AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಪ್ರಕರಣ: ಪೊಲೀಸರ ಮುಂದೆ ದರ್ಶನ್ ಹೇಳಿದ ಮೊದಲ ಮಾತೇನು?

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈವರೆಗೆ 52 ಕಡೆ ಸ್ಥಳ ಮಹಜರು ಮಾಡಿದ್ದಾರೆ. 150ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ. ಕೆಲವೇ ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. ಅಂದಹಾಗೆ ದರ್ಶನ್ ಅನ್ನು ಬಂಧಿಸಲು ಹೋದ ಪೊಲೀಸರ ಬಳಿ ದರ್ಶನ್ ಹೇಳಿದ ಮೊದಲ ಮಾತೇನು?

ರೇಣುಕಾ ಸ್ವಾಮಿ ಪ್ರಕರಣ: ಪೊಲೀಸರ ಮುಂದೆ ದರ್ಶನ್ ಹೇಳಿದ ಮೊದಲ ಮಾತೇನು?
ಮಂಜುನಾಥ ಸಿ.
|

Updated on: Aug 25, 2024 | 7:34 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ ಮೂರು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ಮೈಸೂರಿನಲ್ಲಿ ನಟ ದರ್ಶನ್ ಬಂಧನವಾಗಿತ್ತು. ದರ್ಶನ್, ಕೊಲೆ ಪ್ರಕರಣ ಒಂದರಲ್ಲಿ ಬಂಧನಕ್ಕೆ ಒಳಗಾಗುತ್ತಾರೆ ಎಂದು ಯಾರೂ ಸಹ ನಿರೀಕ್ಷಿಸಿರಲಿಲ್ಲ. ದರ್ಶನ್ ಅನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದಾಗ ಹಲವರಿಗೆ ಆಶ್ಚರ್ಯವಾಗಿತ್ತು. ಇದೀಗ ತನಿಖೆ ಬಲು ಚುರುಕಾಗಿ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ಚಾರ್ಜ್ ಶೀಟ್ ಸಲ್ಲಿಸಲು ಕೆಲವೇ ದಿನಗಳು ಬಾಕಿ ಇರುವ ಈ ಸಮಯದಲ್ಲಿ ಕೆಲವು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈ ವರೆಗೆ 52 ಸ್ಥಳಗಳಲ್ಲಿ ಮಹಜರು ಮಾಡಿದ್ದಾರೆ. ಮೈಸೂರು, ಬೆಂಗಳೂರು, ಚಿತ್ರದುರ್ಗಗಳಲ್ಲಿ ಈ ಪ್ರಕರಣದ ಕೆಲವು ಪ್ರಮುಖ ಸ್ಥಳ ಮಹಜರು ನಡೆದಿವೆ. ಬೆಂಗಳೂರಿನ ಪಟ್ಟಣಗೆರೆ ಶೆಡ್, ದರ್ಶನ್, ಪವಿತ್ರಾ ಮನೆ, ಸ್ಟೂನಿ ಬ್ರೂಕ್ ಹೋಟೆಲ್, ಮೈಸೂರಿನ ಹೋಟೆಲ್, ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಮನೆ, ಆರೋಪಿಗಳ ಮನೆ ಇನ್ನಿತರೆ ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.

ಮಾತ್ರವಲ್ಲದೆ ಸುಮಾರು 150ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ಸಹ ದಾಖಲು ಮಾಡಿಕೊಂಡಿದ್ದಾರೆ. ಎಲ್ಲ ಆರೋಪಿಗಳು, ಅವರಿಗೆ ಸಂಬಂಧಿಸಿದವರು, ಅವರೊಟ್ಟಿಗೆ ಸಂಪರ್ಕದಲ್ಲಿದ್ದವರು, ಪ್ರಕರಣದ ಬಗ್ಗೆ ಗೊತ್ತಿದ್ದವರು ಇನ್ನೂ ಹಲವರ ವಿಚಾರಣೆ ಈಗಾಗಲೇ ನಡೆದಿದೆ. ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಅವನ್ನು ಸ್ಥಳ ಮಹಜರು ದಾಖಲೆ, ಸಾಕ್ಷಿಗಳೊಟ್ಟಿಗೆ ಸಮೀಕರಿಸಿದ್ದಾರೆ. ಹಾಗೂ ಪ್ರಕರಣದ ಟೈಮ್ ಲೈನ್ ಮ್ಯಾಚ್ ಮಾಡಲು ಸಹ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ:‘ದರ್ಶನ್ ಪಶ್ಚಾತಾಪದಲ್ಲಿದ್ದಾರೆ, ಮತ್ತೆ ಜೈಲಿಗೆ ಬರಬೇಡಿ ಎಂದರು’; ವಿನೋದ್ ರಾಜ್

ಅಂದಹಾಗೆ ಜೂನ್ 11 ರಂದು ಬೆಳ್ಳಂಬೆಳಿಗ್ಗೆ ನಟ ದರ್ಶನ್ ಬಂಧನವಾಗಿತ್ತು. ಮೈಸೂರಿನಲ್ಲಿ ದರ್ಶನ್ ಅನ್ನು ಪೊಲೀಸರು ಬಂಧಿಸಲು ಹೋದಾಗ ಪೊಲೀಸರ ಮುಂದೆ ದರ್ಶನ್, ‘ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ’ ಎಂದು ಹೇಳಿದರಂತೆ. ಅದಾದ ಬಳಿಕ ನಟಿ ಪವಿತ್ರಾ ಗೌಡ ಅವರನ್ನು ಬಂಧಿಸಲು ಯತ್ನಿಸಿ ಅವರ ಮನೆ ಹಾಗೂ ಇನ್ನೊಂದು ಸ್ಥಳಕ್ಕೆ ಪೊಲೀಸರು ಹೋಗಿದ್ದಾರೆ ಆದರೆ ಎರಡೂ ಸ್ಥಳದಲ್ಲಿ ಪವಿತ್ರಾ ಇರಲಿಲ್ಲ. ಕೊನೆಗೆ ದರ್ಶನ್ ಮೊಬೈಲ್ ನಿಂದಲೇ ಪವಿತ್ರಾಗೆ ಕರೆ ಮಾಡಿಸಿದ ಪೊಲೀಸರು ಪವಿತ್ರಾರನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆಸಿಕೊಂಡು ಬಂಧಿಸಿದ್ದಾರೆ.

ಜೈಲು ಪರಿಸರಕ್ಕೆ ಒಗ್ಗಿಕೊಳ್ಳುತ್ತಿರುವ ದರ್ಶನ್

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಆರಂಭದ ಒಂದೆರಡು ವಾರ ಬಹಳ ಸಮಸ್ಯೆ ಎದುರಿಸಿದ್ದರು. ಅಲ್ಲಿನ ಊಟ ಅವರಿಗೆ ಹಿಡಿಸಿರಲಿಲ್ಲ. ಆರೋಗ್ಯ ಸಮಸ್ಯೆ ಉಲ್ಬಣವಾಗಿತ್ತು, ಜ್ವರ, ಭೇದಿ, ನಿದ್ರಾಹೀನತೆ ಕಾಡಿತ್ತು. ಆದರೆ ಇತ್ತೀಚೆಗೆ ನಟ ದರ್ಶನ್ ಜೈಲು ಪರಿಸರಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ. ಪ್ರತಿ ದಿನ ನಟ ದರ್ಶನ್, ಇತರೆ ಕೈದಿಗಳೊಟ್ಟಿಗೆ ವಾಲಿಬಾಲ್ ಆಟ ಆಡುತ್ತಾ ಸಮಯ ಕಳೆಯುತ್ತಿದ್ದಾರೆ. ಇತರೆ ಕೈದಿಗಳ ಜೊತೆ ಮಾತನಾಡುತ್ತಾ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ