AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರದೋಷ್​​ನ ಮಾಫಿ ಸಾಕ್ಷಿಯಾಗಿ ಏಕೆ ಪರಿಗಣಿಸಬಾರದು?; ವಕೀಲರಿಗೆ ಸುಪ್ರೀಂಕೋರ್ಟ್ ಪ್ರಶ್ನೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ. ಹಿರಿಯ ವಕೀಲ ನಾಗಮುತ್ತು ಉಲ್ಲೇಖಿಸಿದ ಹಳೆಯ ತೀರ್ಪುಗಳನ್ನು ಪರಿಶೀಲಿಸಿದ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

‘ಪ್ರದೋಷ್​​ನ ಮಾಫಿ ಸಾಕ್ಷಿಯಾಗಿ ಏಕೆ ಪರಿಗಣಿಸಬಾರದು?; ವಕೀಲರಿಗೆ ಸುಪ್ರೀಂಕೋರ್ಟ್ ಪ್ರಶ್ನೆ
ದರ್ಶನ್-ಪ್ರದೋಶ್
ರಮೇಶ್​ ಎಮ್​.
| Edited By: |

Updated on: Oct 07, 2026 | 12:33 PM

Share

ಮುಖ್ಯಾಂಶಗಳು

  • ಸುಪ್ರೀಂ ಕೋರ್ಟ್‌ನಲ್ಲಿ ವಿಜಯಲಕ್ಷ್ಮಿ ಅರ್ಜಿ ವಿಚಾರಣೆ
  • ಪ್ರದೋಷ್ ಮಾಫಿ ಸಾಕ್ಷಿಗೆ ವಕೀಲ ನಾಗಮುತ್ತು ತೀವ್ರ ಆಕ್ಷೇಪ
  • ದರ್ಶನ್ ಪರ ಹಿರಿಯ ವಕೀಲರ ವಾದ

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಕ್ರಮವನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾ. ಜೆ.ಬಿ.ಪರ್ದಿವಾಲಾ, ನ್ಯಾ. ಕೆ.ವಿನೋದ್ ಚಂದ್ರನ್ ಅವರಿರುವ ಪೀಠದಲ್ಲಿ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ವಿಜಯಲಕ್ಷ್ಮಿ ಪರ ವಕೀಲರಿಗೆ ಕೆಲವು ಪ್ರಶ್ನೆಗಳನ್ನು ಕೋರ್ಟ್ ಕೇಳಿದೆ. ಸದ್ಯ  ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಲಾಗಿದೆ.

ಇಂದು (ಅಕ್ಟೋಬರ್ 7) ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿಯ ವಿಚಾರಣೆ ಆರಂಭವಾಯಿತು. ವಿಜಯಲಕ್ಷ್ಮಿ ದರ್ಶನ್ ಪರವಾಗಿ ಹಿರಿಯ ವಕೀಲ ನಾಗಮುತ್ತು ವಾದ ಮಂಡಿಸಿ, ‘59ನೇ ಸಿವಿಲ್ ಕೋರ್ಟ್ ನೀಡಿದ ಆದೇಶವು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಗೆ ವಿರುದ್ಧವಾಗಿದೆ. ಪ್ರದೋಷ್‌ನನ್ನು ಮಾಫಿ ಸಾಕ್ಷಿ ಮಾಡುವ ಮುನ್ನ ಸಿಆರ್‌ಪಿಸಿ 164 ಅಡಿಯಲ್ಲಿ ಯಾವುದೇ ಹೇಳಿಕೆ ಪಡೆದಿಲ್ಲ. ಸಹ ಆರೋಪಿಗಳಿಗೆ ಮಾಹಿತಿ ನೀಡದೆ, ಅಂಧಕಾರದಲ್ಲಿಟ್ಟು ಮಾಫಿ ಸಾಕ್ಷಿ ಅರ್ಜಿ ಸಲ್ಲಿಸಲಾಗಿದೆ’ ಎಂದು ಕೋರ್ಟ್‌ಗೆ ತಿಳಿಸಿದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್ ಪೀಠವು, ‘ಪ್ರದೋಷ್​​ನ ಮಾಫಿ ಸಾಕ್ಷಿಯಾಗಿ ಏಕೆ ಪರಿಗಣಿಸಬಾರದು? ಅವರು ಏನು ಹೇಳುತ್ತಾರೆ ಎಂಬುದು ನಮಗೆ ಗೊತ್ತಿಲ್ಲ. ಪ್ರದೋಷ್ ಪರ ವಕೀಲರೇ ಮಾಫಿ ಸಾಕ್ಷಿ ಅರ್ಜಿ ಸಲ್ಲಿಸಿದ್ದಾರಲ್ಲವೇ? ಅದನ್ನು ಹೈಕೋರ್ಟ್ ಎತ್ತಿಹಿಡಿದಿದೆಯಲ್ಲವೇ?’ ಎಂದು ವಕೀಲರನ್ನು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ನಾಗಮುತ್ತು, ‘ಸಹ ಆರೋಪಿಗೆ ಆತ ಏನು ಹೇಳಲು ಹೊರಟಿದ್ದಾನೆ ಎಂಬುದು ಸ್ಪಷ್ಟವಾಗಿ ತಿಳಿಯಬೇಕು’ ಎಂದು ಈ ಸಂಬಂಧಿತ ಫಾಸ್ಕಲ್ ಫರ್ನಾಂಡೀಸ್ ಹಾಗೂ ಅಶೋಕ್ ಕುಮಾರ್ ಅಗರ್ವಾಲ್ ಪ್ರಕರಣಗಳ ಹಳೆಯ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್

ವಕೀಲರು ಉಲ್ಲೇಖಿಸಿದ ಹಿಂದಿನ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!