ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ. ಕನ್ನಡದ ಬಗ್ಗೆ ಅವರು ಅಷ್ಟು ಒಲವು ತೋರುವುದಿಲ್ಲ ಎನ್ನುವ ಆಪಾದನೆ ಇದೆ. ಇದರ ಮಧ್ಯೆಯೂ ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಸಿನಿಮಾದ ಪ್ರಚಾರಕ್ಕೆ ಅವರು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಅವರು ಬೆಂಗಳೂರ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಈ ಚಿತ್ರದಲ್ಲಿ ಅವರು ಭಿನ್ನ ಗೆಟಪ್ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ. ಇಂದು (ಡಿಸೆಂಬರ್ 15) ಬೆಂಗಳೂರಿಗೆ ಸಿನಿಮಾ ತಂಡ ಆಗಮಿಸಿತ್ತು. ಈ ವೇಳೆ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ವೇದಿಕೆ ಏರಿ ಮಾತನಾಡಿದ್ದಾರೆ.
ರಶ್ಮಿಕಾ ಸಾಲುಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈ, ಹೈದರಾಬಾದ್ ಎಂದು ಸುತ್ತಾಟ ನಡೆಸುತ್ತಿದ್ದಾರೆ. ಇದರ ಮಧ್ಯೆ ಅವರಿಗೆ ಬೆಂಗಳೂರಿಗೆ ಹಾಗೂ ಊರಿಗೆ ಹೋಗೋಕೆ ಟೈಮ್ ಸಿಕ್ಕಿಲ್ಲ. ಈ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ‘ಬೆಂಗಳೂರಿಗೆ, ನಮ್ಮೂರಿಗೆ ಹೋಗದೆ ತುಂಬಾ ಸಮಯವಾಯ್ತು. ಸಿನಿಮಾ ಕೆಲಸಗಳಲ್ಲೇ ನಾನು ಬ್ಯುಸಿಯಾದೆ’ ಎಂದಿದ್ದಾರೆ ಅವರು.
‘ಪುಷ್ಪ’ ಸಿನಿಮಾದ ಬುಕಿಂಗ್ ಈಗಾಗಲೇ ಆರಂಭಗೊಂಡಿದೆ. ಸಿನಿಮಾಗೆ ಅದ್ದೂರಿಯಾಗಿ ಓಪನಿಂಗ್ ಸಿಗುವ ಸಾಧ್ಯತೆ ಇದೆ. ಬಹುತೇಕ ಶೋಗಳು ಈಗಾಗಲೇ ಹೌಸ್ಫುಲ್ ಆಗುತ್ತಿದೆ. ‘ಪುಷ್ಪ’ ಚಿತ್ರಕ್ಕೆ ಸುಕುಮಾರ್ ಅವರ ನಿರ್ದೇಶನವಿದೆ. ಡಾಲಿ ಧನಂಜಯ್, ಫಹಾದ್ ಫಾಸಿಲ್, ಜಗಪತಿ ಬಾಬು ಪ್ರಕಾಶ್ ರಾಜ್ ಮುಂತಾದ ಸ್ಟಾರ್ ಕಲಾವಿದರು ಕೂಡ ‘ಪುಷ್ಪ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಎರಡು ಪಾರ್ಟ್ಗಳಲ್ಲಿ ಈ ಚಿತ್ರ ತಯಾರಾಗಿದ್ದು, ಡಿ.17ರಂದು ಮೊದಲ ಪಾರ್ಟ್ ಮಾತ್ರ ಬಿಡುಗಡೆ ಆಗುತ್ತಿದೆ.
ಇದನ್ನೂ ಓದಿ: Pushpa Movie: ರಶ್ಮಿಕಾ, ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸುದ್ದಿಗೋಷ್ಠಿ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
Published On - 3:06 pm, Wed, 15 December 21