AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್‌ಗೆ ಶಾಕ್ ಮೇಲೆ ಶಾಕ್; ಸಾಧ್ಯವಾಗಲೇ ಇಲ್ಲ ಪ್ರದೋಷ್ ಮಾಫಿ ಸಾಕ್ಷಿ ವಿಚಾರಣೆ ತಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗುವುದಕ್ಕೆ ತಡೆಕೋರಿ ನಟ ದರ್ಶನ್ ಸಲ್ಲಿಸಿದ್ದ ಮೆಮೋವನ್ನು 59ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಹಕ್ಕಿದ್ದರೂ ಪ್ರದೋಷ್ ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿ, ಮುಚ್ಚಿದ ಕೊಠಡಿಯಲ್ಲಿ ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ನ್ಯಾಯಾಲಯ ಆರಂಭಿಸಿದೆ.

ದರ್ಶನ್‌ಗೆ ಶಾಕ್ ಮೇಲೆ ಶಾಕ್; ಸಾಧ್ಯವಾಗಲೇ ಇಲ್ಲ ಪ್ರದೋಷ್ ಮಾಫಿ ಸಾಕ್ಷಿ ವಿಚಾರಣೆ ತಡೆ
ಪ್ರದೋಷ್-ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 28, 2026 | 12:40 PM

Share

ಮುಖ್ಯಾಂಶಗಳು

  • ದರ್ಶನ್ ಅಂಡ್ ಗ್ಯಾಂಗ್‌ಗೆ ಬಿಗ್ ಶಾಕ್
  • ಪ್ರದೋಷ್ ಮಾಫಿ ಸಾಕ್ಷಿ ವಿಚಾರಣೆಗೆ ತಡೆ ನಿರಾಕರಿಸಿದ ಸಿಸಿಹೆಚ್ ಕೋರ್ಟ್
  • ದರ್ಶನ್ ವಕೀಲರ ಮೆಮೋ ವಜಾ 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಕಾನೂನು ಸಂಕಷ್ಟಗಳು ಒಂದರ ಮೇಲೊಂದರಂತೆ ಮುಂದುವರಿದಿವೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಅವರು ‘ಮಾಫಿ ಸಾಕ್ಷಿ’ ಆಗಿ ಬದಲಾಗುವುದನ್ನು ವಿರೋಧಿಸಿ ದರ್ಶನ್ ಸಲ್ಲಿಸಿದ್ದ ಮೆಮೋವನ್ನು ಬೆಂಗಳೂರಿನ 59ನೇ ಸಿಸಿಹೆಚ್‌ ಸೆಷನ್ಸ್ ನ್ಯಾಯಾಲಯದ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ವಜಾಗೊಳಿಸಿದ್ದಾರೆ.

ಪ್ರದೋಷ್ ಮಾಫಿ ಸಾಕ್ಷಿ ತಡೆಕೋರಿದ್ದ ದರ್ಶನ್

ವಿಚಾರಣಾ ನ್ಯಾಯಾಲಯ (59ನೇ ಸಿಸಿಹೆಚ್ ಕೋರ್ಟ್) ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಅಂಗೀಕರಿಸಿತ್ತು. ಇದನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ದರ್ಶನ್ ಅರ್ಜಿಯನ್ನು ವಜಾಗೊಳಿಸಿ ಸಿಸಿಹೆಚ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ತದನಂತರ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಮಯಾವಕಾಶ ಬೇಕು ಹಾಗೂ ಅಲ್ಲಿಯವರೆಗೆ ಪ್ರದೋಷ್ ಸಾಕ್ಷ್ಯ ವಿಚಾರಣೆಗೆ ತಡೆ ನೀಡಬೇಕು ಎಂದು ದರ್ಶನ್ ವಕೀಲರು 59ನೇ ಸಿಸಿಹೆಚ್ ಕೋರ್ಟ್‌ಗೆ ಮೆಮೋ ಸಲ್ಲಿಸಿದ್ದರು.

ಮೆಮೋ ವಜಾ ಮಾಡಿದ ಕೋರ್ಟ್:

ವಿಚಾರಣೆ ನಡೆಸಿದ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು, ‘ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ಆರೋಪಿಗಳಿಗೆ ಸಂಪೂರ್ಣ ಹಕ್ಕಿದೆ. ಪ್ರದೋಷ್ ಸಾಕ್ಷ್ಯ ವಿಚಾರಣೆಯು ಸುಪ್ರೀಂಕೋರ್ಟ್ ನೀಡುವ ಮುಂದಿನ ಆದೇಶಕ್ಕೆ ಒಳಪಡುತ್ತದೆ’ ಎಂದು ಸ್ಪಷ್ಟಪಡಿಸಿ ದರ್ಶನ್ ವಕೀಲರ ಮೆಮೋವನ್ನು ವಜಾಗೊಳಿಸಿದರು. ಅಂದರೆ, ಸುಪ್ರೀಂಕೋರ್ಟ್​ ಮುಂದಿನ ದಿನಗಳಲ್ಲಿ ಪ್ರದೋಷ್​ನ ಮಾಫಿ ಸಾಕ್ಷಿ ಮಾಡಬಾರದು ಎಂದು ಆದೇಶಿಸಿದರೆ, ಆಗ ಪ್ರದೋಷ್ ಹೇಳಿಕೆಯನ್ನು ಕೈ ಬಿಡಲಾಗುವುದು ಎಂಬರ್ಥದಲ್ಲಿ ಹೇಳಿದೆ.

ಇದನ್ನೂ ಓದಿ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ, ದರ್ಶನ್​​ಗೂ ಶಾಕ್

ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ಆರಂಭ:

ಮೆಮೋ ವಜಾಗೊಳ್ಳುತ್ತಿದ್ದಂತೆಯೇ, ಸಿಸಿಹೆಚ್ ಕೋರ್ಟ್‌ನಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಆರಂಭಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದ ವಕೀಲರನ್ನು ಹೊರತುಪಡಿಸಿ ಉಳಿದೆಲ್ಲರನ್ನು ಕೋರ್ಟ್ ಸಿಬ್ಬಂದಿ ಹೊರಗೆ ಕಳುಹಿಸಿದ್ದು, ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್