‘ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ’; ಟೀಕೆಗೆ ಗುರಿಯಾದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಅವರು "ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೇ" ಎಂದು ಹೇಳಿದ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಪ್ರೇಮಾ ಅವರಂತಹ ಹಲವು ಖ್ಯಾತ ಕಲಾವಿದರು ಕೊಡವ ಸಮುದಾಯಕ್ಕೆ ಸೇರಿದವರು ಎಂಬುದನ್ನು ಅವರು ನಿರ್ಲಕ್ಷಿಸಿದ್ದಾರೆ. ಈ ಹೇಳಿಕೆಯಿಂದ ಅವರು ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಟೀಕೆಗೆ ಗುರಿಯಾಗುತ್ತಾ ಇರುತ್ತಾರೆ. ಈಗ ಅವರು ಅಜ್ಞಾನದ ಹೇಳಿಕೆ ನೀಡಿದ್ದಾರೆ. ಇದರಿಂದ ಅವರು ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ‘ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೆ ಅನಿಸುತ್ತದೆ’ ಎಂದು ಹೇಳಿದ್ದಾರೆ. ಈ ಪೋಸ್ಟ್ಗೆ ಸಾಕಷ್ಟು ಜನರು ಕಮೆಂಟ್ ಮಾಡಿದ್ದು, ರಶ್ಮಿಕಾ ಮಂದಣ್ಣ ಟೀಕಿಸಿದ್ದಾರೆ. ಅಲ್ಲದೆ, ಕೊಡವ ಸಮುದಾಯದಿಂದ ಬಂದು ಚಿತ್ರರಂಗದಲ್ಲಿ ಮಿಂಚಿದವರ ಹೆಸರನ್ನು ಕೂಡ ನೀಡಲಾಗಿದೆ.
ರಶ್ಮಿಕಾ ಮಂದಣ್ಣ ಅವರು ಕನ್ನಡಗಿರಿಂದ ಸದಾ ಟೀಕೆಗೆ ಗುರಿಯಾಗುತ್ತಾರೆ. ಇದಕ್ಕೆ ಕಾರಣ ಅವರ ಕನ್ನಡ ವಿರೋಧಿ ಹೇಳಿಕೆ. ಈ ಮೊದಲು ರಶ್ಮಿಕಾ ಸಾಕಷ್ಟು ಬಾರಿ ಈ ರೀತಿಯ ಎಡವಟ್ಟು ಮಾಡಿಕೊಂಡ ಉದಾಹರಣೆ ಇದೆ. ಈಗ ರಶ್ಮಿಕಾ ಹೊಸ ರೀತಿಯ ಹೇಳಿಕೆ ನೀಡಿದ್ದಾರೆ. ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದು ಹೇಳಿದ್ದಾರೆ.
‘ಮೋಜೋ ಸ್ಟೋರಿ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ರಶ್ಮಿಕಾ ಮಂದಣ್ಣ, ‘ನಮ್ಮ ಕೊಡವ ಸಮುದಾಯದಿಂದ ಯಾರೂ ಚಿತ್ರರಂಗಕ್ಕೆ ಬರಲಿಲ್ಲ. ಬಹುಶಃ ನಮ್ಮ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೇ. ನಮ್ಮ ಸಮುದಾಯದವರು ತುಂಬಾನೇ ಜಡ್ಜ್ ಮಾಡುತ್ತಾರೆ. ನಾನು ಆಡಿಷನ್ ಮಾಡುತ್ತೇನೆ ಎಂದು ನನ್ನ ಕುಟುಂಬದವರಿಗೆ ಹೇಳಿರಲಿಲ್ಲ. ಸಿನಿಮಾ ರಂಗಕ್ಕೆ ಹೋಗುತ್ತೇನೆ ಎಂದು ಕೂಡ ಅವರಿಗೆ ತಿಳಿಸಿರಲಿಲ್ಲ’ ಎಂದು ಹೇಳಿದ್ದಾರೆ ರಶ್ಮಿಕಾ.
View this post on Instagram
ಸದ್ಯ ರಶ್ಮಿಕಾ ಹೇಳಿಕೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಭಾರತ ಚಿತ್ರರಂಗದಲ್ಲಿ ತುಂಬಾನೇ ಖ್ಯಾತಿ ಪಡೆದಿರೋ ಪ್ರೇಮಾ ಅವರು ಕೂಡ ಕೊಡವ ಸಮುದಾಯದವರೇ. ಅವರು ಗಳಿಸಿದ ಖ್ಯಾತಿ ತುಂಬಾನೇ ದೊಡ್ಡದು. ರಶ್ಮಿಕಾ ಹುಟ್ಟುವಾಗ ಪ್ರೇಮಾ ಅವರು ಚಿತ್ರರಂಗಕ್ಕೆ ಬಂದು ಒಂದು ವರ್ಷ ಕಳೆದಿತ್ತು. ಅವರ ಬಗ್ಗೆ ರಶ್ಮಿಕಾ ಗೊತ್ತಿಲ್ಲ ಅನ್ನೋದು ಹಾಸ್ಯಾಸ್ಪದ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.
ಇದನ್ನೂ ಓದಿ: ಕೋಟಿ ಕೊಟ್ಟರು ತೆರೆಯ ಮೇಲೆ ಆ ಒಂದು ಕೆಲಸ ಮಾಡಲ್ಲ ಎಂದ ರಶ್ಮಿಕಾ ಮಂದಣ್ಣ
ಇನ್ನು, ಕೊಡವ ಸಮಯದಾಯದಿಂದ ಚಿತ್ರರಂಗಕ್ಕೆ ಬಂದವರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಹರ್ಷಿಕಾ ಪೂಣಚ್ಚ, ಕೃಷಿ ತಾಪಂಡ, ನಿಧಿ ಸುಬ್ಬಯ್ಯ, ಡೈಸಿ ಬೋಪಣ್ಣ, ಶ್ವೇತಾ ಚಂಗಪ್ಪ ಹೀಗೆ ಹಲವರು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಆದರೆ, ರಶ್ಮಿಕಾ ಅವರು ಮಾತ್ರ ತಮ್ಮದೇ ಲೋಕದಲ್ಲಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:00 am, Sat, 5 July 25








