AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​, ಪವಿತ್ರಾ ಗೌಡಗೆ ಡಿಎನ್​ಎ ಟೆಸ್ಟ್​ ಮಾಡಿಸಿದ ಪೊಲೀಸರು; ಕಾರಣ ಏನು?

ಡಿಎನ್​ಎ ಪರೀಕ್ಷೆ ಸಲುವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೂದಲು ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಬಳಿಕ ಆರೋಪಿಗಳನ್ನು ಪೊಲೀಸ್​ ಠಾಣೆಗೆ ಶಿಫ್ಟ್​ ಮಾಡಲಾಗುತ್ತಿದೆ. ಪವಿತ್ರಾ ಗೌಡ, ದರ್ಶನ್​ ಸೇರಿ ಒಟ್ಟು 9 ಮಂದಿಯ ಡಿಎನ್​ಎ ಟೆಸ್ಟ್​ ಮಾಡಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

ದರ್ಶನ್​, ಪವಿತ್ರಾ ಗೌಡಗೆ ಡಿಎನ್​ಎ ಟೆಸ್ಟ್​ ಮಾಡಿಸಿದ ಪೊಲೀಸರು; ಕಾರಣ ಏನು?
ಪವಿತ್ರಾ ಗೌಡ, ದರ್ಶನ್​
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಮದನ್​ ಕುಮಾರ್​|

Updated on: Jun 19, 2024 | 5:29 PM

Share

ನಟ ದರ್ಶನ್​, ನಟಿ ಪವಿತ್ರಾ ಗೌಡ (Pavithra Gowda) ಸೇರಿದಂತೆ ಅನೇಕರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಎಲ್ಲರನ್ನೂ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈಗಾಗಲೇ ಹಲವು ಸುತ್ತಿನ ವಿಚಾರಣೆ ನಡೆಸಲಾಗಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಈ ಮೂಲಕ ನೂರಾರು ಬಗೆಯ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಇಂದು (ಜೂನ್​ 19) ದರ್ಶನ್​ (Darshan), ಪವಿತ್ರಾ ಗೌಡ ಮುಂತಾದ ಆರೋಪಿಗಳ ಡಿಎನ್​ಎ ಟೆಸ್ಟ್​ (DNA Test) ಮಾಡಿಸಲಾಗಿದೆ. ಅದಕ್ಕೆ ಪ್ರಮುಖ ಕಾರಣ ಕೂಡ ಇದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್​, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ ಮಾಡಲಾಗಿದೆ. ಒಟ್ಟು 9 ಆರೋಪಿಗಳ ಸ್ಯಾಂಪಲ್ಸ್​ ಪಡೆದುಕೊಳ್ಳಲಾಗಿದೆ. ಆರೋಪಿಗಳ ರಕ್ತ ಮತ್ತು ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ರೇಣುಕಾ ಸ್ವಾಮಿ ಹತ್ಯೆ ನಡೆದ ಸ್ಥಳದಲ್ಲಿ ಪತ್ತೆಯಾದ ಕೂದಲು ಹಾಗೂ ರಕ್ತದ ಮಾದರಿಯ ಜೊತೆ ಮ್ಯಾಚ್ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ.

ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಅದನ್ನುಎಫ್‌ಎಸ್ಎಲ್‌ಗೆ (ವಿಧಿ ವಿಜ್ಞಾನ ಪ್ರಯೋಗಾಲಯ) ಕಳುಹಿಸಲಾಗುತ್ತದೆ. ಒಂದು ವೇಳೆ, ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಆರೋಪಿಗಳ ಸ್ಯಾಂಪಲ್​ ಜೊತೆ ಮ್ಯಾಚ್​ ಆದರೆ ಅದು ಪ್ರಮುಖ ಸಾಕ್ಷ್ಯ ಆಗಲಿದೆ. ಆ ಕಾರಣದಿಂದ 9 ಆರೋಪಿಗಳ ಡಿಎನ್​ಎ ಪರೀಕ್ಷೆ ಇಂದು ಮಾಡಿಸಲಾಗಿದೆ.

ಇದನ್ನೂ ಓದಿ: ‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡ ಈ ಕೇಸ್​ನಲ್ಲಿ ಎ1. ಪವಿತ್ರಾಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಅಪಹರಿಸಿ, ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ಪವನ್​, ವಿನಯ್​ ಮುಂತಾದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಚಾರಣೆ ತೀವ್ರಗೊಂಡಂತೆಲ್ಲ ಅನೇಕ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ