ರವಿಚಂದ್ರನ್​ ಜನ್ಮದಿನ: ಪುತ್ರನ ‘ತ್ರಿವಿಕ್ರಮ’ ಚಿತ್ರದಿಂದ ಬಂತು ವಿಡಿಯೋ ಸಾಂಗ್​​; ಸಾಥ್​ ನೀಡಿದ ಶಿವಣ್ಣ

Ravichandran Birthday: ರವಿಚಂದ್ರನ್​ ಮತ್ತು ರಾಜ್​ಕುಮಾರ್​ ಕುಟುಂಬದ ನಡುವೆ ಮೊದಲಿನಿಂದಲೂ ಒಳ್ಳೆಯ ನಂಟು ಇದೆ. ವಿಕ್ರಮ್​ ರವಿಚಂದ್ರನ್​ ಅವರನ್ನು ಬಾಲ್ಯದಿಂದಲೇ ನೋಡುತ್ತ ಬಂದಿದ್ದಾರೆ ಶಿವಣ್ಣ.

ರವಿಚಂದ್ರನ್​ ಜನ್ಮದಿನ: ಪುತ್ರನ ‘ತ್ರಿವಿಕ್ರಮ’ ಚಿತ್ರದಿಂದ ಬಂತು ವಿಡಿಯೋ ಸಾಂಗ್​​; ಸಾಥ್​ ನೀಡಿದ ಶಿವಣ್ಣ
ವಿಕ್ರಮ್​, ರವಿಚಂದ್ರನ್​, ಆಕಾಂಕ್ಷಾ
Follow us
TV9 Web
| Updated By: ಮದನ್​ ಕುಮಾರ್​

Updated on: May 30, 2022 | 7:30 AM

‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರಿಗೆ ಇಂದು (ಮೇ 30) ಹುಟ್ಟುಹಬ್ಬದ ಸಂಭ್ರಮ. 61ನೇ ವಸಂತಕ್ಕೆ ಕಾಲಿಟ್ಟಿರುವ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬದವರು ಶುಭಾಶಯ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ರವಿಚಂದ್ರನ್​ (Ravichandran) ಅವರ ಸಾಧನೆ ದೊಡ್ಡದು. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಬಣ್ಣದ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ ಕನಸುಗಾರ ಅವರು. ಈಗ ಅವರ ಮಕ್ಕಳು ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಮೊದಲ ಪುತ್ರ ಮನೋರಂಜನ್​ ಈಗಾಗಲೇ ಕೆಲವು ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಈಗ ಎರಡನೇ ಪುತ್ರ ವಿಕ್ರಮ್​ ರವಿಚಂದ್ರನ್  (Vikram Ravichandran) ಅವರು ‘ತ್ರಿವಿಕ್ರಮ’ ಸಿನಿಮಾ ಮೂಲಕ ಹೀರೋ ಆಗಿ ಎಂಟ್ರಿ ನೀಡುತ್ತಿದ್ದಾರೆ. ರವಿಚಂದ್ರನ್​ ಅವರ​ ಜನ್ಮದಿನದ (Ravichandran Birthday) ಪ್ರಯುಕ್ತ ‘ತ್ರಿವಿಕ್ರಮ’ ಸಿನಿಮಾದ ‘ಪ್ಲೀಸ್​ ಮಮ್ಮಿ..’ ವಿಡಿಯೋ ಸಾಂಗ್​ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ರಿಲೀಸ್​ ಮಾಡಿರುವುದು ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಎಂಬುದು ವಿಶೇಷ. ವಿಕ್ರಮ್​ ರವಿಚಂದ್ರನ್​ಗೆ ಶಿವಣ್ಣ ಆಲ್​ ದಿ ಬೆಸ್ಟ್​ ಹೇಳಿದ್ದಾರೆ. ಅಲ್ಲದೇ, ವಿಕ್ರಮ್​ ಬಗ್ಗೆ ಒಂದೆರಡು ಮಾತುಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಕಾರಣಕ್ಕಾಗಿ ಈ ಬಾರಿಯ ‘ಕ್ರೇಜಿ ಸ್ಟಾರ್’ ಜನ್ಮದಿನ ವಿಶೇಷವಾಗಿದೆ.

ರವಿಚಂದ್ರನ್​ ಮತ್ತು ರಾಜ್​ಕುಮಾರ್​ ಕುಟುಂಬದ ನಡುವೆ ಮೊದಲಿನಿಂದಲೂ ಒಳ್ಳೆಯ ನಂಟು ಇದೆ. ವಿಕ್ರಮ್​ ಅವರನ್ನು ಬಾಲ್ಯದಿಂದಲೂ ನೋಡುತ್ತ ಬಂದಿದ್ದಾರೆ ಶಿವಣ್ಣ. ‘ರವಿ ಮತ್ತು ನಾನು ಒಟ್ಟಿಗೆ ಇಂಡಸ್ಟ್ರಿಗೆ ಬಂದವರು. ಆಗಿನಿಂದಲೂ ಒಳ್ಳೆಯ ಸ್ನೇಹಿತರು. ಈಗಾಗಲೇ ಮನು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗ ಹೀರೋ ಆಗಿ ವಿಕ್ಕಿ ಲಾಂಚ್ ಆಗ್ತಿರೋದು ಖುಷಿಯ ವಿಚಾರ. ಬಾಲನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡ ಅನುಭವ ವಿಕ್ಕಿಗೆ ಇದೆ. ನನ್ನದೇ ನಟನೆಯ ಸಿನಿಮಾದಲ್ಲಿ ನನ್ನ ಚಿಕ್ಕ ವಯಸ್ಸಿನ ಪಾತ್ರ ನಿಭಾಯಿಸಿದ್ದರು. ಈಗ ಹೀರೋ ಆಗ್ತಿರೋದಕ್ಕೆ ಖುಷಿ ಆಗ್ತಿದೆ. ನಾನು ಹಾಡು ಹಾಗೂ ಕೆಲವು ಸೀನ್ ನೋಡಿದ್ದೀನಿ. ವಿಕ್ಕಿ ಪಕ್ಕಾ ಮಾಸ್ ಲುಕ್ ಮತ್ತು ಚಾರ್ಮ್ ಇರುವಂಥ ನಟ. ‘ತ್ರಿವಿಕ್ರಮ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸಲಿ’ ಎಂದು ಶಿವರಾಜ್​ ಕುಮಾರ್​ ಹಾರೈಸಿದ್ದಾರೆ.

ಇದನ್ನೂ ಓದಿ: ರಿಲೀಸ್​ ದಿನಾಂಕ ಲಾಕ್​ ಮಾಡಿದ ‘ತ್ರಿವಿಕ್ರಮ’; ಜೂ.24ಕ್ಕೆ ಬರಲಿದೆ ವಿಕ್ರಮ್​ ರವಿಚಂದ್ರನ್​ ಸಿನಿಮಾ

ಇದನ್ನೂ ಓದಿ
Image
ಕ್ರೇಜಿಸ್ಟಾರ್ ರವಿಚಂದ್ರನ್​ಗೆ ಡಾಕ್ಟರೇಟ್ ಘೋಷಣೆ ಮಾಡಿದ ಬೆಂಗಳೂರು ನಗರ ವಿವಿ
Image
ರವಿಚಂದ್ರನ್​ಗೆ ‘ಹಳ್ಳಿ ಮೇಷ್ಟು’ ನೆನಪಿಸಿದ ‘ಬೈ ಟೂ ಲವ್​’; ಪ್ರೀ-ರಿಲೀಸ್​ ಇವೆಂಟ್​ನಲ್ಲಿ ‘ಕ್ರೇಜಿ ಸ್ಟಾರ್​’ ಮಸ್ತ್​ ಮಾತು
Image
ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..
Image
Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

ಈ ಸಿನಿಮಾದಲ್ಲಿ ವಿಕ್ಕಿಗೆ ಜೋಡಿಯಾಗಿ ಆಕಾಂಕ್ಷಾ ಶರ್ಮಾ ನಟಿಸಿದ್ದಾರೆ. ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ. ಪ್ರಕಾಶ್ ಸಂಕಲನವಿದೆ. ಅರ್ಜುನ್​ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಮೊದಲು ರಿಲೀಸ್​ ಆಗಿದ್ದ ‘ಪ್ಲೀಸ್​ ಮಮ್ಮಿ..’ ಲಿರಿಕಲ್​ ಸಾಂಗ್ 75 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿತ್ತು. ಈಗ ವಿಡಿಯೋ ಸಾಂಗ್​ ಸದ್ದು ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ