ಬೋಲ್ಡ್ ಫೋಟೋ ಹಂಚಿಕೊಂಡು ಪಡ್ಡೆಗಳ ನಿದ್ದೆ ಕದ್ದ ನಟಿ ರಶ್ಮಿಕಾ ಮಂದಣ್ಣ; ಫ್ಯಾನ್ಸ್ ಹೇಳಿದ್ದೇನು?

ಸಿನಿಮಾ ಕೆಲಸಗಳ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ರಶ್ಮಿಕಾ ಪ್ರಯತ್ನಿಸುತ್ತಾರೆ. ಹೊಸ ಫೋಟೋಶೂಟ್ ಮಾಡಿಸಿ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಾರೆ.

ಬೋಲ್ಡ್ ಫೋಟೋ ಹಂಚಿಕೊಂಡು ಪಡ್ಡೆಗಳ ನಿದ್ದೆ ಕದ್ದ ನಟಿ ರಶ್ಮಿಕಾ ಮಂದಣ್ಣ; ಫ್ಯಾನ್ಸ್ ಹೇಳಿದ್ದೇನು?
ರಶ್ಮಿಕಾ ಮಂದಣ್ಣ
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 29, 2022 | 6:15 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದ್ಯ ಚಿತ್ರರಂಗದಲ್ಲಿ ಸಾಕಷ್ಟು ಬ್ಯುಸಿ ಇದ್ದಾರೆ. ಹಲವು ಭಾಷೆಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕನ್ನಡದಿಂದ ಆರಂಭವಾದ ಅವರ ಜರ್ನಿ ಈಗ ಬಾಲಿವುಡ್​ಗೆ ಹೋಗಿ ನಿಂತಿದೆ. ನಿತ್ಯ ಹೊಸಹೊಸ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಇನ್ನು, ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ (Social Media) ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹೊಸ ಫೋಟೋಶೂಟ್​ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಅವರ ಹೊಸ ಫೋಟೋಶೂಟ್ ನೋಡಿ ಫ್ಯಾನ್ಸ್ ಕಣ್ಣರಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ತೆಲುಗಿನ ‘ಪುಷ್ಪ 2’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಸುಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದು, ಅಲ್ಲು ಅರ್ಜುನ್ ನಾಯಕ. ಬಾಲಿವುಡ್​ನಲ್ಲಿ ಸಿದ್ದಾರ್ಥ್ ಮಲ್ಹೋತ್ರ ನಟನೆಯ ‘ಮಿಷನ್ ಮಜ್ನು’ ಹಾಗೂ ಅಮಿತಾಭ್ ಬಚ್ಚನ್ ಮುಖ್ಯಭೂಮಿಕೆಯಲ್ಲಿರುವ ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಈ ಎರಡು ಹಿಂದಿ ಚಿತ್ರಗಳ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇದಲ್ಲದೆ, ‘ದಳಪತಿ’ ವಿಜಯ್ ಅಭಿನಯದ ‘ವಾರಿಸು’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಮಲಯಾಳಂ ಚಿತ್ರ ‘ಸೀತಾ ರಾಮಂ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ದೇಶದ ಅತ್ಯಂತ ಜನಪ್ರಿಯ ನಟಿ ಸಮಂತಾ; ರಶ್ಮಿಕಾ ಮಂದಣ್ಣಗೆ ಎಷ್ಟನೇ ಸ್ಥಾನ?
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಸಿನಿಮಾ ಕೆಲಸಗಳ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ರಶ್ಮಿಕಾ ಪ್ರಯತ್ನಿಸುತ್ತಾರೆ. ಹೊಸ ಫೋಟೋಶೂಟ್ ಮಾಡಿಸಿ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಾರೆ. ಈಗ ಅವರು ಹಂಚಿಕೊಂಡಿರುವ ಸೀರೆಯ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

ರಶ್ಮಿಕಾ ಹಂಚಿಕೊಂಡಿರುವ ಫೋಟೋಗಳು ಸಖತ್ ಬೋಲ್ಡ್ ಆಗಿವೆ. ಈ ಫೋಟೋಗೆ ಅಭಿಮಾನಿಗಳಿಂದ 20 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಕೆಲವರು ರಶ್ಮಿಕಾ ಅವರ ಹಾಟ್​ನೆಸ್​ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಇನ್ನೂ ಕೆಲವರು ‘ರಶ್ಮಿಕಾ ಹಾಟ್ ಆ್ಯಂಡ್ ಕ್ಯೂಟ್​’ ಎಂದು ಕಮೆಂಟ್ ಮಾಡಿದ್ದಾರೆ. ರಶ್ಮಿಕಾಗೆ ಇನ್​ಸ್ಟಾಗ್ರಾಮ್​ನಲ್ಲಿ 3.21 ಕೋಟಿ ಹಿಂಬಾಲಕರಿದ್ದಾರೆ.

ಇದನ್ನೂ ಓದಿ: Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ.. 

ದುಲ್ಖರ್ ಸಲ್ಮಾನ್-ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಂ ಚಿತ್ರದ ಟೀಸರ್ ಬಿಡುಗಡೆ

Published On - 5:07 pm, Wed, 29 June 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ