AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?

2020ರ ಫೆಬ್ರವರಿಯಲ್ಲಿ ನಟಿ ನಿವೇದಿತಾ ಗೌಡ ಮತ್ತು ಗಾಯಕ ಚಂದನ್​ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 4 ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರದಲ್ಲಿ ನಿವೇದಿತಾ ಗೌಡ ಅವರಿಗೆ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಈಗ ವಿಚ್ಛೇದನ ಪಡೆದಿದ್ದಾರೆ.

ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?
ಚಂದನ್​ ಶೆಟ್ಟಿ, ನಿವೇದಿತಾ ಗೌಡ
ಮದನ್​ ಕುಮಾರ್​
|

Updated on: Jun 07, 2024 | 6:11 PM

Share

ಖ್ಯಾತ ಗಾಯಕ ಚಂದನ್​ ಶೆಟ್ಟಿ ಮತ್ತು ರೀಲ್ಸ್​ ಬೆಡಗಿ ನಿವೇದಿತಾ ಗೌಡ (Niveditha Gowda) ಅವರ ಸಂಸಾರದಲ್ಲಿ ಬಿರುಕು ಉಂಟಾಗಿರುವುದು ಖಚಿತವಾಗಿದೆ. ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಇಬ್ಬರೂ ಅರ್ಜಿ ಸಲ್ಲಿಸಿ ಡಿವೋರ್ಸ್​ (Chandan Shetty Niveditha Gowda Divorce) ಪಡೆದಿದ್ದಾರೆ. ವಿಚಾರಣೆ ಸಲುವಾಗಿ ಅವರು ಇಂದು (ಜೂನ್​ 7) ಕೋರ್ಟ್​ಗೆ ಆಗಮಿಸಿದ್ದರು. ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರಿಗೆ ಫ್ಯಾಮಿಲಿ ಕೋರ್ಟ್​ ವಿಚ್ಛೇದನ ಮಂಜೂರು ಮಾಡಿದೆ. ಅಷ್ಟಕ್ಕೂ ಈ ದಂಪತಿಯ ನಡುವೆ ಕಿರಿಕ್​ ಆಗಿದ್ದು ಯಾಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಆ ಬಗ್ಗೆ ಮಾಹಿತಿ ಕೇಳಿಬಂದಿದೆ. ಮಗು ಪಡೆಯುವ ವಿಚಾರಕ್ಕೆ ಚಂದನ್​ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ನಡುವೆ ಮನಸ್ತಾಪ ಆಗಿದೆ ಎನ್ನಲಾಗಿದೆ.

2020ರ ಫೆಬ್ರವರಿಯಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಆಗಿ ನಾಲ್ಕು ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರಕ್ಕೆ ನಿವೇದಿತಾ ಗೌಡ ಅವರ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಹಾಗಾಗಿ ಅವರಿಬ್ಬರು ಡಿವೋರ್ಸ್​ ಪಡೆದರು ಎಂಬ ಮಾಹಿತಿ ಕೇಳಿಬಂದಿದೆ.

ಸಂಸಾರದಲ್ಲಿ ಮನಸ್ತಾಪ ಉಂಟಾದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಡುವೆ ಸಂಧಾನ ಮಾಡಿಸಲು ಆಪ್ತರು ಪ್ರಯತ್ನಿಸಿದ್ದರು. ಸಂಧಾನ ಸಫಲವಾಗದ ಹಿನ್ನೆಲೆಯಲ್ಲಿ ಅವರಿಬ್ಬರು ಕೋರ್ಟ್‌ ಮೆಟ್ಟಿಲು ಏರಿದರು. ಈ ವಿಚಾರದಲ್ಲಿ ಅವರಿಬ್ಬರು ಮುನಿಸಿಕೊಂಡಿಲ್ಲ. ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದಾಗ ಅವರಿಬ್ಬರು ಕೋರ್ಟ್‌ ಹಾಲ್‌ನಲ್ಲಿ ಪರಸ್ಪರ ನಗುತ್ತಲೇ ಅಕ್ಕಪಕ್ಕ ಕುಳಿತಿದ್ದರು! ಆದರೆ ಯಾವುದೇ ಕಾರಣಕ್ಕೂ ಜೊತೆಯಾಗಿ ಬಾಳಲು ಅವರು ಒಪ್ಪಲಿಲ್ಲ. ವಿಚ್ಛೇದನದ ಷರತ್ತುಗಳ ಬಗ್ಗೆ ಒಪ್ಪಂದ ಮಾಡಿಕೊಂಡರು. ಸೆಕ್ಷನ್ 13ಬಿ ಅಡಿಯಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದಾರೆ.

ಇದನ್ನೂ ಓದಿ: ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ

2017ರಲ್ಲಿ ಪ್ರಸಾರ ಕಂಡ ‘ಬಿಗ್​ ಬಾಸ್​ ಕನ್ನಡ’ 5ನೇ ಸೀಸನ್​ನಲ್ಲಿ​ ನಿವೇದಿತಾ ಗೌಡ-ಚಂದನ್​ ಶೆಟ್ಟಿ ಪರಸ್ಪರ ಪರಿಚಯ ಆಗಿದ್ದರು. ಇಬ್ಬರ ಸ್ನೇಹ ನಂತರ ಪ್ರೀತಿಗೆ ತಿರುಗಿತು. ಮೈಸೂರು ಯುವ ದಸರಾ ವೇದಿಕೆಯಲ್ಲಿ ನಿವೇದಿತಾ ಗೌಡಗೆ ಚಂದನ್​ ಶೆಟ್ಟಿ ಅವರು ಮ್ಯಾರೇಜ್​ ಪ್ರಪೋಸ್​ ಮಾಡಿದ್ದರು. ಆ ಘಟನೆಯಿಂದ ವಿವಾದ ಕೂಡ ಆಗಿತ್ತು. ಬಳಿಕ 2020ರಲ್ಲಿ ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!