ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದ್ಯ ಚಿತ್ರರಂಗದಲ್ಲಿ ಸಾಕಷ್ಟು ಬ್ಯುಸಿ ಇದ್ದಾರೆ. ಹಲವು ಭಾಷೆಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕನ್ನಡದಿಂದ ಆರಂಭವಾದ ಅವರ ಜರ್ನಿ ಈಗ ಬಾಲಿವುಡ್ಗೆ ಹೋಗಿ ನಿಂತಿದೆ. ನಿತ್ಯ ಹೊಸಹೊಸ ಆಫರ್ಗಳು ಅವರನ್ನು ಹುಡುಕಿ ಬರುತ್ತಿವೆ. ಇನ್ನು, ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ (Social Media) ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹೊಸ ಫೋಟೋಶೂಟ್ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಅವರ ಹೊಸ ಫೋಟೋಶೂಟ್ ನೋಡಿ ಫ್ಯಾನ್ಸ್ ಕಣ್ಣರಳಿಸಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ತೆಲುಗಿನ ‘ಪುಷ್ಪ 2’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಸುಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅಲ್ಲು ಅರ್ಜುನ್ ನಾಯಕ. ಬಾಲಿವುಡ್ನಲ್ಲಿ ಸಿದ್ದಾರ್ಥ್ ಮಲ್ಹೋತ್ರ ನಟನೆಯ ‘ಮಿಷನ್ ಮಜ್ನು’ ಹಾಗೂ ಅಮಿತಾಭ್ ಬಚ್ಚನ್ ಮುಖ್ಯಭೂಮಿಕೆಯಲ್ಲಿರುವ ‘ಗುಡ್ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಈ ಎರಡು ಹಿಂದಿ ಚಿತ್ರಗಳ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇದಲ್ಲದೆ, ‘ದಳಪತಿ’ ವಿಜಯ್ ಅಭಿನಯದ ‘ವಾರಿಸು’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಮಲಯಾಳಂ ಚಿತ್ರ ‘ಸೀತಾ ರಾಮಂ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ.
ಸಿನಿಮಾ ಕೆಲಸಗಳ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ರಶ್ಮಿಕಾ ಪ್ರಯತ್ನಿಸುತ್ತಾರೆ. ಹೊಸ ಫೋಟೋಶೂಟ್ ಮಾಡಿಸಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುತ್ತಾರೆ. ಈಗ ಅವರು ಹಂಚಿಕೊಂಡಿರುವ ಸೀರೆಯ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.
ರಶ್ಮಿಕಾ ಹಂಚಿಕೊಂಡಿರುವ ಫೋಟೋಗಳು ಸಖತ್ ಬೋಲ್ಡ್ ಆಗಿವೆ. ಈ ಫೋಟೋಗೆ ಅಭಿಮಾನಿಗಳಿಂದ 20 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಕೆಲವರು ರಶ್ಮಿಕಾ ಅವರ ಹಾಟ್ನೆಸ್ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಇನ್ನೂ ಕೆಲವರು ‘ರಶ್ಮಿಕಾ ಹಾಟ್ ಆ್ಯಂಡ್ ಕ್ಯೂಟ್’ ಎಂದು ಕಮೆಂಟ್ ಮಾಡಿದ್ದಾರೆ. ರಶ್ಮಿಕಾಗೆ ಇನ್ಸ್ಟಾಗ್ರಾಮ್ನಲ್ಲಿ 3.21 ಕೋಟಿ ಹಿಂಬಾಲಕರಿದ್ದಾರೆ.
ಇದನ್ನೂ ಓದಿ: Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು ನೀಡಿದ ಪ್ರತಿಕ್ರಿಯೆ ಇಲ್ಲಿದೆ..
ದುಲ್ಖರ್ ಸಲ್ಮಾನ್-ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಂ ಚಿತ್ರದ ಟೀಸರ್ ಬಿಡುಗಡೆ
Published On - 5:07 pm, Wed, 29 June 22