AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಪ್ರಾಣ ಬೆದರಿಕೆ; ‘ಡಿ ಕಂಪನಿ’ ಫ್ಯಾನ್ ಪೇಜ್ ಅಡ್ಮಿನ್ ಸೇರಿ 3 ಫ್ಯಾನ್ಸ್ ಅರೆಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಸಾಕ್ಷಿಗೆ ಪ್ರಾಣ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. 'ಡಿ ಕಂಪನಿ' ಫ್ಯಾನ್ ಪೇಜ್ ಅಡ್ಮಿನ್ ಸೇರಿದಂತೆ ಬಂಧಿತರು ಸಾಕ್ಷಿಯನ್ನು ಕಾರಿನಲ್ಲಿ ಅಪಹರಿಸಿ ಧಮ್ಕಿ ಹಾಕಿದ ಶಾಕಿಂಗ್ ವಿವರ ಇಲ್ಲಿದೆ.

ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಪ್ರಾಣ ಬೆದರಿಕೆ; 'ಡಿ ಕಂಪನಿ' ಫ್ಯಾನ್ ಪೇಜ್ ಅಡ್ಮಿನ್ ಸೇರಿ 3 ಫ್ಯಾನ್ಸ್ ಅರೆಸ್ಟ್
ದರ್ಶನ್
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jul 01, 2026 | 10:53 PM

Share

ಮುಖ್ಯಾಂಶಗಳು

  • ಕೋರ್ಟ್ ಸಾಕ್ಷಿಗೆ 'ಡಿ ಕಂಪನಿ' ಗ್ಯಾಂಗ್ ಧಮ್ಕಿ
  • ತುಮಕೂರು ದರ್ಶನ್ ಅಭಿಮಾನಿ ಸಂಘದ ಸದಸ್ಯರು ಅಂದರ್
  • ಕಾಮಾಕ್ಷಿಪಾಳ್ಯ ಪೊಲೀಸರ ಸಕಾಲಿಕ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಆರೋಪಿಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್‌ನ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿತ್ತು. ಈ ಬಗ್ಗೆ ಸಾಕ್ಷಿದಾರ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಸಾಕ್ಷಿಗೆ ಬಿಗಿ ರಕ್ಷಣೆ ನೀಡಿ, ಬೆದರಿಕೆ ಹಾಕಿದ ಆರೋಪಿಗಳಿಗಾಗಿ ಜಾಲ ಬೀಸಿದ್ದರು. ಸದ್ಯ ಕಾರ್ಯಾಚರಣೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ವೇಣು, ಸುಹಾಸ್ ಮತ್ತು ಪುನೀತ್ ಎಂಬ ಮೂವರನ್ನು ಅರೆಸ್ಟ್ ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಧಿತ ಆರೋಪಿಗಳ ಹಿನ್ನೆಲೆಯನ್ನು ಕೆದಕಿದಾಗ ಆಘಾತಕಾರಿ ಸತ್ಯಗಳು ಹೊರಬಂದಿವೆ. ಬಂಧಿತರಲ್ಲಿ ಪುನೀತ್ ಎಂಬಾತ ಸೋಶಿಯಲ್ ಮೀಡಿಯಾದಲ್ಲಿ ‘ಡಿ ಕಂಪನಿ’ ಫ್ಯಾನ್ ಪೇಜ್ ಅನ್ನು ಸಕ್ರಿಯವಾಗಿ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರಾಗಿದ್ದಾರೆ.

ಸಾಕ್ಷಿದಾರ ಸಂದೀಪ್‌ ಅವರ ಜೊತೆ ಮಾತುಕತೆ ನಡೆಸುವ ನೆಪದಲ್ಲಿ ಯಾವುದೋ ಒಂದು ಜಾಗಕ್ಕೆ ಕರೆಸಿಕೊಂಡಿದ್ದ ಈ ಗ್ಯಾಂಗ್, ಆತನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡಿಸಿದೆ. ಈ ವೇಳೆ ಕೋರ್ಟ್‌ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ತೀವ್ರ ಒತ್ತಡ ಹೇರಿದ್ದಾರೆ. ಇದಕ್ಕೆ ಸಾಕ್ಷಿದಾರ ಒಪ್ಪದಿದ್ದಾಗ ಆರೋಪಿ ಸುಹಾಸ್ ಜೈಲಿನಲ್ಲಿರುವ ದರ್ಶನ್ ಹೆಸರೇಳಿ ಪ್ರಾಣ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್: 17ನೇ ಸಾಕ್ಷಿಗೆ ಬೆದರಿಕೆ ಕರೆ; ಭದ್ರತೆ ನೀಡಲು ಕೋರ್ಟ್ ಆದೇಶ

ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಮತ್ತು ಆತನ ಗೆಳತಿ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿದ್ದಾರೆ. ಪವಿತ್ರಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್‌ಆರ್ ನಗರದ ಶೆಡ್‌ಗೆ ಕರೆತಂದು ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ಇದೆ. ಈ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ಈಗಾಗಲೇ ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಸದ್ಯ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ