ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್​ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾ ಸ್ವಾಮಿ

ದರ್ಶನ್ ಮೇಲೆ ಕೊಲೆ ಆರೋಪ ಬಂದಿದೆ. ರೇಣುಕಾಸ್ವಾಮಿಯನ್ನು ಅವರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರನ್ನು ಟ್ರಿಗರ್ ಮಾಡಿದ ವಿಚಾರ ಬೇರೆಯೇ ಇದೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.

ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್​ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾ ಸ್ವಾಮಿ
ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್​ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾ ಸ್ವಾಮಿ
Follow us
Prajwal Kumar NY
| Updated By: ರಾಜೇಶ್ ದುಗ್ಗುಮನೆ

Updated on:Jun 12, 2024 | 8:34 AM

ಚಿತ್ರದುರ್ಗದ ರೇಣುಕಾ ಸ್ವಾಮಿ (Renukaswamy) ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದನ್ನು ದರ್ಶನ್ ಸಹಿಸಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಎದುರಾಗಿದೆ. ದರ್ಶನ್​ಗೆ ಸಹಾಯ ಮಾಡಿದ ಎಲ್ಲರೂ ಈಗ ಜೈಲು ಸೇರಿದ್ದಾರೆ. ಅಷ್ಟಕ್ಕೂ ರೇಣುಕಾ ಸ್ವಾಮಿ ಕಳುಹಿಸಿದ ಮೆಸೇಜ್ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯದಲ್ಲಿ ಪವಿತ್ರಾ ಗೌಡ ಎಂಟ್ರಿ ಆಗಿದ್ದಾರೆ ಎನ್ನುವ ಮಾತಿದೆ. ಈ ವಿಚಾರದಲ್ಲಿ ಪವಿತ್ರಾ ಹಾಗೂ ವಿಜಯಲಕ್ಷ್ಮಿ ಮಧ್ಯೆ ಕಿರಿಕ್ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇವರು ಓಪನ್ ಆಗಿ ಕಿತ್ತಾಡಿಕೊಂಡಿದ್ದರು. ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಸಾರ ಚೆನ್ನಾಗಿರಬೇಕು ಎಂದು ಬಯಸಿದ ರೇಣುಕಾಸ್ವಾಮಿ ಅವರು ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು.

ಕೊಲೆಯಾದ ರೇಣುಕ ಸ್ವಾಮಿ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡೋಕೆ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದರೂ ಹೊಸ ಅಕೌಂಟ್ ಓಪನ್ ಮಾಡಿ ಅಶ್ಲೀಲವಾಗಿ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಇದರಿಂದ ಪವಿತ್ರಾ ಸಾಕಷ್ಟು ಚಿಂತೆಗೆ ಒಳಗಾಗಿದ್ದರು.

ಇದನ್ನೂ ಓದಿ: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ

ದರ್ಶನ್​ಗೆ ತಿಳಿದಿದ್ದು ಹೇಗೆ?

ರೇಣುಕಾ ಸ್ವಾಮಿಯ ವಿಕೃತಿಯನ್ನು ಮನೆಗೆಲಸದವನಾದ ಪವನ್​ಗೆ ಪವಿತ್ರಾ ಗೌಡ ಹೇಳಿದ್ದರು. ‘ಯಾವುದೇ ಕಾರಣಕ್ಕೂ ದರ್ಶನ್​ಗೆ ಹೇಳಬೇಡ. ಅವನು ಏನಾದ್ರು ಮಾಡಿಬಿಡ್ತಾನೆ’ ಎಂದು ಪವನ್​ಗೆ ಕಿವಿಮಾತು ಕೂಡ ಹೇಳಿದ್ದರು. ಆದರೆ, ಪವನ್ ಬಾಯಲ್ಲಿ ಹೆಚ್ಚು ಹೊತ್ತು ಈ ಗುಟ್ಟು ನಿಲ್ಲಲಿಲ್ಲ. ಅವನು ದರ್ಶನ್​ಗೆ ವಿಚಾರ ತಿಳಿಸಿದ್ದ. ಆಮೇಲೆ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದರು. ಆ ಬಳಿಕ ಹಲ್ಲೆ ನಡೆಸಿ, ಕೊಲೆ ಮಾಡಲಾಯಿತು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:33 am, Wed, 12 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ