AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಮಸೂದೆ ಹಿಂಪಡೆಯಿರಿ, ಮತಾಂತರ ವಿರೋಧಿ ಮಸೂದೆ ತೆಗೆಯಿರಿ: ಹೊಸ ಸರ್ಕಾರಕ್ಕೆ ಚೇತನ್ ಅಹಿಂಸಾ ಬೇಡಿಕೆ

Chetan Ahimsa: ಕರ್ನಾಟಕ ಹೊಸ ಸರ್ಕಾರ ರಚನೆಯಾಗುತ್ತಿದೆ. ಈ ಸಂದರ್ಭದಲ್ಲಿ ನಟ, ಹೋರಾಟಗಾರ ಚೇತನ್ ಅಹಿಂಸ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಗೋಹತ್ಯೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಹಿಂಪಡೆಯಿರಿ, ಮತಾಂತರ ವಿರೋಧಿ ಮಸೂದೆ ತೆಗೆಯಿರಿ: ಹೊಸ ಸರ್ಕಾರಕ್ಕೆ ಚೇತನ್ ಅಹಿಂಸಾ ಬೇಡಿಕೆ
ಚೇತನ್ ಅಹಿಂಸ
ಮಂಜುನಾಥ ಸಿ.
|

Updated on: May 18, 2023 | 7:01 PM

Share

ಕರ್ನಾಟಕದಲ್ಲಿ ಹೊಸ ಸರ್ಕಾರ (Karnataka Government) ಅಧಿಕಾರಕ್ಕೆ ಏರಲಿದೆ. ಸಿಎಂ ಯಾರಾಗಬೇಕೆಂಬ ಗೊಂದಲ ನಿವಾರಣೆಯಾಗಿದ್ದು, ರಾಜ್ಯಪಾಲರ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಾಗಿದೆ. ಅನೌಪಚಾರಿಕ ಶಾಸಕಾಂಗ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಹೊಸ ಸರ್ಕಾರದ ಬಳಿ ಹಲವರು ಬೇಡಿಕೆಗಳನ್ನು ಇಡುತ್ತಿದ್ದಾರೆ. ನಟ, ಹೋರಾಟಗಾರ ಚೇತನ್ ಅಹಿಂಸ (Chetan Ahimsa) ಸಹ ಹೊಸ ಸರ್ಕಾರದ ಮುಂದೆ ಒತ್ತಾಯವೊಂದನ್ನು ಇರಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿರುವ ಚೇತನ್ ಅಹಿಂಸಾ, ಈ ಹಿಂದಿನ ಸರ್ಕಾರ ತಂದಿದ್ದ, ಗೋಹತ್ಯೆ ವಿರೋಧಿ ಮಸೂದೆ ಮತ್ತು ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕಬೇಕು ಎಂದಿದ್ದಾರೆ. ಮಾತ್ರವಲ್ಲದೆ ಹಿಂದಿನ ಬಿಜೆಪಿ ಸರ್ಕಾರ ರದ್ದು ಮಾಡಿದ್ದ 4% ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು. ಪರಿಶಿಷ್ಟ ಪಂಗಡ ಒಳ ಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು ಎಂದು ಸಹ ಒತ್ತಾಯಿಸಿದ್ದಾರೆ.

2021 ರಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಚರ್ಚೆಯ ಬಳಿಕ ಗೋಹತ್ಯೆ ಕಾಯ್ದೆಯನ್ನು ತರಲಾಗಿತ್ತು. ಆಗಲೂ ಚೇತನ್ ಅಹಿಂಸ ಈ ಕಾಯ್ದೆಯನ್ನು ವಿರೋಧಿಸಿದ್ದರು. ಇನ್ನು ಮತಾಂತರ ನಿಷೇಧ ಕಾಯ್ದೆಯೂ ಸಹ ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ಮತಾಂತರ ನಿಷೇಧ ಕಾಯ್ದೆಯು ವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ಚೇತನ್ ಅಹಿಂಸ ಸೇರಿದಂತೆ ಹಲವರು ಆಕ್ಷೇಪವ್ಯಕ್ತಪಡಿಸಿದ್ದರು. ಆದರೆ ಮತಾಂತರಕ್ಕೆ ಒಪ್ಪಿಗೆ ಇದೆ ಆದರೆ ಬಲವಂತದ ಮತಾಂತರಕ್ಕೆ ನಿಷೇಧ ಹೇರುತ್ತಿದ್ದೇವೆ ಎಂದು ಆಡಳಿತ ಸರ್ಕಾರ ವಿವರಣೆ ನೀಡಿತ್ತು.

ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಜಾತಿ ಗಣತಿ ಮಾಡಲಾಗಿತ್ತು. ಆದರೆ ಅವರು ಅದನ್ನು ಬಹಿರಂಗಪಡಿಸಿರಲಿಲ್ಲ. ಆ ಬಳಿಕ ಬಂದ ಬಿಜೆಪಿ ಸರ್ಕಾರವೂ ಸಹ ಜಾತಿ ಗಣತಿ ಬಹಿರಂಗಪಡಿಸಲಿಲ್ಲ. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು ಎಂದು ಆಗಿನಿಂದಲೂ ಹಲವರು ಒತ್ತಾಯಿಸುತ್ತಲೇ ಇದ್ದಾರೆ. ಇದೀಗ ಚೇತನ್ ಅಹಿಂಸ ಈ ಬಗ್ಗೆಯೂ ನೂತನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು ಎಂಬ ಗೊಂದಲ ಏರ್ಪಟ್ಟಿದ್ದ ಬಗ್ಗೆ ನಿನ್ನೆ (ಮೇ 17) ಅಭಿಪ್ರಾಯ ಹಂಚಿಕೊಂಡಿದ್ದ ಚೇತನ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಜಟಾಪಟಿ ಎಂದರೆ ಸ್ಪರ್ಧಿಗಳು ಪ್ರಬಲರಾಗಿದ್ದಾರೆ ಎಂದರ್ಥವಲ್ಲ, ಬದಲಿಗೆ, ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ಇಂತಹ ಸುದೀರ್ಘ ಪವರ್‌ಪ್ಲೇಗಳು ಇಂದಿನ ಬಿಜೆಪಿಯಲ್ಲಿ ನಡೆಯುವುದಿಲ್ಲ. ಪರಿಪೂರ್ಣ ಮಾದರಿಯಲ್ಲಿ, ಕರ್ನಾಟಕದ ಜನರಿಗೆ ಸಂವೇದನಾಶೀಲ ಮತ್ತು ಬಲವಾದ ಕರ್ನಾಟಕದ ‘ಹೈಕಮಾಂಡ್’ ಅಗತ್ಯವಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ದೆಹಲಿಯ ಹೈಕಮಾಂಡ್ ಅಲ್ಲ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ