AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನಮ್ಮ ಊರಿಗೆ ಬಂದು ತುಂಬಾ ಸಮಯವಾಯ್ತು’; ಬೆಂಗಳೂರ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

Rashmika Mandanna | Pushpa: ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಈ ಚಿತ್ರದಲ್ಲಿ ಅವರು ಭಿನ್ನ ಗೆಟಪ್​ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ.

Rashmika Mandanna: ‘ನಮ್ಮ ಊರಿಗೆ ಬಂದು ತುಂಬಾ ಸಮಯವಾಯ್ತು’; ಬೆಂಗಳೂರ ಬಗ್ಗೆ ರಶ್ಮಿಕಾ ಮಂದಣ್ಣ ಮಾತು
ರಶ್ಮಿಕಾ
TV9 Web
| Edited By: |

Updated on:Dec 15, 2021 | 4:12 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಇಡೀ ಭಾರತಾದ್ಯಂತ ಫೇಮಸ್​ ಆಗಿದ್ದಾರೆ. ಅವರಿಗೆ ಟಾಲಿವುಡ್​, ಬಾಲಿವುಡ್​ಗಳಲ್ಲೂ ಆಫರ್ ಇದೆ. ಕನ್ನಡದ ಬಗ್ಗೆ ಅವರು ಅಷ್ಟು ಒಲವು ತೋರುವುದಿಲ್ಲ ಎನ್ನುವ ಆಪಾದನೆ ಇದೆ. ಇದರ ಮಧ್ಯೆಯೂ ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್​ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಸಿನಿಮಾದ ಪ್ರಚಾರಕ್ಕೆ ಅವರು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಅವರು ಬೆಂಗಳೂರ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಈ ಚಿತ್ರದಲ್ಲಿ ಅವರು ಭಿನ್ನ ಗೆಟಪ್​ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್​, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ. ಇಂದು (ಡಿಸೆಂಬರ್​ 15) ಬೆಂಗಳೂರಿಗೆ ಸಿನಿಮಾ ತಂಡ ಆಗಮಿಸಿತ್ತು. ಈ ವೇಳೆ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ವೇದಿಕೆ ಏರಿ ಮಾತನಾಡಿದ್ದಾರೆ.

ರಶ್ಮಿಕಾ ಸಾಲುಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈ, ಹೈದರಾಬಾದ್​ ಎಂದು ಸುತ್ತಾಟ ನಡೆಸುತ್ತಿದ್ದಾರೆ. ಇದರ ಮಧ್ಯೆ ಅವರಿಗೆ ಬೆಂಗಳೂರಿಗೆ ಹಾಗೂ ಊರಿಗೆ ಹೋಗೋಕೆ ಟೈಮ್​ ಸಿಕ್ಕಿಲ್ಲ. ಈ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ‘ಬೆಂಗಳೂರಿಗೆ, ನಮ್ಮೂರಿಗೆ ಹೋಗದೆ ತುಂಬಾ ಸಮಯವಾಯ್ತು. ಸಿನಿಮಾ ಕೆಲಸಗಳಲ್ಲೇ ನಾನು ಬ್ಯುಸಿಯಾದೆ’ ಎಂದಿದ್ದಾರೆ ಅವರು.

‘ಪುಷ್ಪ’ ಸಿನಿಮಾದ ಬುಕಿಂಗ್​ ಈಗಾಗಲೇ ಆರಂಭಗೊಂಡಿದೆ. ಸಿನಿಮಾಗೆ ಅದ್ದೂರಿಯಾಗಿ ಓಪನಿಂಗ್​ ಸಿಗುವ ಸಾಧ್ಯತೆ ಇದೆ. ಬಹುತೇಕ ಶೋಗಳು ಈಗಾಗಲೇ ಹೌಸ್​ಫುಲ್​ ಆಗುತ್ತಿದೆ. ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ಅವರ ನಿರ್ದೇಶನವಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​, ಜಗಪತಿ ಬಾಬು ಪ್ರಕಾಶ್​ ರಾಜ್​ ಮುಂತಾದ ಸ್ಟಾರ್​ ಕಲಾವಿದರು ಕೂಡ ‘ಪುಷ್ಪ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಎರಡು ಪಾರ್ಟ್​ಗಳಲ್ಲಿ ಈ ಚಿತ್ರ ತಯಾರಾಗಿದ್ದು, ಡಿ.17ರಂದು ಮೊದಲ ಪಾರ್ಟ್​ ಮಾತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Pushpa Movie: ರಶ್ಮಿಕಾ, ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸುದ್ದಿಗೋಷ್ಠಿ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 3:06 pm, Wed, 15 December 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ