ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ

ನಟನೆಯ ಜೊತೆಗೆ ಅವರು ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರಿಗೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕಿರುತೆರೆ. 'ಜನನಿ' ಧಾರಾವಾಹಿಯ ಮೂಲಕ ನಟನೆ ಆರಂಭಿಸಿದ ಅವರು ನಂತರ ನಿರ್ಮಾಪಕರಾಗಿ ಯಶಸ್ವಿಯಾದರು. ತಮ್ಮ ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಸಂಸ್ಥೆಯಡಿ ಅನೇಕ ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿದರು.

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ
ದಿಲೀಪ್ ರಾಜ್ ನಿಧನ
Edited By:

Updated on: May 13, 2026 | 12:38 PM

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ.

ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ ಹೆಸರಿನ ಪಾತ್ರವನ್ನು ಮಾಡಿದ್ದರು. ಕೇವಲ ಕಿರುತೆರೆಗೆ ಸೀಮಿತವಾಗದೆ, ಉತ್ತಮ ಸಿನಿಮಾಗಳ ಮೂಲಕವೂ ಪ್ರೇಕ್ಷಕರನ್ನು ತಲುಪಿದ್ದರು. ‘ಮಿಲನ’ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ ನಟಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು. ‘ಪರಿಚಯ’, ‘ನನ್ನಿ ಪಾರು’, ‘ಬಾರ್ಡರ್’, ಮತ್ತು ‘ಪಂಚಾಮೃತ’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ನಟನೆಯ ಜೊತೆಗೆ ಅವರು ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರಿಗೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕಿರುತೆರೆ. ‘ಜನನಿ’ ಧಾರಾವಾಹಿಯ ಮೂಲಕ ನಟನೆ ಆರಂಭಿಸಿದ ಅವರು ನಂತರ ನಿರ್ಮಾಪಕರಾಗಿ ಯಶಸ್ವಿಯಾದರು.

ತಮ್ಮ ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಸಂಸ್ಥೆಯಡಿ ಅನೇಕ ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿದರು. ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಇವರ ನಿರ್ಮಾಣದ ಅತಿದೊಡ್ಡ ಯಶಸ್ಸು. ಇದರಲ್ಲಿ ಅವರು ‘ಅಭಿರಾಮ್ ಜಯಶಂಕರ್’ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ಇದರ ಹೊರತಾಗಿ ‘ಪಾರು’ ಸೇರಿದಂತೆ ಹಲವು ಸೀರಿಯಲ್​ಗಳಿಗೆ ಇವರು ಕೆಲಸ ಮಾಡಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕೃಷ್ಣ ರುಕ್ಕು’ ಧಾರಾವಾಹಿಯನ್ನು ಅವರು ನಿರ್ಮಾಣ ಮಾಡುತ್ತಿದ್ದರು ಹಾಗೂ ಇದಕ್ಕೆ ಕ್ರಿಯೇಟಿವ್ ಹೆಡ್ ಕೂಡ ಹೌದು. ಇತ್ತೀಚೆಗೆ ತೆರೆಗೆ ಬಂದ ‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿ ಅವರು ಲಾಯರ್ ಪಾತ್ರ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ದಿಲೀಪ್ ರಾಜ್ ಅವರು ಕೇವಲ ಒಬ್ಬ ಕಲಾವಿದರಾಗಿರದೆ, ಶಿಸ್ತು ಮತ್ತು ಸಮಯಪ್ರಜ್ಞೆಗೆ ಹೆಸರಾದವರು. ಅವರ ನಗುಮುಖದ ವ್ಯಕ್ತಿತ್ವ ಮತ್ತು ಕಲಾಬದುಕು ಎಂದಿಗೂ ಅಭಿಮಾನಿಗಳ ನೆನಪಿನಲ್ಲಿರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸೋಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:24 am, Wed, 13 May 26

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us