AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ನಡುವೆ ದರ್ಶನ್-ಪವಿತ್ರಾ ಮಾತುಕತೆ: ಚರ್ಚೆ ನಡೆಸಿದ್ದೇನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಸಫರೆನ್ಸ್ ವ್ಯವಸ್ಥೆಯ ಮೂಲಕ ಚಾಲ್ತಿಯಲ್ಲಿದೆ. ಪ್ರತಿ ಬಾರಿ ದರ್ಶನ್, ಪವಿತ್ರಾ ಸೇರಿದಂತೆ ಎಲ್ಲ ಸ್ಪರ್ಧಿಗಳು ವಿಡಿಯೋ ಕಾನ್ಸಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಾರೆ. ಅದರಂತೆ ಇಂದೂ ಸಹ ವಿಚಾರಣೆ ವೇಳೆ ದರ್ಶನ್, ಪವಿತ್ರಾ ಸೇರಿದಂತೆ ಇತರೆ ಆರೋಪಿಗಳು ವಿಡಿಯೋ ಕಾನ್​​ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಮತ್ತು ಪವಿತ್ರಾ ಪರಸ್ಪರ ಮಾತನಾಡಿದ್ದಾರೆ.

ವಿಚಾರಣೆ ನಡುವೆ ದರ್ಶನ್-ಪವಿತ್ರಾ ಮಾತುಕತೆ: ಚರ್ಚೆ ನಡೆಸಿದ್ದೇನು?
Darshan Pavithra
ಮಂಜುನಾಥ ಸಿ.
|

Updated on:Nov 12, 2026 | 1:45 PM

Share

ಮುಖ್ಯಾಂಶಗಳು

  • ಕೋರ್ಟ್​​ನಲ್ಲಿ ದರ್ಶನ್-ಪವಿತ್ರಾ ನಡುವೆ ಚರ್ಚೆ
  • ವಿಡಿಯೋ ಕಾನ್​​ಫರೆನ್ಸ್​​ನಲ್ಲಿ ಇಬ್ಬರ ಚರ್ಚೆ
  • ಚರ್ಚೆ ನಡೆಸಿದ ವಿಷಯ ಏನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಸಫರೆನ್ಸ್ ವ್ಯವಸ್ಥೆಯ ಮೂಲಕ ಚಾಲ್ತಿಯಲ್ಲಿದೆ. ಪ್ರತಿ ಬಾರಿ ದರ್ಶನ್, ಪವಿತ್ರಾ ಸೇರಿದಂತೆ ಎಲ್ಲ ಸ್ಪರ್ಧಿಗಳು ವಿಡಿಯೋ ಕಾನ್ಸಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಾರೆ. ಅದರಂತೆ ಇಂದೂ ಸಹ ವಿಚಾರಣೆ ವೇಳೆ ದರ್ಶನ್, ಪವಿತ್ರಾ ಸೇರಿದಂತೆ ಇತರೆ ಆರೋಪಿಗಳು ವಿಡಿಯೋ ಕಾನ್​​ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಮತ್ತು ಪವಿತ್ರಾ ಪರಸ್ಪರ ಮಾತನಾಡಿದ್ದಾರೆ.

ಇನ್ನೂ ಎಷ್ಟು ದಿನ ಹೀಗೇ ಎಂದು ಪವಿತ್ರಾಗೌಡ, ದರ್ಶನ್ ಅನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ದರ್ಶನ್, ಇನ್ನೂ 4 ತಿಂಗಳಾದರೂ ಇರಬೇಕಾಗಬಹುದು ಎಂದಿದ್ದಾರೆ. ಇಲ್ಲಿ ನನಗೆ ಬಹಳ ಸಮಸ್ಯೆ ಆಗುತ್ತಿದೆ ಎಂದು ಪವಿತ್ರಾ ಗೌಡ ಹೇಳಿದ್ದಾರೆ. ಅದಕ್ಕೆ ದರ್ಶನ್, ನಮಗೂ ಸಮಸ್ಯೆ ಆಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಏನೂ ಮಾಡಲು ಆಗುವುದಿಲ್ಲ ಸ್ಪಲ್ಪ ದಿನ ತಾಳ್ಮೆಯಿಂದ ಕಾಯಬೇಕಾಗುತ್ತದೆ, ತಾಳ್ಮೆಯಿಂದ ಇರಬೇಕು’ ಎಂದಿದ್ದಾರೆ. ಬೆನ್ನು ನೋವು ಹೇಗಿದೆ? ಎಂದು ಪವಿತ್ರಾ ಗೌಡ ಪ್ರಶ್ನೆಗೆ ಮುರಿದು ಹೋಗಿದೆ ಎಂಬಂತೆ ಸಂಜ್ಞೆ ಮಾಡಿದ್ದಾರೆ ದರ್ಶನ್.

ವಿಡಿಯೋ ಕಾನ್ಫರೆನ್ಸ್ ಕನೆಕ್ಷನ್ ತಪ್ಪಿದ್ದ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಪರಸ್ಪರ ಮಾತನಾಡಿದ್ದಾರೆ. ಕನೆಕ್ಷನ್ ಸರಿ ಹೋದ ಬಳಿಕ ಇಬ್ಬರೂ ಮಾತು ನಿಲ್ಲಿಸಿದ್ದಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿ? ಕೋರ್ಟ್​​ನಲ್ಲಿ ನಡೆದಿದ್ದೇನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು ಸಹ ಚಾಲ್ತಿಯಲ್ಲಿದ್ದು, ಇಂದು ಪ್ರತ್​ಯಕ್ಷ ಸಾಕ್ಷಿ ಪುನೀತ್​​ ಎಂಬುವರ ಪಾಠಿ ಸವಾಲು ನಡೆಯುತ್ತಿದೆ. ಪುನೀತ್, ದರ್ಶನ್​​ರ ಆಪ್ತರಾಗಿದ್ದಾರೆ. ಇತ್ತೀಚೆಗೆ ಸಾಕ್ಷಿ ಹೇಳಿಕೆ ದಾಖಲಿಸುವಾಗ ಅವರು ಪ್ರತಿಕೂಲ ಸಾಕ್ಷಿ ನುಡಿದಿದ್ದಾರೆ. ಅಂದರೆ ಪೊಲೀಸರ ಮುಂದೆ ನೀಡಿದ್ದ ಹೇಳಿಕೆಯನ್ನು ಬದಲಾಯಿಸಿ ಬೇರೆ ಹೇಳಿಕೆ ನೀಡಿದ್ದಾರೆ. ಘಟನೆ ನಡೆದಾಗ ದರ್ಶನ್ ಮತ್ತು ಪವಿತ್ರಾ ಸ್ಥಳದಲ್ಲಿ ಇರಲಿಲ್ಲ ಎಂದಿದ್ದಾರೆ. ಈ ಕಾರಣದಿಂದಾಗಿ ಪುನೀತ್ ಅವರ ಪಾಟಿ ಸವಾಲನ್ನು ಇಂದು ಎಸ್​​ಪಿಪಿ ಅವರು ಮಾಡಲಿದ್ದಾರೆ.

ಇದೇ ದಿನ ದರ್ಶನ್ ಆರೋಗ್ಯದ ಬಗ್ಗೆ ಜೈಲಿನ ವೈದ್ಯಾಧಿಕಾರಿಗಳು ನ್ಯಾಯಾಲಯಕ್ಕೆ ವರದಿಯನ್ನು ಸಹ ಸಲ್ಲಿಕೆ ಮಾಡಲಿದ್ದಾರೆ. ದರ್ಶನ್​ ಮತ್ತೆ ಬೆನ್ನು ನೋವಿನಿಂದ ಬಳಲುತ್ತಿದ್ದು, ಫಿಸಿಯೋಥೆರಪಿಗೆ ಮನವಿ ಮಾಡಿದ್ದರು. ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅವರಿಗೆ ನ್ಯಾಯಾಲಯ ಅನುಮತಿ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Thu, 12 November 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ