ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
Edited By:

Updated on: Oct 16, 2024 | 8:42 AM

ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಇದನ್ನೂ ಓದಿ: ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು 

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us