AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ: ಏಪ್ರಿಲ್ 22ಕ್ಕೆ ವಿಚಾರಣೆ

Darshan's Bail Cancellation: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳಿಗೆ ಹೈಕೋರ್ಟ್ ಈಗಾಗಲೇ ಜಾಮೀನು ಮಂಜೂರು ಮಾಡಿದೆ. ಆದರೆ ರಾಜ್ಯ ಸರ್ಕಾರವು ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಸುಪ್ರೀಂನಲ್ಲಿ ಏಪ್ರಿಲ್ 22ಕ್ಕೆ ವಿಚಾರಣೆ ನಡೆಯಲಿದೆ. ದರ್ಶನ್ ಹಾಗೂ ಇತರೆ ಆರೋಪಿಗಳ ಜಾಮೀನು ಅರ್ಜಿ ರದ್ದಾಗಲಿದೆಯೇ ಕಾದು ನೋಡಬೇಕಿದೆ.

Darshan: ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ: ಏಪ್ರಿಲ್ 22ಕ್ಕೆ ವಿಚಾರಣೆ
Darshan Thoogudeepa
ಮಂಜುನಾಥ ಸಿ.
|

Updated on:Apr 02, 2025 | 3:02 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ರಾಜ್ಯ ಹೈಕೋರ್ಟ್ (High Court) ಎಲ್ಲ ಆರೋಪಿಗಳಿಗೂ ಜಾಮೀನು (Bail) ನೀಡಿದೆ. ಕೆಲ ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ದೊರೆತಿತ್ತು. ಇದೀಗ ರಾಜ್ಯ ಪೊಲೀಸ್ ಇಲಾಖೆಯು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 22ಕ್ಕೆ ಮುಂದೂಡಲ್ಪಟ್ಟಿದೆ.

ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು. ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ಸುಪ್ರೀಂಕೋರ್ಟ್​ನಲ್ಲಿಯೂ ದರ್ಶನ್ ಪರವಾಗಿ ವಕೀಲ ನಾಗೇಶ್ ವಕಾಲತ್ತು ವಹಿಸುವ ಸಾಧ್ಯತೆ ಇದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್ ಅವರ ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಹೈಕೋರ್ಟ್​, ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಗೃಹ ಇಲಾಖೆಯ ಅನುಮತಿ ಪಡೆದುಕೊಂಡು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಜಾಮೀನು ರದ್ದು ಮಾಡುವಂತೆ ಕೋರಿದೆ.

ಇದನ್ನೂ ಓದಿ
Image
ಹಿರಿಯ ಕಲಾವಿದೆಯ ಜೀವನಕ್ಕೆ ಬೆಳಕಾದ ದರ್ಶನ್; ದಾಸನ ಮೆಚ್ಚಿಕೊಳ್ಳಲೇಬೇಕು
Image
ಅಜಯ್ ದೇವಗನ್ ಐಷಾರಾಮಿ ಜೀವನ; 60 ಕೋಟಿ ಮನೆ, ದುಬಾರಿ ಕಾರು, ಬಿಸ್ನೆಸ್
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಇದನ್ನೂ ಓದಿ:ಸೆಲಿಬ್ರಿಟಿಯಾಗಿರುವ ಕಾರಣ ಹೋದೆಡೆಯೆಲ್ಲ ಜನ ಸೇರುತ್ತಾರೆ, ಆತ್ಮರಕ್ಷಣೆಗಾಗಿ ಗನ್ ಬೇಕು: ದರ್ಶನ್ ತೂಗುದೀಪ

ನಟ ದರ್ಶನ್, ಜಾಮೀನು ಪಡೆದ ಬಳಿಕ ಇದೀಗ ಮತ್ತೆ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೆ ನ್ಯಾಯಾಲಯದ ಅನುಮತಿ ಪಡೆದುಕೊಂಡು ರಾಜಸ್ಥಾನಕ್ಕೆ ಸಿನಿಮಾ ಚಿತ್ರೀಕರಣಕ್ಕೆ ಹೋಗಿ ಬಂದರು. ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ರಾಜಸ್ಥಾನದಲ್ಲಿ ನಡೆಯಿತು. ರಾಜಸ್ಥಾನದಲ್ಲಿ ಚಿತ್ರೀಕರಣ ಮುಗಿಸಿ ಇಂದು (ಏಪ್ರಿಲ್ 02) ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇನ್ನು ಪವಿತ್ರಾ ಗೌಡ ಅವರು ತಮ್ಮ ರೆಡ್ ಕಾರ್ಪೆಟ್ ಬೊಟೀಕ್ ಅನ್ನು ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೆ ಅದನ್ನು ಪುನಃ ಲಾಂಚ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 2 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ