Renuka Sharma Death: ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾದಿಂದ ನಿಧನ

ನಿರ್ದೇಶಕ ರೇಣುಕಾ ಶರ್ಮಾ ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿತ್ತು. ಗಿರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Renuka Sharma Death: ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾದಿಂದ ನಿಧನ
ಕವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ

Updated on: May 06, 2021 | 10:20 AM

ಚಂದನವನದ ಹಿರಿಯ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾ ವೈರಸ್​ನಿಂದ ಅಸುನೀಗಿದ್ದಾರೆ. ಬುಧವಾರ (ಮೇ 5) ರಾತ್ರಿ ಅವರು ನಿಧನರಾದರು. ಕನ್ನಡ ಚಿತ್ರರಂಗಕ್ಕೆ ಈ ಸುದ್ದಿ ಆಘಾತ ಉಂಟುಮಾಡಿದೆ. ಡಾ. ರಾಜ್​ಕುಮಾರ್​ ನಟನೆಯ ‘ಕವಿರತ್ನ ಕಾಳಿದಾಸ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ರೇಣುಕಾ ಶರ್ಮಾ ಅವರು ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ನಂತರ ಅವರು ಅಂಜದ ಗಂಡು, ಕಿಂದರಿ ಜೋಗಿ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು. ಅವರ ಅಗಲಿಕೆಗೆ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ನಿರ್ದೇಶಕ ರೇಣುಕಾ ಶರ್ಮಾ ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿತ್ತು. ಗಿರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅವರು ಅಗಲಿದ್ದಾರೆ. ಬೆಂಗಳೂರಿನಲ್ಲೇ ಅಂತ್ಯ ಸಂಸ್ಕಾರ ನೆರವೇರಲಿದೆ.

ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ ಮಾತ್ರವಲ್ಲದೆ ಭಕ್ತಿ ಪ್ರಧಾನ ಸಿನಿಮಾಗಳನ್ನು ಮಾಡುವ ಮೂಲಕವೂ ರೇಣುಕಾ ಶರ್ಮಾ ಜನಪ್ರಿಯತೆ ಗಳಿಸಿದ್ದರು. ಶಬರಿಮಲೆ ಶ್ರೀಅಯ್ಯಪ್ಪ, ಕೊಲ್ಲೂರು ಶ್ರೀಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ ಮುಂತಾದ ಸಿನಿಮಾಗಳು ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದವು.

ಮಹಾಮಾರಿ ಕೊವಿಡ್​ನಿಂದಾಗಿ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್​. ಮಂಜುನಾಥ್​, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​, ಪೋಸ್ಟರ್​ ಡಿಸೈನರ್​ ಮಸ್ತಾನ್​, ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಸೇರಿದಂತೆ ಅನೇಕರನ್ನು ಕೊರೊನಾ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ:

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us