AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತೂಗುದೀಪ ಪ್ರಕರಣ: ಆದಾಯ ತೆರಿಗೆ ಇಲಾಖೆ, ಇನ್​ಸ್ಟಾಗ್ರಾಂಗೆ ತನಿಖಾಧಿಕಾರಿಗಳ ಪತ್ರ

Renuka Swamy Case: ದರ್ಶನ್ ತೂಗುದೀಪ ಆರೋಪಿಯಾಗಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣ ಕುರಿತಾಗಿ ಇನ್​ಸ್ಟಾಗ್ರಾಂ ಹಾಗೂ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ಸಹಾಯ ಕೋರಿದ್ದಾರೆ.

ದರ್ಶನ್ ತೂಗುದೀಪ ಪ್ರಕರಣ: ಆದಾಯ ತೆರಿಗೆ ಇಲಾಖೆ, ಇನ್​ಸ್ಟಾಗ್ರಾಂಗೆ ತನಿಖಾಧಿಕಾರಿಗಳ ಪತ್ರ
ಮಂಜುನಾಥ ಸಿ.
| Edited By: |

Updated on:Jun 27, 2024 | 10:57 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿರುವ ಪೊಲೀಸರು ಈಗಾಗಲೇ 160ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಇನ್ನಷ್ಟು ಸಾಕ್ಷ್ಯಗಳ ಸಂಗ್ರಹಕ್ಕೆ ಪ್ರಯತ್ನಿಸಲಾಗುತ್ತಿದೆ. ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್​ಗಳ ಪರಿಶೀಲನೆಯನ್ನು ಪೊಲೀಸರು ಮಾಡುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಕೆಲವು ಅಡೆ-ತಡೆಗಳು ಎದುರಾಗಿವೆ. ಮೃತ ರೇಣುಕಾ ಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್ ತೂಗುದೀಪ , ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದಾರೆ.

ರೇಣುಕಾ ಸ್ವಾಮಿ, ಪವಿತ್ರಾ ಗೌಡಗೆ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಎನ್ನಲಾಗಿದ್ದು, ರೇಣುಕಾ ಸ್ವಾಮಿಯ ಮೊಬೈಲ್ ನಾಶವಾಗಿರುವ ಕಾರಣ ರೇಣುಕಾ ಸ್ವಾಮಿ ಯಾವ ಸಂದೇಶವನ್ನು ಪವಿತ್ರಾ ಗೌಡಗೆ ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಕಾಮಾಕ್ಷಿಪಾಳ್ಯ ಪೊಲೀಸರು ಇನ್​ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ತನಿಖೆಗೆ ಸಹಾಯ ಕೇಳುತ್ತಿದ್ದಾರೆ. ಇನ್​ಸ್ಟಾಗ್ರಾಂ ಮೂಲಕವೇ ರೇಣುಕಾ ಸ್ವಾಮಿ ಸಂದೇಶ ಕಳಿಸಿದ್ದ ಎನ್ನಲಾಗುತ್ತಿದ್ದು, ಕಳಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್​ಸ್ಟಾಗ್ರಾಂ ಅನ್ನು ಕೋರಿದ್ದಾರೆ.

ಇದನ್ನೂ ಓದಿ: ಸಿನಿಮಾ ಆಗುತ್ತಾ ದರ್ಶನ್​ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಗೂ ಸಹ ಕಾಮಾಕ್ಷಿಪಾಳ್ಯ ಪೊಲೀಸರು ಪತ್ರ ಬರೆದಿದ್ದಾರೆ. ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂಪಾಯಿ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತಲ್ಲಿ ಆದಾಐ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಹಾಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊಲೆ ಮುಚ್ಚಿಹಾಕಲು ನೀಡಿದ್ದು ಎನ್ನಲಾಗಿರುವ 30 ಲಕ್ಷ ರೂಪಾಯಿ ಹಣವನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದಾದ ಬಳಿಕ ದರ್ಶನ್ ಅವರ ಮನೆ ಮಹಜರಿನ ವೇಳೆ ದರ್ಶನ್ ಅವರ ಮನೆಯಲ್ಲಿದ್ದ 37.40 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದಾದ ಬಳಿಕ, ದರ್ಶನ್​ರ ಪತ್ನಿ ವಿಜಯಲಕ್ಷ್ಮಿ ಅವರು ಮೂರು ಲಕ್ಷ ರೂಪಾಯಿ ಹಣವನ್ನು ಪೊಲೀಸರ ವಶಕ್ಕೆ ನೀಡಿದ್ದರು. ಪ್ರಕರಣ ನಡೆದ ಬಳಿಕ ಮೂರು ಲಕ್ಷ ರೂಪಾಯಿ ಹಣವನ್ನು ದರ್ಶನ್, ವಿಜಯಲಕ್ಷ್ಮಿ ಅವರಿಗೆ ನೀಡುವಂತೆ ತಮ್ಮ ಸಹಾಯಕರ ಮೂಲಕ ಕಳಿಸಿದ್ದರಂತೆ. ಆ ಹಣವನ್ನು ವಿಜಯಲಕ್ಷ್ಮಿ ಅವರು ವಿಚಾರಣೆ ವೇಳೆ ತನಿಖಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Wed, 26 June 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ