AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಹುಡುಗನನ್ನು ಮದುವೆ ಆಗ್ತಾರಾ ರಶ್ಮಿಕಾ ಮಂದಣ್ಣ? ಹರಿದಾಡುತ್ತಿದೆ ಹೊಸ ಗಾಸಿಪ್​

Rashmika Mandanna: ‘ಸುಲ್ತಾನ್​’ ಸಿನಿಮಾ ಮೂಲಕ ರಶ್ಮಿಕಾ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಆ ಸಿನಿಮಾ ತೆರೆಕಂಡ ನಂತರ ಅವರು ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿಸಿಕೊಂಡರು. ಅಲ್ಲದೆ ಅವರು ಅಲ್ಲಿನ ಸಂಸ್ಕೃತಿಗೆ ಮಾರು ಹೋಗಿದ್ದಾರಂತೆ.

ತಮಿಳು ಹುಡುಗನನ್ನು ಮದುವೆ ಆಗ್ತಾರಾ ರಶ್ಮಿಕಾ ಮಂದಣ್ಣ? ಹರಿದಾಡುತ್ತಿದೆ ಹೊಸ ಗಾಸಿಪ್​
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
| Edited By: |

Updated on: May 16, 2021 | 3:56 PM

Share

ನಟಿ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ದೇಶಾದ್ಯಂತ ಹಬ್ಬಿದೆ. ಕನ್ನಡದಿಂದ ಸಿನಿಮಾ ಜರ್ನಿ ಆರಂಭಿಸಿದ ಅವರು ಪರಭಾಷೆಯಲ್ಲಿಯೇ ಈಗ ಹೆಚ್ಚು ಬ್ಯುಸಿ ಆಗಿದ್ದಾರೆ. ಸ್ಯಾಂಡಲ್​ವುಡ್​ ಸಿನಿಮಾಗಳಿಗಿಂತಲೂ ಟಾಲಿವುಡ್​, ಕಾಲಿವುಡ್​ ಮತ್ತು ಬಾಲಿವುಡ್​ನಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ. ಸಿನಿಮಾ ಮಾತ್ರವಲ್ಲದೇ ಅವರು ವೈಯಕ್ತಿಕ ಕಾರಣಕ್ಕಾಗಿಯೂ ಆಗಾಗ ಸುದ್ದಿ ಆಗುತ್ತಾರೆ. ಅಚ್ಚರಿ ಎಂದರೆ ಅವರು ತಮಿಳು ಹುಡುಗನನ್ನು ಮದುವೆ ಆಗುತ್ತೇನೆ ಎಂದು ಹೇಳಿರುವ ವಿಚಾರ ಈಗ ಹೆಚ್ಚು ವೈರಲ್​ ಆಗುತ್ತಿದೆ.

ಕಾರ್ತಿ ನಟನೆಯ ‘ಸುಲ್ತಾನ್​’ ಸಿನಿಮಾ ಮೂಲಕ ರಶ್ಮಿಕಾ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಆ ಸಿನಿಮಾ ತೆರೆಕಂಡ ಬಳಿಕ ಅವರು ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿಸಿಕೊಂಡರು. ಅಲ್ಲದೆ ಅವರು ಅಲ್ಲಿನ ಸಂಸ್ಕೃತಿಗೆ ಮಾರು ಹೋಗಿದ್ದಾರಂತೆ. ಈ ಎಲ್ಲ ವಿಚಾರಗಳ ಕುರಿತಂತೆ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಹಲವೆಡೆ ವರದಿ ಆಗಿದೆ.

‘ತಮಿಳುನಾಡಿನ ಸಂಸ್ಕೃತಿ ನನಗೆ ಹೆಚ್ಚು ಇಷ್ಟವಾಗಿದೆ. ಅದರಲ್ಲೂ ಇಲ್ಲಿನ ಅಡುಗೆ ತುಂಬ ಇಷ್ಟ. ತಮಿಳುನಾಡಿನ ಊಟ ತುಂಬ ರುಚಿಯಾಗಿರುತ್ತದೆ. ನಾನು ತಮಿಳು ಹುಡುಗನನ್ನೇ ಮದುವೆ ಆಗಿ ತಮಿಳುನಾಡಿನ ಸೊಸೆ ಆಗುತ್ತೇನೆ ಎನಿಸುತ್ತದೆ’ ಎಂದು ರಶ್ಮಿಕಾ ಹೇಳಿದ್ದಾರೆ ಎಂಬುದಾಗಿ ಕೆಲವು ವೆಬ್​ಸೈಟ್​ಗಳು ವರದಿ ಮಾಡಿವೆ. ಹಾಗಾದರೆ ರಶ್ಮಿಕಾರನ್ನು ಕೈ ಹಿಡಿಯಲಿರುವ ಆ ಲಕ್ಕಿ ತಮಿಳು ಹುಡುಗ ಯಾರಿರಬಹುದು ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ರಕ್ಷಿತ್​ ಶೆಟ್ಟಿ ಜೊತೆ ರಶ್ಮಿಕಾಗೆ ಎಂಗೇಜ್​ಮೆಂಟ್​ ಆಗಿತ್ತು. ಆದರೆ ಅದು ಮದುವೆಯವರೆಗೆ ಬರಲೇ ಇಲ್ಲ. ಇಬ್ಬರ ಮಧ್ಯೆ ವೈಮನಸ್ಸು ಉಂಟಾದ ಕಾರಣ ಅವರು ಬ್ರೇಕಪ್​ ಮಾಡಿಕೊಂಡರು. ನಂತರ ವಿಜಯ್​ ದೇವರಕೊಂಡ ಜೊತೆ ರಶ್ಮಿಕಾ ಹೆಸರು ತಳುಕು ಹಾಕಿಕೊಂಡಿತು. ಆದರೆ ನಾವಿಬ್ಬರು ಕೇವಲ ಬೆಸ್ಟ್​ ಫ್ರೆಂಡ್ಸ್​ ಎನ್ನುವ ಮೂಲಕ ಅವರು ಎಲ್ಲ ವದಂತಿಗಳನ್ನು ತಳ್ಳಿ ಹಾಕಿದರು. ಸದ್ಯ ರಶ್ಮಿಕಾ ಕೈಯಲ್ಲಿ ಒಳ್ಳೊಳ್ಳೆಯ ಆಫರ್​ಗಳಿವೆ. ಹಿಂದಿಯ ‘ಗುಡ್​ ಬೈ’ ಸಿನಿಮಾದಲ್ಲಿ ಅವರು ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್