ಎಂಟು ಭಾಷೆ, 2000 ಥಿಯೇಟರ್​; ದಾಖಲೆ ಬರೆಯಲು ರೆಡಿ ಆದ ‘ರೆಕಾರ್ಡ್​ ಬ್ರೇಕ್’ ಸಿನಿಮಾ

ಚಲದವಾಡ ಶ್ರೀನಿವಾಸರಾವ್ ಅವರು ಸಿನಿಮಾ ರಂಗದಲ್ಲಿ ಖ್ಯಾತಿ ಪಡೆದಿದ್ದಾರೆ. ತೆಲುಗಿನಲ್ಲಿ ಅನೇಕ ಸಿನಿಮಾಗಳನ್ನು ಇವರು ನಿರ್ಮಾಣ ಮಾಡಿದ್ದಾರೆ. 2 ಸಾವಿರಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ಅನುಭವ ಅರಿಗೆ ಇದೆ. ‘ರೆಕಾರ್ಡ್ ಬ್ರೇಕ್’ ಚಿತ್ರವನ್ನು ಅವರೇ ನಿರ್ದೇಶಿಸಿ, ನಿರ್ಮಿಸಿದ್ದಾರೆ. ಈ ಚಿತ್ರದ ಕುರಿತು ಮಾಹಿತಿ ನೀಡಲು ತಂಡ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿದೆ.

ಎಂಟು ಭಾಷೆ, 2000 ಥಿಯೇಟರ್​; ದಾಖಲೆ ಬರೆಯಲು ರೆಡಿ ಆದ ‘ರೆಕಾರ್ಡ್​ ಬ್ರೇಕ್’ ಸಿನಿಮಾ
ರೆಕಾರ್ಡ್ ಬ್ರೇಕ್ ತಂಡ
Follow us
ರಾಜೇಶ್ ದುಗ್ಗುಮನೆ
|

Updated on: Feb 26, 2024 | 10:36 AM

ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚೆಚ್ಚು ರಿಲೀಸ್ ಆಗುತ್ತಿವೆ. ಒಂದು ಭಾಷೆಯಲ್ಲಿ ಸಿದ್ಧವಾಗಿ ಉಳಿದ ಭಾಷೆಗಳಿಗೆ ಸಿನಿಮಾನ ಡಬ್ ಮಾಡುವ ಕೆಲಸ ಆಗುತ್ತಿದೆ. ಈಗ ‘ರೆಕಾರ್ಡ್ ಬ್ರೇಕ್’ ಸಿನಿಮಾ (Record Break Movie) ಬರೋಬ್ಬರಿ ಎಂಟು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಮಹಾ ಶಿವರಾತ್ರಿಯ ಪ್ರಯುಕ್ತ ಮಾರ್ಚ್ 8ರಂದು ಸಿನಿಮಾ ದೇಶಾದ್ಯಂತ ರಿಲೀಸ್ ಆಗುತ್ತಿದೆ. ವಿಶೇಷ ಎಂದರೆ ಎರಡು ಸಾವಿರಕ್ಕೂ ಅಧಿಕ ಥಿಯೇಟರ್​ಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ.

ಚಲದವಾಡ ಶ್ರೀನಿವಾಸರಾವ್ ಅವರು ಸಿನಿಮಾ ರಂಗದಲ್ಲಿ ದೊಡ್ಡ ಖ್ಯಾತಿ ಪಡೆದಿದ್ದಾರೆ. ತೆಲುಗಿನಲ್ಲಿ ಅನೇಕ ಸಿನಿಮಾಗಳನ್ನು ಇವರು ನಿರ್ಮಿಸಿದ್ದಾರೆ. ಎರಡು ಸಾವಿರಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ಅನುಭವ ಅರಿಗೆ ಇದೆ. ‘ರೆಕಾರ್ಡ್ ಬ್ರೇಕ್’ ಚಿತ್ರವನ್ನು ಅವರೇ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದ ಕುರಿತು ಮಾಹಿತಿ ನೀಡಲು ತಂಡ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿದೆ.

‘ನನ್ನದು ಟಿಂಬರ್ ಉದ್ಯಮ. ಅಯೋಧ್ಯೆಯಲ್ಲಿ ರಾಮನ ದೇವಸ್ಥಾನ ನಿರ್ಮಾಣಕ್ಕೆ ನಾನೇ ಮರ ಒದಗಿಸಿದ್ದೇವೆ. ನಾವು ನೂರಾರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇವೆ. ಹಲವು ಸಿನಿಮಾಗಳನ್ನು ವಿತರಣೆ ಕೂಡ ಮಾಡಿದ್ದೇವೆ. ಹಣ ಮಾಡುವುದಕ್ಕಿಂತ ಒಳ್ಳೆಯ ಸಿನಿಮಾ ನೀಡಬೇಕು ಎಂಬ ಉದ್ದೇಶ ನನ್ನದು’ ಎಂದಿದ್ದಾರೆ ಶ್ರೀನಿವಾಸರಾವ್.

ಚಂಟಿ ಹಾಗೂ ಬಂಟಿ ಎಂಬ ಅನಾಥ ಹುಡುಗರ ಕಥೆ ಇದು. ಅವರು ಅಂದುಕೊಂಡಿದ್ದನ್ನು ಸಾಧಿಸುತ್ತಾರೆ. ಯಾರೂ ನಿರೀಕ್ಷಿಸಿದ ಸಾಧನೆ ಮಾಡುತ್ತಾರೆ. ಖ್ಯಾತ ನಟಿ ಜಯಸುಧಾ ಮಗ ನಿಹಾರ್ ಹಾಗೂ ಹೊಸ ಪ್ರತಿಭೆ ನಾಗಾರ್ಜುನ ಚಂಟಿ ಹಾಗೂ ಬಂಟಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಗ್ದಾ ಇಫ್ತೇಕರ್ ನಾಯಕಿ. ಸಂಜನಾ, ಸತ್ಯಕೃಷ್ಣ ಮೊಲದಾದವರು ಸಿನಿಮಾದಲ್ಲಿದ್ದಾರೆ.

ಇದನ್ನೂ ಓದಿ: ‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ

‘ರೆಕಾರ್ಡ್ ಬ್ರೇಕ್’ ಸಿನಿಮಾ ತೆಲುಗು ಮಾತ್ರವಲ್ಲದೆ ಕನ್ನಡ, ಮಲಯಾಳಂ, ತಮಿಳು, ಹಿಂದಿ, ಬೆಂಗಾಲಿ, ಭೋಜಪುರಿ, ಒಡಿಯಾ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಎರಡು ಸಾವಿರಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಬಿಡುಗಡೆಯಾಗಲಿದೆ ಅನ್ನೋದು ವಿಶೇಷ. ನಿರ್ದೇಶಕ ಅಜಯ್ ಕುಮಾರ್ ಈ ಚಿತ್ರಕ್ಕೆ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​