ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ; ಇಲ್ಲಿದೆ ಎಲ್ಲರ ವಿವರ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ದರ್ಶನ್​, ಪವಿತ್ರಾ ಗೌಡ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಎಲ್ಲ 13 ಮಂದಿ ಆರೋಪಿಗಳ ವಿಳಾಸದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತನಿಖೆ ಚುರುಕುಕೊಂಡಿದ್ದು ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ; ಇಲ್ಲಿದೆ ಎಲ್ಲರ ವಿವರ
ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ
Follow us
Prajwal Kumar NY
| Updated By: ಮದನ್​ ಕುಮಾರ್​

Updated on: Jun 11, 2024 | 3:19 PM

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್​ (Darshan), ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ. ಕ್ಷುಲ್ಲಕ ವಿಚಾರದಿಂದ ಕೊಲೆ ನಡೆದುಹೋಗಿದೆ. ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ದರ್ಶನ್​ ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲ 13 ಜನರ ಹೆಸರು ಮತ್ತು ವಿಳಾಸ ಬಹಿರಂಗ ಆಗಿವೆ.

ದರ್ಶನ್​, ಪವಿತ್ರಾ ಗೌಡ ಜೊತೆ ವಿ. ವಿನಯ್, ಆರ್.ನಾಗರಾಜು, ಎಂ. ಲಕ್ಷ್ಮಣ್​, ಎಸ್​. ಪ್ರದೋಶ್​, ಕೆ. ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಈಗ ಪೊಲೀಸರ ವಶದಲ್ಲಿ ಇದ್ದಾರೆ. ಇಂದು (ಜೂನ್ 11) ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಆರೋಪಿಗಳು ವಿವರ ಹೀಗಿದೆ:

ವಿನಯ್ ವಿ – ಜಯಣ್ಣ ಫಾರ್ಮ್​ ಹೌಸ್​. ನಾಗರಾಜು ಆರ್​ – ರಾಮಕೃಷ್ಣ ನಗರ ಮೈಸೂರು. ಲಕ್ಷ್ಮಣ್​ ಎಂ – ಆರ್​ಪಿಸಿ ಲೇಔಟ್​, ಬೆಂಗಳೂರು. ಪ್ರದೋಶ್​ ಎಸ್. – ಗಿರಿನಗರ. ಪವನ್ ಕೆ – ಚನ್ನಪಟ್ಟಣ (ಆರ್​ ಆರ್​ ನಗರದಲ್ಲಿ ವಾಸ). ದೀಪಕ್ ಕುಮಾರ್​ ಎಂ – ಆರ್​.ಆರ್​. ನಗರ. ನಂದೀಶ್​ – ಮಂಡ್ಯ (ಆರ್​ಆರ್​ ನಗರ ವಾಸ). ಕಾರ್ತಿಕ್​ – ಗಿರಿ ನಗರ. ನಿಖಿಲ್ ನಾಯಕ್​ – ಬನ್ನೇರುಘಟ್ಟ ಮೇನ್​, ಕೆಂಬತ್ತಳ್ಳಿ ಗೊಟ್ಟಿಗೇರಿ. ರಾಘವೇಂದ್ರ ಅಲಿಯಾಸ್​ ರಾಘು – ಕೋಳಿಹಟ್ಟಿ ದೊಡ್ಡ ಪೇಟೆ, ಚಿತ್ರದುರ್ಗ. ಕೇಶವ ಮೂರ್ತಿ- ಗಿರಿನಗರ.

ಇದನ್ನೂ ಓದಿ: ಮೋರಿಯಲ್ಲಿದ್ದ ಶವ ಎಳೆದಾಡಿದ್ದ ನಾಯಿಗಳು: ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದೇ ಹೀಗೆ!

ಕೊಲೆಯಾದ ರೇಣುಕಾ ಸ್ವಾಮಿ ಕೂಡ ದರ್ಶನ್​ ಅಭಿಮಾನಿ ಆಗಿದ್ದ. ಪವಿತ್ರಾ ಗೌಡಗೆ ಮೆಸೇಜ್ ಮಾಡಿದ ಬಗ್ಗೆ ಕೊಲೆಗೂ ಮುನ್ನ ಸ್ನೇಹಿತರ ಬಳಿ ರೇಣುಕಾಸ್ವಾಮಿ ಕೊಲೆಗೂ ಮುನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದ ರೇಣುಕಾಸ್ವಾಮಿ.‘ನಮ್ಮ ಬಾಸ್ ಸಂಸಾರವನ್ನು ಪವಿತ್ರಾ ಗೌಡ ಹಾಳು ಮಾಡಿದ್ದಾಳೆ. ಅದಕ್ಕೆ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದೆ’ ಎಂದು ರೇಣುಕಾ ಸ್ವಾಮಿ ಹೇಳಿಕೊಂಡಿದ್ದ ಎನ್ನಲಾಗಿದೆ. ತನಿಖೆ ಮುಂದುವರಿದಂತೆಲ್ಲ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ