Rashmika Mandanna: ಸಂತೋಷದ ಜೀವನಕ್ಕಾಗಿ ಅಭಿಮಾನಿಗಳಿಗೆ ಹೊಸ ಮಂತ್ರ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

ಹಲವು ವಿಚಾರಕ್ಕೆ ರಶ್ಮಿಕಾ ಅವರನ್ನು ನಿರಂತರವಾಗಿ ಟೀಕಿಸಲಾಗುತ್ತದೆ. ಆದರೆ, ಇದಕ್ಕೆಲ್ಲ ರಶ್ಮಿಕಾ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅದು ಹೇಗೆ ಎಂಬುದನ್ನು ಅವರು ನಾಲ್ಕು ಶಬ್ದಗಳ ಮೂಲಕ ವಿವರಿಸಿದ್ದಾರೆ.

Rashmika Mandanna: ಸಂತೋಷದ ಜೀವನಕ್ಕಾಗಿ ಅಭಿಮಾನಿಗಳಿಗೆ ಹೊಸ ಮಂತ್ರ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Follow us
ರಾಜೇಶ್ ದುಗ್ಗುಮನೆ
|

Updated on: Jun 01, 2023 | 10:24 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರ ಜನಪ್ರಿಯತೆ ಸದ್ಯಕ್ಕಂತೂ ಕಡಿಮೆ ಆಗುವಂಥದ್ದಲ್ಲ. ರಶ್ಮಿಕಾ ಇಷ್ಟೆಲ್ಲಾ ಜನಪ್ರಿಯತೆ ಪಡೆದ ಹೊರತಾಗಿಯೂ ಅವರಿಗೆ ಟ್ರೋಲ್ ಕಾಟ ನಿಂತಿಲ್ಲ. ಅವರು ನಡೆದುಕೊಳ್ಳುವ ಪ್ರತಿ ವಿಚಾರ ಇಟ್ಟುಕೊಂಡು ಟ್ರೋಲ್ ಮಾಡಲಾಗುತ್ತದೆ. ಅವರನ್ನು ಹಿಗ್ಗಾಮುಗ್ಗಾ ಟೀಕಿಸಲಾಗುತ್ತದೆ. ಇದೆಲ್ಲವನ್ನೂ ಅವರು ಮೆಟ್ಟಿ ನಿಂತಿದ್ದಾರೆ. ಇದಕ್ಕೆ ಅವರ ಬಳಿ ಒಂದು ಮಂತ್ರ ಇದೆ. ಅದೇನು ಎಂಬುದನ್ನು ರಶ್ಮಿಕಾ ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗೋಕೆ ಸಾಕಷ್ಟು ಕಾರಣಗಳು ಇವೆ. ರಕ್ಷಿತ್ ಶೆಟ್ಟಿ ಜೊತೆ ನಿಶ್ಚಯವಾದ ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡಿದ್ದು ಹಾಗೂ ಕನ್ನಡದ ಬಗ್ಗೆ ಅವರು ತೋರಿದ ನಿರ್ಲಕ್ಷ್ಯ. ಇದೆರಡೂ ವಿಚಾರಕ್ಕೆ ಅವರನ್ನು ನಿರಂತರವಾಗಿ ಟೀಕಿಸಲಾಗುತ್ತದೆ. ಆದರೆ, ಇದಕ್ಕೆಲ್ಲ ರಶ್ಮಿಕಾ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅದು ಹೇಗೆ ಎಂಬುದನ್ನು ಅವರು ನಾಲ್ಕು ಶಬ್ದಗಳ ಮೂಲಕ ವಿವರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ನಗುತ್ತಿರುವ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಕ್ಯಾಪ್ಶನ್​ನಲ್ಲಿ ಅವರು ತಮ್ಮ ನಗುವಿಗೆ ಕಾರಣವಾದ ವಿಚಾರ ಏನು ಎಂಬುದನ್ನು ವಿವರಿಸಿದ್ದಾರೆ. ಗುಣ ಪಡಿಸಿಕೊಳ್ಳುವುದು, ಕಲಿಯುವುದು, ಬೆಳೆಯುವುದು ಮತ್ತು ಪ್ರೀತಿ ತೋರಿಸುವುದು. ಇದು ರಶ್ಮಿಕಾ ಅವರ ನಗುವಿನ ಹಿಂದಿನ ಮಂತ್ರ.

ಏನೇ ಕೆಟ್ಟದ್ದು ನಡೆದರೂ ಆ ಘಟನೆಯನ್ನು ಮರೆಯಬೇಕು ಎಂಬುದನ್ನು ರಶ್ಮಿಕಾ ನಂಬುತ್ತಾರೆ. ನೋವನ್ನು ಗುಣಪಡಿಸಿಕೊಂಡ ನಂತರ ಆ ಘಟನೆಯಿಂದ ಕಲಿಯಬೇಕು, ನಂತರ ಬೆಳೆಯಬೇಕು, ಎಲ್ಲರನ್ನೂ ಪ್ರಿತಿಸಬೇಕು ಅನ್ನೋದು ರಶ್ಮಿಕಾ ಅವರು ಹಾಕಿಕೊಂಡ ನಿಯಮ. ಇದನ್ನು ಅವರು ಈಗಲೂ ಪಾಲಿಸುತ್ತಿದ್ದಾರೆ. ರಶ್ಮಿಕಾ ಮಾತಿಗೆ ಅನೇಕರು ಸಹಮತ ಸೂಚಿಸಿದ್ದಾರೆ.

ಇದನ್ನೂ ಓದಿ: ನನ್ನ ಶಕ್ತಿಯನ್ನು ನನಗೆ ಪರಿಚಯಿಸಿದ್ದು ಪುನೀತ್ ರಾಜ್​ಕುಮಾರ್, ಅವರನ್ನು ಭೇಟಿಯಾಗಿದ್ದು ಪುಣ್ಯ: ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಹಲವು ಭಾಷೆಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನ ‘ಪುಷ್ಪ 2’ ಚಿತ್ರಕ್ಕೆ ಅವರೇ ನಾಯಕಿ. ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ರೇನ್​ಬೋ’ ಹೆಸರಿನ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ನಿತಿನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಬಾಲಿವುಡ್​ನಲ್ಲಿ ‘ಅನಿಮಲ್’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಇದಲ್ಲದೆ, ಶಾಹಿದ್ ಕಪೂರ್ ಹಾಗೂ ವಿಕ್ಕಿ ಕೌಶಲ್ ಜೊತೆ ತಲಾ ಒಂದು ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಬಗ್ಗೆಯೂ ಮಾತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ