಸಿನಿಮಾ ಕೆಲಸಗಳ ಮಧ್ಯೆ ಅವರು ನಿತ್ಯವೂ ಮರೆಯದೇ ವರ್ಕೌಟ್ ಮಾಡುತ್ತಾರೆ.

ಲೆಗ್​ ವರ್ಕೌಟ್ ಮಾಡುತ್ತಿರುವ ವಿಡಿಯೋನ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಬಗ್ಗೆ ಅವರು ವಿವರಿಸಿದ್ದಾರೆ. ‘ನನ್ನ ಪ್ರಾಣ ಹೋಗಿ ಬರುವ ಸಂದರ್ಭವನ್ನು ಜುನೈದ್ ಶೇಖ್ ವಿಡಿಯೋ ಮಾಡಿದ್ದಾರೆ. ಅವರು ನನ್ನನ್ನು ಸೂಪರ್ ಹ್ಯೂಮನ್ ಆಗಿ ಬದಲಾಯಿಸುತ್ತಿದ್ದಾರೆ. ಈ ವಿಡಿಯೋ ನೋಡಿ ನನ್ನ ಒಳಗೆ ಇರುವ ಬೀಸ್ಟ್​​ ನಿಜಕ್ಕೂ ಖುಷಿ ಪಡುತ್ತದೆ’ ಎಂದು ರಶ್ಮಿಕಾ ಮಂದಣ್ಣ ಅವರು ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: ‘ಇದುವೇ ಕರ್ಮ?’; ಬಾಲಿವುಡ್​ ಕಡೆ ಒಲವು ತೋರಿಸಿದ ರಶ್ಮಿಕಾ ಮಂದಣ್ಣಗೆ ಉಂಟಾಯ್ತು ಹಿನ್ನಡೆ

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ಅಲ್ಲು ಅರ್ಜುನ್ ಹೀರೋ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2024ರ ಆಗಸ್ಟ್ 15ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಅನಿಮಲ್’ ಸಿನಿಮಾ ಚಿತ್ರ ಡಿಸೆಂಬರ್ 1ರಂದು ರಿಲೀಸ್ ಆಗುತ್ತಿದೆ. ರಣಬೀರ್ ಕಪೂರ್ ನಟನೆಯ ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ