ದರ್ಶನ್​​ಗೆ ಶಾಕ್: ರೇಣುಕಾಸ್ವಾಮಿ ಕೇಸ್​​ನಲ್ಲಿ ಮಾಫಿ ಸಾಕ್ಷಿ ಮಾಡಿ; ಕೋರ್ಟ್​​ಗೆ ಎ14 ಪ್ರದೋಶ್ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸುವ ಮೂಲಕ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ಕೋರಿ ಕ್ಷಮೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬೆಳವಣಿಗೆಯು A2 ಆರೋಪಿ ದರ್ಶನ್ ಮತ್ತು A1 ಪವಿತ್ರಾ ಗೌಡಗೆ ಸಂಕಷ್ಟ ತಂದೊಡ್ಡಿದೆ.

ದರ್ಶನ್​​ಗೆ ಶಾಕ್: ರೇಣುಕಾಸ್ವಾಮಿ ಕೇಸ್​​ನಲ್ಲಿ ಮಾಫಿ ಸಾಕ್ಷಿ ಮಾಡಿ; ಕೋರ್ಟ್​​ಗೆ ಎ14 ಪ್ರದೋಶ್ ಮನವಿ
ದರ್ಶನ್-ರೇಣುಕಾಸ್ವಾಮಿ
Edited By:

Updated on: Aug 06, 2026 | 10:00 AM

ಮುಖ್ಯಾಂಶಗಳು

  • ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್
  • ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ
  • ದರ್ಶನ್-ಪವಿತ್ರಾಗೌಡಗೆ ಕಾದಿದ್ಯಾ ಕಂಟಕ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾರೆ. ಈ ಹೊಸ ಬೆಳವಣಿಗೆಯು ದರ್ಶನ್ (Darshan) ಗ್ಯಾಂಗ್‌ಗೆ ಭಾರಿ ಆಘಾತ ತಂದೊಡ್ಡಿದೆ.

ಕೋರ್ಟ್‌ಗೆ ಪ್ರದೋಷ್ ವಿಶೇಷ ಮನವಿ

ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಇರುವ ಕೊಠಡಿ ಬಿಟ್ಟು ತಮ್ಮನ್ನು ಪ್ರತ್ಯೇಕ ಜೈಲು ಕೊಠಡಿಯಿಂದ ಹಾಜರುಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ದರ್ಶನ್ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ಭದ್ರತಾ ಮನವಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪ್ರಾಸಿಕ್ಯೂಷನ್ ತನ್ನ ನಿಲುವು ತಿಳಿಸುವಂತೆ ಸೂಚಿಸಿದೆ.

YouTube video player

ದರ್ಶನ್ ಮತ್ತು ಪವಿತ್ರಾ ಗೌಡಗೆ ಸಂಕಷ್ಟ

ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ (A1) ಆಗಿದ್ದರೆ, ನಟ ದರ್ಶನ್ ಎರಡನೇ ಆರೋಪಿ (A2) ಆಗಿದ್ದಾರೆ. ಈಗ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ನಟ ದರ್ಶನ್‌ಗೆ ದೊಡ್ಡ ಮುಳ್ಳಾಗುವ ಸಾಧ್ಯತೆಯಿದೆ. ಪ್ರದೋಷ್ ನೀಡುವ ಹೇಳಿಕೆಗಳು ಈ ಪ್ರಕರಣದ ತನಿಖೆಯಲ್ಲಿ ಅತ್ಯಂತ ನಿರ್ಣಾಯಕವಾಗಲಿವೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

ಮಾಫಿ ಸಾಕ್ಷಿಯಾಗಿ ಪ್ರದೋಷ್ ಸತ್ಯ ಬಿಚ್ಚಿಟ್ಟರೆ, ಪ್ರಕರಣದ ಪ್ರಮುಖ ರೂವಾರಿಗಳಿಗೆ ಕಾನೂನಿನ ಕುಣಿಕೆ ಇನ್ನಷ್ಟು ಬಿಗಿಯಾಗಲಿದೆ. ಈ ಅರ್ಜಿ ಸಿನಿಮಾ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ವಿಷಯದಲ್ಲಿ ನ್ಯಾಯಾಲಯ ಪ್ರಾಸಿಕ್ಯೂಷನ್ ಅಭಿಪ್ರಾಯ ಕೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:16 am, Thu, 6 August 26

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us