AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಬರಲೇ ಬೇಕು, ದರ್ಶನ್​ಗೆ ನ್ಯಾಯಾಲಯದ ಎಚ್ಚರಿಕೆ

Darshan Thoogudeepa case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ಪವಿತ್ರಾ ಸೇರಿದಂತೆ ಹಲವು ಆರೋಪಿಗಳು ಪ್ರಕರಣದ ವಿಚಾರಣೆಗೆ ಹಾಜರಾಗಿದ್ದರು. ಆದರೆ ದರ್ಶನ್ ಗೈರಾಗಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆ ದಿನ ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಎಚ್ಚರಿಕೆ ನೀಡಿದರು.

ಕೋರ್ಟ್​ಗೆ ಬರಲೇ ಬೇಕು, ದರ್ಶನ್​ಗೆ ನ್ಯಾಯಾಲಯದ ಎಚ್ಚರಿಕೆ
Darshan Renuka Swamy
ಮಂಜುನಾಥ ಸಿ.
|

Updated on:Apr 08, 2025 | 12:05 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಗೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇನ್ನೂ ಕೆಲವು ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ (Darshan) ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್​ ಪರ ವಕೀಲರಿಗೆ ಎಚ್ಚರಿಕೆ ನೀಡಿದೆ. ‘ವಿಚಾರಣೆ ಇದ್ದಾಗ ಕಡ್ಡಾಯವಾಗಿ ಹಾಜರಾಗಬೇಕು’ ಎಂದಿದೆ.

ದರ್ಶನ್, ಬೆನ್ನು ನೋವಿನ ಕಾರಣ ನೀಡಿ ನ್ಯಾಯಾಲಯದ ವಿಚಾರಣೆಯಿಂದ ವಿನಾಯಿತಿ ಕೋರಿದ್ದರು. ಇತ್ತೀಚೆಗಷ್ಟೆ ‘ಡೆವಿಲ್’ ಸಿನಿಮಾದ ಶೂಟಿಂಗ್​ಗಾಗಿ ನಟ ದರ್ಶನ್ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಸುಮಾರು 28 ಗಂಟೆಗಳ ಕಾಲ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು ಎನ್ನಲಾಗಿದೆ. ಇದರಿಂದಾಗಿ ಅವರಿಗೆ ಬೆನ್ನು ನೋವು ಉಲ್ಬಣವಾಗಿದ್ದ ಕಾರಣ ಇಂದು ವಿಚಾರಣೆಗೆ ಗೈರಾಗಿದ್ದರು. ಈ ವಿಷಯವನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಹೈಕೊರ್ಟ್ ಜಾಮೀನು ಷರತ್ತಿನಲ್ಲಿ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅನುಮತಿ ನೀಡಿತ್ತು ಎಂದು ತಿಳಿಸಿ ಆದೇಶ ಪ್ರತಿಯನ್ನು ನ್ಯಾಯಾಧೀಶರಿಗೆ ವಕೀಲರು ನೀಡಿದರು. ಆದರೆ ಸಮಜಾಯಿಷಿಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆ ವೇಳೆ ಆರೋಪಿಗಳು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದರು.

ಇದನ್ನೂ ಓದಿ:50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಇದನ್ನೂ ಓದಿ
Image
ಸಾಯಿ ಪಲ್ಲವಿ ಧ್ವನಿ ಅದೆಷ್ಟು ಕ್ಯೂಟ್; ಅವರ ಹಾಡು ಕೇಳಿ
Image
ಐಪಿಎಲ್ ಬೆಟ್ಟಿಂಗ್ ಪ್ರಮೋಷನ್ ಮಾಡೋ ಇನ್​ಫ್ಲ್ಯುಯೆನ್ಸ್​ರಗಳಿಗೆ ನೋಟಿಸ್
Image
‘ಕೊಳಕು ಅಂಟದ ಬಿಳಿ ಹಾಳೆ’; ಧನುಗೆ ಪತ್ರ ಬರೆದು ವಿಶ್ ತಿಳಿಸಿದ ತ್ರಿವಿಕ್ರಂ
Image
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ

ಇಂದು ನಡೆದ ವಿಚಾರಣೆಗೆ ದರ್ಶನ್ ಒಬ್ಬರನ್ನು ಹೊರತುಪಡಿಸಿ ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ನಂದಿಶ್, ಜಗದೀಶ್, ನಾಗರಾಜ್, ವಿನಯ್, ಪವನ್, ಲಕ್ಷ್ಮಣ, ದೀಪಕ್, ಪ್ರದೋಶ್, ಕಾರ್ತಿಕ್ ಕೇಶವ ಮೂರ್ತಿ ಇನ್ನೂ ಕೆಲವರು ಹಾಜರಾಗಿದ್ದರು. ಕೆಲವು ಆರೋಪಿಗಳು, ಪೊಲೀಸರು ವಶಪಡಿಸಿಕೊಂಡಿರುವ ತಮ್ಮ ಮೊಬೈಲ್​ಗಳನ್ನು ಮರಳಿಸಬೇಕು ಎಂದು ಮನವಿ ಸಲ್ಲಿಸಿದರು. ಬಳಿಕ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಯ್ತು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಹಾಗೂ ಇನ್ನೂ ಕೆಲವರ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್, ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Tue, 8 April 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?