AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ರವಿ ಬಸ್ರೂರ್​​ಗೆ ಹಾಲಿವುಡ್​ ಕಡೆಯಿಂದ ಬಂತು ಆಫರ್

ರವಿ ಬಸ್ರೂರ್ ಅವರು ಕೆಜಿಎಫ್ ಮತ್ತು ಸಲಾರ್ ಚಿತ್ರಗಳ ಮೂಲಕ ಖ್ಯಾತಿ ಪಡೆದ ಸಂಗೀತ ನಿರ್ದೇಶಕರು. ಅವರ ಸಂಗೀತ ಸಾಕಷ್ಟು ಜನಪ್ರಿಯತೆ ಪಡೆದಿದ್ದು, ಹಾಲಿವುಡ್ ನಿಂದಲೂ ಆಫರ್‌ಗಳು ಬಂದಿವೆ. ‘ವೀರಚಂದ್ರಹಾಸ’ ತೆಲುಗು ಚಿತ್ರದ ಬಿಡುಗಡೆ ಸಮಯದಲ್ಲಿ ಅವರು ತಮಗೆ ಬಂದ ಹಾಲಿವುಡ್ ಆಫರ್​ಗಳ ಬಗ್ಗೆ ಮಾತನಾಡಿದ್ದಾರೆ.

ಕನ್ನಡದ ರವಿ ಬಸ್ರೂರ್​​ಗೆ ಹಾಲಿವುಡ್​ ಕಡೆಯಿಂದ ಬಂತು ಆಫರ್
ರವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 18, 2025 | 10:33 AM

Share

‘ಕೆಜಿಎಫ್’ ಸಿನಿಮಾ ಮೂಲಕ ಬೇರೆಯದೇ ಹಂತಕ್ಕೆ ಹೋದವರು ರವಿ ಬಸ್ರೂರು (Ravi Basruru) ಅವರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮಾಸ್ ಸಿನಿಮಾಗಳು ಎಂದಾದಾಗ ಅವರಿಗೆ ಆಫರ್​​ ಹೋಗೋದು ಹೆಚ್ಚು. ಅವರು ನಿರ್ದೇಶನ ಮಾಡಿದ ‘ವೀರಚಂದ್ರಹಾಸ’ ಸಿನಿಮಾ ಸೆಪ್ಟೆಂಬರ್ 19ರಂದು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಈ ವೇಳೆ ಅವರು ತೆಲುಗು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆಗ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

‘ಉಗ್ರಂ’, ‘ಕೆಜಿಎಫ್’, ಸಲಾರ್ ರೀತಿಯ ಸಿನಿಮಾಗಳಿಗೆ ರವಿ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದರು. ಈ ಸಿನಿಮಾಗಳ ಹಿನ್ನೆಲೆ ಸಂಗೀತ ಸಾಕಷ್ಟು ಗಮನ ಸೆಳೆಯಿತು. ಈ ಕಾರಣ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ‘ಸಲಾರ್’ ಚಿತ್ರದಿಂದ ಅವರಿಗೆ ಸಾಕಷ್ಟು ಆಫರ್​ಗಳು ಬಂದವಂತೆ.

‘ಸಲಾರ್’ ಸಿನಿಮಾದ ಹಿನ್ನೆಲೆ ಸಂಗೀತ ಕೆಲವರಿಗೆ ಇಷ್ಟ ಆಗಿಲ್ಲ. ‘ಕೆಜಿಎಫ್’ ಚಿತ್ರದ ಪವರ್ ಫುಲ್ ಆಗಿಲ್ಲ ಎಂದು ಅನೇಕರು ಹೇಳಿದ್ದು ಇದೆ. ಆದರೆ, ರವಿ ಬಸ್ರೂರು ಜೀವನದಲ್ಲಿ ಈ ಚಿತ್ರ ಬದಲಾವಣೆ ತಂದಿತ್ತು. ‘ಸಲಾರ್ ಸಿನಿಮಾ ರಿಲೀಸ್ ಆದ ಬಳಿಕ ನನಗೆ ಅಮೆರಿಕ ಪ್ರೊಡಕ್ಷನ್ ಹೌಸ್​ಗಳಿಂದ 3-4 ಫೋನ್​ಗಳು ಬಂದವು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
Image
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
Image
ವಿಷ್ಣು, ಉಪ್ಪಿ, ಶ್ರುತಿ ಜನ್ಮದಿನ; ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ರವಿ ಬಸ್ರೂರು ಅವರು ಸದ್ಯ ಸಾಕಷ್ಟು ಆಫರ್ ಪಡೆಯುತ್ತಿದ್ದಾರೆ. ಆದರೆ, ಮೊದಲಿನಷ್ಟು ಸಿನಿಮಾ ಹಿಟ್ ಆಗುತ್ತಿಲ್ಲ. ಈಗ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ ಸಿನಿಮಾ ಜೊತೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅವರು 3-4 ವರ್ಷನ್​ಗಳ ಮ್ಯೂಸಿಕ್​ನ ಕಂಪೋಸ್ ಮಾಡಿಯಾಗಿದೆ. ಅವರು ಈ ಬಾರಿ ನಿರೀಕ್ಷೆಯನ್ನು ಮೀರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: s‘ಸಲಾರ್’ ಸಂಗೀತ ಹಿಟ್ ಆಗದಿರಲು ‘ಕೆಜಿಎಫ್’ ಕಾರಣ: ರವಿ ಬಸ್ರೂರು ವಿಶ್ಲೇಷಣೆ ಏನು?

ರವಿ ಬಸ್ರೂರು ಅವರು ಸಿನಿಮಾ ನಿರ್ಮಾಣ, ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಪ್ರಯೋಗಾತ್ಮಕ ಸಿನಿಮಾಗಳನ್ನು ಅವರು ನಿರ್ದೇಶನ ಮಾಡುತ್ತಾರೆ. ಈ ಮೊದಲು ಸಣ್ಣ ಮಕ್ಕಳ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಪಾತ್ರಧಾರಿಗಳಿಗೆ ಯಶ್, ರಾಧಿಕಾ ಪಂಡಿತ್ ಮೊದಲಾದವರಿಂದ ವಾಯ್ಸ್ ಕೊಡಿಸಿದ್ದರು. ಆದರೆ, ಈ ಪ್ರಯತ್ನ ಯಶಸ್ಸು ಕಂಡಿರಲಿಲ್ಲ. ಈಗ ವೀರಚಂದ್ರಹಾಸ ಯಕ್ಷಗಾನ ಆಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು