ರಶ್ಮಿಕಾ ಬೆಳವಣಿಗೆ ನೋಡಿ ಹೊಟ್ಟೆ ಉರಿದುಕೊಳ್ಳೋದು ಪಕ್ಕಾ; ಮತ್ತೋರ್ವ ಸ್ಟಾರ್ ಹೀರೋಗೆ ನಾಯಕಿ

Rashmika Mandanna: ತಮ್ಮ ಕೆಲಸದ ಮೂಲಕ ರಶ್ಮಿಕಾ ಎಲ್ಲದಕ್ಕೂ ಉತ್ತರ ಕೊಡುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನ ಮತ್ತೋರ್ವ ಸ್ಟಾರ್ ಹೀರೋಗೆ ನಾಯಕಿ ಆಗುತ್ತಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಬೆಳವಣಿಗೆ ನೋಡಿ ಹೊಟ್ಟೆ ಉರಿದುಕೊಳ್ಳೋದು ಪಕ್ಕಾ; ಮತ್ತೋರ್ವ ಸ್ಟಾರ್ ಹೀರೋಗೆ ನಾಯಕಿ
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: May 13, 2023 | 9:02 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ದಿನ ಕಳೆದಂತೆ ಬೆಳೆಯುತ್ತಲೇ ಇದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಲೇ ಇವೆ. ಅವರ ಬೆಳವಣಿಗೆ ನೋಡಿ ಅನೇಕರು ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಸಾಕಷ್ಟು ಮಂದಿ ಅವರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಇದಕ್ಕೆಲ್ಲ ತಲೆಕೆಡಿಸಿಕೊಳ್ಳುತ್ತಿಲ್ಲ. ತಮ್ಮ ಕೆಲಸದ ಮೂಲಕ ಅವರು ಎಲ್ಲದಕ್ಕೂ ಉತ್ತರ ಕೊಡುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನ ಮತ್ತೋರ್ವ ಸ್ಟಾರ್ ಹೀರೋಗೆ ನಾಯಕಿ ಆಗುತ್ತಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಫೇಮಸ್ ಆದ ಬಳಿಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಈಗಾಗಲೇ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಮಿತಾಭ್ ಬಚ್ಚನ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ರಣಬೀರ್ ಕಪೂರ್ ಜೊತೆ ಅವರು ‘ಅನಿಮಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಛತ್ರಪತಿ ಶಿವಾಜಿ ಸೊಸೆಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದರ ಜೊತೆ ಮತ್ತೊಂದು ಸಿನಿಮಾ ಮಾತುಕತೆಯಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ ಎಂದು ವರದಿ ಆಗಿದೆ.

ಶಾಹಿದ್ ಕಪೂರ್ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ತಾಂತ್ರಿಕ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ. ಶಾಹಿದ್ ಕಪೂರ್ ಅವರ ನಟನೆಯ ‘ಫರ್ಜಿ’ ವೆಬ್​ ಸೀರಿಸ್ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸೀರಿಸ್ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ.

ಇದನ್ನೂ ಓದಿ: ನಾನ್​-ವೆಜ್​ ತಿನ್ನಲ್ಲ ಅಂತ ಸುಳ್ಳು ಹೇಳಿದ್ರಾ ರಶ್ಮಿಕಾ ಮಂದಣ್ಣ? ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’, ‘ರೇನ್​ ಬೋ’, ‘ಅನಿಮಲ್’ ಹಾಗೂ ನಿತಿನ್ ಜೊತೆಗಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇವುಗಳ ಜೊತೆ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಬೆಳವಣಿಗೆ ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ರಶ್ಮಿಕಾ ಮಂದಣ್ಣಗೆ ವರ್ಷದ ಆರಂಭದಲ್ಲೇ ಬ್ಯಾಕ್​ ಟು ಬ್ಯಾಕ್ ಗೆಲುವು ಸಿಕ್ಕಿದೆ. ಅವರ ನಟನೆಯ ತಮಿಳಿನ ‘ವಾರಿಸು’ ಸಿನಿಮಾ ಗೆದ್ದಿದೆ. ಒಟಿಟಿಯಲ್ಲಿ ರಿಲೀಸ್ ಆದ ‘ಮಿಷನ್ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ‘ಅನಿಮಲ್’ ಸಿನಿಮಾ ಈ ವರ್ಷವೇ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ