AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಡೈರೆಕ್ಟರ್ ಕ್ಯಾಪ್ ತೊಡಲು ಸಜ್ಜಾದ ಉಪೇಂದ್ರ; ಶೀಘ್ರದಲ್ಲೇ ಹೊಸ ಸಿನಿಮಾ ಘೋಷಣೆ

ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಸದ್ಯ ಹೊಸ ಸ್ಕ್ರಿಪ್ಟ್ ಬರೆಯುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಕೈಯಲ್ಲಿರುವ ಎರಡು ಸಿನಿಮಾಗಳ ಶೂಟಿಂಗ್ ಮುಗಿದ ತಕ್ಷಣ ನಿರ್ದೇಶನ ಶುರುವಾಗಲಿದೆ. ಇದರ ಜೊತೆಗೆ ಮಗ ಆಯುಷ್ ಮೊದಲ ಚಿತ್ರಕ್ಕೆ ಪತ್ನಿ ಪ್ರಿಯಾಂಕಾ ಉಪೇಂದ್ರ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಮತ್ತೆ ಡೈರೆಕ್ಟರ್ ಕ್ಯಾಪ್ ತೊಡಲು ಸಜ್ಜಾದ ಉಪೇಂದ್ರ; ಶೀಘ್ರದಲ್ಲೇ ಹೊಸ ಸಿನಿಮಾ ಘೋಷಣೆ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Nov 25, 2026 | 1:02 PM

Share

ಮುಖ್ಯಾಂಶಗಳು

  • ‘ಯುಐ’ ಬಳಿಕ ಮತ್ತೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾದ ರಿಯಲ್ ಸ್ಟಾರ್
  • ಮಗ ಆಯುಷ್ ಸಿನಿಮಾಗೆ ಪ್ರಿಯಾಂಕಾ ಉಪೇಂದ್ರ ನಿರ್ದೇಶನ
  • ಪ್ರಭುದೇವ ಜೊತೆ 24 ವರ್ಷಗಳ ಬಳಿಕ ಉಪ್ಪಿ ರೀ-ಯೂನಿಯನ್

ಉಪೇಂದ್ರ ಅವರು ನಟನೆಯ ಜೊತೆಗೆ ನಿರ್ದೇಶನದಲ್ಲೂ ಬ್ಯುಸಿ ಇದ್ದಾರೆ. ‘ಯುಐ’ ಸಿನಿಮಾ ಬಳಿಕ ಅವರು ನಿರ್ದೇಶನದ ಬಗ್ಗೆ ಅಷ್ಟಾಗಿ ಗಮನ ಹರಿಸಿರಲಿಲ್ಲ. ಅವರು ಕೇವಲ ನಟನೆಯಲ್ಲಿ ಬ್ಯುಸಿ ಇದ್ದರು. ‘ನಿರ್ದೇಶನ ಯಾವಾಗ’ ಎಂದು ಪ್ರಶ್ನೆ ಮಾಡುತ್ತಾ ಇರುವವರಿಗೆ ಉತ್ತರ ಸಿಕ್ಕಿದೆ. ಉಪ್ಪಿ ಅವರು ಹೊಸ ಕಥೆ ಹೆಣೆಯುತ್ತಿದ್ದಾರೆ ಎನ್ನಲಾಗಿದೆ. ಶೂಟಿಂಗ್ ಬಿಡುವಿನ ವೇಳೆಯಲ್ಲಿ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಅಭಿಮಾನಿಗಳಲ್ಲಿ ಈ ಸುದ್ದಿ ಭಾರೀ ಕುತೂಹಲ ಮೂಡಿಸಿದೆ.

ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ತಮ್ಮ ಮುಂದಿನ ನಿರ್ದೇಶನದ ಬಗ್ಗೆ ಉಪೇಂದ್ರ ಮುಕ್ತವಾಗಿ ಮಾತನಾಡಿದ್ದಾರೆ. ‘ಸದ್ಯ ನಾನು ಹೊಸ ಸ್ಕ್ರಿಪ್ಟ್ ಕೆಲಸದಲ್ಲಿ ತೊಡಗಿದ್ದೇನೆ. ಸದ್ಯ ಕೈಯಲ್ಲಿರುವ ಎರಡು ಸಿನಿಮಾಗಳ ಶೂಟಿಂಗ್ ಮುಗಿಯಬೇಕಿದೆ. ಆ ಬಳಿಕ ನನ್ನ ನಿರ್ದೇಶನದ ಕೆಲಸ ಶುರುವಾಗಲಿದೆ. ಸಿನಿಮಾ ಘೋಷಣೆ ಮಾಡಿದ ತಕ್ಷಣ ಕಥೆಯ ಸುಳಿವು ನಿಮಗೆ ಸಿಗಲಿದೆ’ ಎಂದು ಉಪ್ಪಿ ಹೇಳಿದ್ದಾರೆ. ಇದನ್ನು ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದೇ ವೇಳೆ ಪುತ್ರ ಆಯುಷ್ ಸಿನಿಮಾ ಎಂಟ್ರಿ ಬಗ್ಗೆಯೂ ಉಪ್ಪಿ ಮಾಹಿತಿ ಹಂಚಿಕೊಂಡಿದ್ದಾರೆ. ಮಗನ ಮೊದಲ ಸಿನಿಮಾದ ಕಥೆಯ ಚರ್ಚೆಯಲ್ಲಿ ಉಪ್ಪಿ ಕೂಡ ಭಾಗಿ ಆಗಿದ್ದರು. ವಿಶೇಷ ಎಂದರೆ ಈ ಚಿತ್ರಕ್ಕೆ ಪತ್ನಿ ಪ್ರಿಯಾಂಕಾ ಉಪೇಂದ್ರ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರಿಯಾಂಕಾ ಈ ಸಿನಿಮಾ ಮೂಲಕ ನಿರ್ದೇಶಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದಾರೆ.

ಸದ್ಯ ಉಪೇಂದ್ರ ನಟನೆಯಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳು ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಶೂಟಿಂಗ್‌ಗಾಗಿ ಚಿಕ್ಕಮಗಳೂರಿನಿಂದ ಕೊಡೈಕೆನಾಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಇದು ನೇರವಾಗಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವ ಚಿತ್ರವಾಗಿದೆ. ಹುಲಿವೇಷ ಕಲೆಯ ಹಿನ್ನೆಲೆಯ ಕಥೆ ಇದರಲ್ಲಿದೆ. ಈ ಚಿತ್ರದಲ್ಲಿ ಪ್ರಭುದೇವ ಹಾಗೂ ಅಥರ್ವ ಕೂಡ ನಟಿಸುತ್ತಿದ್ದಾರೆ. 24 ವರ್ಷಗಳ ಬಳಿಕ ಉಪ್ಪಿ ಮತ್ತು ಪ್ರಭುದೇವ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಎಲ್ಲರ ಎದುರು ಪ್ರಿಯಾಂಕಾ ಉಪೇಂದ್ರಗೆ ಕ್ಷಮೆ ಕೇಳಿದ ನಿರ್ದೇಶಕ ಪುರುಷೋತ್ತಮ್

ಕನ್ನಡದಲ್ಲೂ ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಅರವಿಂದ್ ಕೌಶಿಕ್ ಈ ಆ್ಯಕ್ಷನ್ ಡ್ರಾಮಾವನ್ನು ನಿರ್ದೇಶಿಸುತ್ತಿದ್ದಾರೆ. ತರುಣ್ ಶಿವಪ್ಪ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿಬರಲಿದೆ. ಆರಾಧನಾ ರಾಮ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಜೊತೆ ಉಪ್ಪಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ