Rocking Star Yash: ‘ಎಲ್ಲರನ್ನೂ ಗೌರವಿಸೋಣ’; ನೇರವಾಗಿ ಪ್ರತಿಕ್ರಿಯಿಸಿದ ರಾಕಿಂಗ್ ಸ್ಟಾರ್ ಯಶ್
ಇತ್ತೀಚೆಗೆ ಬಾಲಿವುಡ್ನ ಹಲವು ಸಿನಿಮಾಗಳು ಸೋತಿವೆ. ಈ ವರ್ಷ ಅಲ್ಲಿ ಗೆದ್ದ ಸಿನಿಮಾಗಳು ಬೆರಳೆಣಿಕೆ ಮಾತ್ರ. ಹಿಂದಿಗೆ ಡಬ್ ಆಗಿ ತೆರೆಕಂಡ ಹಲವು ದಕ್ಷಿಣದ ಚಿತ್ರಗಳು ದೊಡ್ಡ ಮಟ್ಟದ ಯಶಸ್ಸು ಕಂಡಿವೆ.
ಯಶ್ (Yash) ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ‘ಕೆಜಿಎಫ್ 2’ (KGF Chapter 2) ತೆರೆಕಂಡು ಹಲವು ತಿಂಗಳು ಕಳೆದರೂ ಯಶ್ ಮುಂದಿನ ಸಿನಿಮಾ ಯಾವುದು ಎಂಬುದು ಘೋಷಣೆ ಆಗಿಲ್ಲ. ಈ ಮಧ್ಯೆ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ ಇತ್ತೀಚೆಗೆ ಹೆಚ್ಚು ಚರ್ಚೆ ಆಗುತ್ತಿರುವ ಬಾಲಿವುಡ್ vs ದಕ್ಷಿಣ ಸಿನಿಮಾ ಇಂಡಸ್ಟ್ರಿ ಬಗ್ಗೆ ಯಶ್ ಮಾತನಾಡಿದ್ದಾರೆ. ‘ಎಲ್ಲಾ ಚಿತ್ರರಂಗಕ್ಕೆ ಗೌರವ ನೀಡಬೇಕು’ ಎಂದು ಅವರು ಹೇಳಿದ್ದಾರೆ.
ಫಿಲ್ಮ್ ಕಂಪ್ಯಾನಿಯನ್ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಅವರು ನೇರ ನುಡಿಗಳಿಂದ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಕರ್ನಾಟಕದ ಜನರು ಬೇರೆ ಇಂಡಸ್ಟ್ರಿ ಬಗ್ಗೆ ಕೀಳಾಗಿ ಮಾತನಾಡಬಾರದು. ಎಲ್ಲರೂ ನಮ್ಮನ್ನು ಹಾಗೆ ನಡೆಸಿಕೊಂಡಾಗ ನಾವು ಕೂಡ ಆ ಸಮಸ್ಯೆಯನ್ನು ಎದುರಿಸಿದ್ದೆವು. ಆ ಗೌರವ ಪಡೆಯಲು ಶ್ರಮಿಸಿದ್ದೇವೆ. ಅದು ಸಿಕ್ಕ ನಂತರ ನಾವು ಯಾರನ್ನೂ ಕೆಟ್ಟದಾಗಿ ನಡೆಸಿಕೊಳ್ಳಬಾರದು. ನಾವು ಎಲ್ಲರನ್ನೂ ಗೌರವಿಸಬೇಕು. ಬಾಲಿವುಡ್ ಅನ್ನು ಗೌರವಿಸಿ. ಈ ಉತ್ತರ ಮತ್ತು ದಕ್ಷಿಣ ಎಂಬುದನ್ನು ಮರೆತುಬಿಡಿ’ ಎಂದು ಕೋರಿದ್ದಾರೆ ಯಶ್.
ಒಟ್ಟಾಗಿ ಕೆಲಸ ಮಾಡೋಣ ಎಂದ ಯಶ್
‘ನಾವು ಉತ್ತಮ ಸಿನಿಮಾಗಳನ್ನು ಮಾಡಬೇಕು. ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ಚಿತ್ರಮಂದಿರಗಳನ್ನು ನಿರ್ಮಿಸಬೇಕು. ಮಾಡಲು ತುಂಬಾ ಕೆಲಸಗಳಿವೆ. ನಮ್ಮ ನಡುವೆ ಜಗಳವಾಡುವುದನ್ನು ನಾವು ನಿಲ್ಲಿಸಬೇಕಿದೆ. ಹೊರಗಿನ ಪ್ರಪಂಚದೊಂದಿಗೆ ಸ್ಪರ್ಧಿಸಬೇಕಿದೆ’ ಎಂದಿದ್ದಾರೆ. ಈ ಮೂಲಕ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Yash: ‘ಬಾಹುಬಲಿ 2’ ದಾಖಲೆಯನ್ನು ಮುರಿದ ‘ಕೆಜಿಎಫ್ 2’; ಇದು ಯಶ್ ಸಿನಿಮಾ ಸಾಧನೆ
ಯಾಕೆ ಈ ಚರ್ಚೆ?
ಇತ್ತೀಚೆಗೆ ಬಾಲಿವುಡ್ನ ಹಲವು ಸಿನಿಮಾಗಳು ಸೋತಿವೆ. ಈ ವರ್ಷ ಅಲ್ಲಿ ಗೆದ್ದ ಸಿನಿಮಾಗಳು ಬೆರಳೆಣಿಕೆ ಮಾತ್ರ. ಹಿಂದಿಗೆ ಡಬ್ ಆಗಿ ತೆರೆಕಂಡ ಹಲವು ದಕ್ಷಿಣದ ಚಿತ್ರಗಳು ದೊಡ್ಡ ಮಟ್ಟದ ಯಶಸ್ಸು ಕಂಡಿವೆ. ಈ ಕಾರಣಕ್ಕೆ ದಕ್ಷಿಣ ಭಾರತ ಹಾಗೂ ಬಾಲಿವುಡ್ ಎಂಬ ಚರ್ಚೆ ಜೋರಾಗಿದೆ. ಈ ಮೊದಲೆಲ್ಲ ಭಾರತ ಚಿತ್ರರಂಗ ಎಂದರೆ ಬಾಲಿವುಡ್ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರಾದೇಶಿಕ ಸಿನಿಮಾಗಳು ಗೆಲುವು ಕಾಣುತ್ತಿವೆ. ಈ ಸಂದರ್ಭದಲ್ಲಿ ಕೆಲವರು ಬಾಲಿವುಡ್ ಬಗ್ಗೆ ಕೀಳಾಗಿ ಮಾತನಾಡಿದ್ದರು. ಈ ರೀತಿ ಆಗಬಾರದು ಎಂಬುದು ಅನೇಕರ ಕೋರಿಕೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:08 pm, Fri, 23 December 22