Rashmika Mandanna: ಅರ್ಧಕ್ಕೆ ನಿಂತೋಯ್ತು ರಶ್ಮಿಕಾ ಮಂದಣ್ಣ ನಟನೆಯ ಈ ಸಿನಿಮಾ?

ರಶ್ಮಿಕಾ ಮಂದಣ್ಣ ಈಗ ಸ್ಟಾರ್ ನಟಿ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿ ಇವೆ. ಕೆಲವು ಕಥೆಗಳನ್ನು ಅವರು ಕೇಳುತ್ತಿದ್ದಾರೆ. ಕೆಲವು ಪ್ರಾಜೆಕ್ಟ್ ಫೈನಲ್ ಆಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಈ ಮಧ್ಯೆ ಅವರ ನಟನೆಯ ‘ರೇನ್​ಬೋ’ ಸಿನಿಮಾ ಶೂಟ್ ಅರ್ಧಕ್ಕೆ ನಿಂತಿದೆ ಎನ್ನಲಾಗುತ್ತಿದೆ.

Rashmika Mandanna: ಅರ್ಧಕ್ಕೆ ನಿಂತೋಯ್ತು ರಶ್ಮಿಕಾ ಮಂದಣ್ಣ ನಟನೆಯ ಈ ಸಿನಿಮಾ?
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Feb 13, 2024 | 6:56 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದಿಂದ ಅವರು ಗೆದ್ದು ಬೀಗಿದ್ದಾರೆ. ಈಗ ಅವರ ನಟನೆಯ ‘ರೇನ್​ಬೋ’ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ. ಈ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಂತು ಹೋಗಿದೆ ಎಂದು ಕೆಲವು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಸಿನಿಮಾ ನಿರ್ದೇಶಕರಿಂದ ಸ್ಪಷ್ಟ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಸ್ಟಾರ್ ನಟಿಯಾಗಿ ಬೆಳೆದು ನಿಂತಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿ ಇವೆ. ‘ಪುಷ್ಪ 2’ ಚಿತ್ರದ ಶೂಟ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ಅವರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ. ಇದಲ್ಲದೆ ಅವರು ಧನುಷ್ ಜೊತೆಯೂ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಕಥೆಗಳನ್ನು ಅವರು ಕೇಳುತ್ತಿದ್ದಾರೆ. ಕೆಲವು ಪ್ರಾಜೆಕ್ಟ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಈ ಮಧ್ಯೆ ಅವರ ನಟನೆಯ ‘ರೇನ್​ಬೋ’ ಸಿನಿಮಾ ಶೂಟ್ ಅರ್ಧಕ್ಕೆ ನಿಂತಿದೆ ಎನ್ನಲಾಗುತ್ತಿದೆ.

‘ರೇನ್​ಬೋ’ ಚಿತ್ರಕ್ಕೆ ತಮಿಳು ನಿರ್ದೇಶಕ ಶಾಂತರುಬಾನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕೆಲ ಹಲವು ಹಿಂದೆ ಪೂರ್ಣಗೊಂಡಿದೆ. ಎರಡನೇ ಹಂತದ ಶೂಟಿಂಗ್ ಇನ್ನೂ ಆರಂಭ ಆಗಿಲ್ಲ. ಈ ಬಗ್ಗೆ ಯಾವುದೇ ಅಪ್​ಡೇಟ್ ಕೂಡ ಬಂದಿಲ್ಲ. ರಶ್ಮಿಕಾ ಮಂದಣ್ಣ ಅವರು ಶೂಟ್​ನಲ್ಲಿ ಭಾಗಿ ಆಗುತ್ತಿಲ್ಲ ಎನ್ನಲಾಗಿದೆ.

ಈ ಮೊದಲು ರಶ್ಮಿಕಾ ಈ ಚಿತ್ರಕ್ಕಾಗಿ ಹೆಚ್ಚಿನ ಸಂಭಾವನೆ ಡಿಮ್ಯಾಂಡ್ ಮಾಡಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದರು. ಇದರ ಜೊತೆಗೆ ಕಥೆಯಲ್ಲೂ ಕೆಲವು ಬದಲಾವಣೆ ಮಾಡೋಕೆ ಸೂಚಿಸಿದ್ದರು. ಆದರೆ, ಈ ಬಗ್ಗೆ ನಿರ್ದೇಶಕರು ಯಾವ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ವಿಚಾರ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು 

ತಮ್ಮ ಸಂಭಾವನೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ರಶ್ಮಿಕಾ ಮಂದಣ್ಣ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದರು. ‘ನಾನು ಪ್ರತಿ ಚಿತ್ರಕ್ಕೆ 4.5 ಕೋಟಿ ರೂಪಾಯಿ ಪಡೆಯುತ್ತೇನೆ ಎನ್ನುವ ವರದಿ ಹರಿದಾಡುತ್ತಿದೆ. ಇನ್ನುಮುಂದೆ ನಾನು ಅಷ್ಟೇ ಕೇಳುತ್ತೇನೆ. ನಿರ್ಮಾಪಕರು ಏಕೆ ಎಂದು ಕೇಳಿದರೆ ಮಾಧ್ಯಮಗಳಲ್ಲಿ ಹಾಗೆಯೇ ಬಂದಿದೆ ಎನ್ನುತ್ತೇನೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ