ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚರ್ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.
ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.
ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳು ಸಿಕ್ಕಿವೆ. ಆರೋಪಿಗಳ ಮೊಬೈಲ್ನಲ್ಲಿ ಇದನ್ನು ಸೆರೆಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಚಾರ್ಜ್ಶೀಟ್ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ: ದರ್ಶನ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್
ರೇಣುಕಾ ಸ್ವಾಮಿ ಕೊಲೆ ಕೇಸ್ ವಿಚಾರಣೆಯನ್ನು ವಿಶೇಷ ಕೋರ್ಟ್ಗೆ ನೀಡುವಂತೆ ಮನವಿ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇಡಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:40 am, Thu, 5 September 24