Reba Monica John: ಬೆಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ರತ್ನನ್ ಪ್ರಪಂಚ’ ಬೆಡಗಿ ರೆಬಾ ಮೋನಿಕಾ ಜಾನ್

Reba Monica John Marriage: ರೆಬಾ ಮಾನಿಕಾ ಜಾನ್ ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜನವರಿ 9ರಂದು ಬೆಂಗಳೂರಿನಲ್ಲಿ ಅವರು ವಿವಾಹವಾಗಿದ್ದಾರೆ.

Reba Monica John: ಬೆಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ರತ್ನನ್ ಪ್ರಪಂಚ’ ಬೆಡಗಿ ರೆಬಾ ಮೋನಿಕಾ ಜಾನ್
ರೆಬಾ ಮೋನಿಕಾ ಜಾನ್ ಮತ್ತು ಜೋಮೋನ್ ವಿವಾಹದ ಸಂದರ್ಭದ ಚಿತ್ರ
Follow us
TV9 Web
| Updated By: shivaprasad.hs

Updated on: Jan 12, 2022 | 4:54 PM

‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾದ ರೆಬಾ ಮೋನಿಕಾ ಜಾನ್ (Reba Monica John) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ (Joemon) ಅವರೊಂದಿಗೆ ಜನವರಿ 9ರಂದು ರೆಬಾ ವಿವಾಹವಾಗಿದ್ದು, ಬೆಂಗಳೂರಿನ ಬ್ರಿಗೇಡ್​ ರಸ್ತೆಯ ಚರ್ಚ್​ನಲ್ಲಿ ಸಮಾರಂಭ ನೆರವೇರಿದೆ. ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಶೇರ್ ಮಾಡಿರುವ ನಟಿ, ಈ ಮೂಲಕ ಎಲ್ಲರೊಡನೆ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಮಲಯಾಳಂ, ತಮಿಳು ಸೇರಿದಂತೆ ವಿವಿಧ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೆಬಾಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಶುಭ ಕೋರಿದ್ದಾರೆ.

ವಿವಾಹದ ಕುರಿತು ರೆಬಾ ಹಂಚಿಕೊಂಡ ಪೋಸ್ಟ್: 

ರೆಬಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2016ರಲ್ಲಿ. ಮಲಯಾಳಂನ ‘ಜಾಕೋಬಿಂಟೆ ಸ್ವರ್ಗರಾಜ್ಯಂ’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ನಂತರ ‘ಮಿಖಾಯೆಲ್’, ’ಫೊರೆನ್ಸಿಕ್’ ಮೊದಲಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ತಮಿಳಿನಲ್ಲಿ ವಿಜಯ್ ನಟನೆಯ ‘ಬಿಗಿಲ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಬಣ್ಣಹಚ್ಚಿದ್ದರು. ‘ಎಫ್​ಐಆರ್’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ರೋಹಿತ್ ಪದಕಿ ನಿರ್ದೇಶನ ಹಾಗೂ ಧನಂಜಯ ನಟನೆಯ ‘ರತ್ನನ್ ಪ್ರಪಂಚ’ದ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದರು. ಅವರ ಪಾತ್ರ ಪೋಷಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ರೆಬಾ ಮೋನಿಕಾ ಜಾನ್ ಅವರು ಮಲಯಾಳಿಯಾದರೂ ಬೆಂಗಳೂರಿನಲ್ಲೇ ಹುಟ್ಟಿಬೆಳೆದವರು. ಕನ್ನಡ ಓದಲು ಹಾಗೂ ಬರೆಯಲು ಕೂಡ ಅವರಿಗೆ ಬರುತ್ತದೆ. ಈ ಹಿಂದೆ ಸಂದರ್ಶನವೊಂದರಲ್ಲಿ ನೆಚ್ಚಿನ ಸ್ಥಳ ಯಾವುದು ಎಂಬ ಪ್ರಶ್ನೆಗೆ, ಎಲ್ಲರಿಗೂ ಅಂತಿಮವಾಗಿ ಅವರವರ ಮನೆಯೇ ಇಷ್ಟವಾಗುತ್ತದೆ. ಹಾಗಾಗಿ ನನಗೆ ಬೆಂಗಳೂರೇ ಅಚ್ಚುಮೆಚ್ಚು ಎಂದಿದ್ದರು. ಇದೀಗ ರೆಬಾ ತಮ್ಮ ಗೆಳೆಯ ಜೋಮೋನ್ ಜತೆ ಬೆಂಗಳೂರಿನಲ್ಲೇ ವಿವಾಹವಾಗಿದ್ದಾರೆ. ಅವರು ಮತ್ತಷ್ಟು ಕನ್ನಡದ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿ ಎಂಬ ಕೋರಿಕೆ ಅಭಿಮಾನಿಗಳದ್ದು.

ಇದನ್ನೂ ಓದಿ:

Rathnan Prapancha Movie Review: ಸಂಬಂಧಗಳ ಅರ್ಥ ತಿಳಿಯಲು ಪ್ರಪಂಚ ಸುತ್ತಿದ ರತ್ನ; ಧನಂಜಯ ಖಾತೆಗೆ ಇನ್ನೊಂದು ಭಿನ್ನ ಸಿನಿಮಾ

ಮನಸ್ಸು ಬದಲಾಯಿಸಿದ ಕೆಜಿಎಫ್ ಬೆಡಗಿ; ಭಾರತದ ಸಮುದ್ರ ತಟದಲ್ಲೇ ನೆರವೇರಲಿದೆ ಅದ್ದೂರಿ ಕಲ್ಯಾಣ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು