ದರ್ಶನ್ ವಿರುದ್ಧ ಆರೋಪ ಪಟ್ಟಿ: ಪೊಲೀಸ್ ಆಯುಕ್ತರು ಹೇಳಿದ್ದು ಹೀಗೆ
Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮುಗಿಸಿದ್ದು, ಇನ್ನೆರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ದರ್ಶನ್ ಪ್ರಸ್ತುತ ವಿಚಾರಣಾಧೀನ ಕೈದಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ದಿನ ದೂಡುತ್ತಿದ್ದಾರೆ. ಇದರ ನಡುವೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ದಯಾನಂದ್, ದರ್ಶನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಕುರಿತಾಗಿ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.
‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.
ಇದನ್ನೂ ಓದಿ:ದರ್ಶನ್ ತೂಗುದೀಪ: ಬಳ್ಳಾರಿ ಜೈಲು ಮುಂದಿನ ರಸ್ತೆಗಳು ಸಂಚಾರ ಮುಕ್ತ, ಬ್ಯಾರಿಕೇಡ್ ಸರಿಸಿದ ಪೊಲೀಸರು
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್ಎಸ್ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್ನ ಎಫ್ಎಸ್ಎಲ್ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದ ಸಲ್ಲಿಕೇ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ವಿವರವಾಗಿ ತನಿಖೆ ಮಾಡಿದ್ದಾರೆ. ಸುಮಾರು 100 ಕ್ಕೂ ಹೆಚ್ಚು ಮೆಟಿರಿಯಲ್ ಎವಿಡೆನ್ಸ್ಗಳನ್ನು ಕಲೆ ಹಾಕಿದ್ದಾರೆ. ಬೆಂಗಳೂರು, ಮೈಸೂರು, ಚಿತ್ರದುರ್ಗದ ಹಲವು ಕಡೆ ಮಹಜರು ಮಾಡಿದ್ದಾರೆ. ಹಲವಾರು ಸಿಸಿಟಿವಿ ಪರಿಶೀಲನೆ ನಡೆಸಿ ದೃಶ್ಯಗಳನ್ನು ಸಂಗ್ರಹ ಮಾಡಿದ್ದಾರೆ. 100ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿ ಹಲವರ ಹೇಳಿಕೆಗಳನ್ನು ಸಂಗ್ರಹಿಸಿದ್ದಾರೆ. ಎಲ್ಲವನ್ನೂ ಚಾರ್ಜ್ ಶೀಟ್ನಲ್ಲಿ ನಮೂದಿಸಲಿದ್ದು, ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಆ ಮೂಲಕ ಪ್ರಕರಣದ ಇಂಚಿಂಚೂ ಮಾಹಿತಿ ಹೊರಗೆ ಬರಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:32 pm, Tue, 3 September 24