AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈಡ್ ಫಾರ್ ಅಪ್ಪು’: ಪುನೀತ್​ ಸ್ಮರಣಾರ್ಥ ಬೈಕ್ ಮೆರವಣಿಗೆಗೆ ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ

ಪುನೀತ್​ ರಾಜ್​ಕುಮಾರ್​ ಅಗಲಿ ಒಂದು ತಿಂಗಳಾಗಿದೆ. ಅವರ ನೆನಪಿನಲ್ಲಿ ‘ಟೀಮ್ ದ್ವಿಚಕ್ರ’ ಮತ್ತು ‘ಇಂಚರ ಸ್ಟುಡಿಯೋ’ ವತಿಯಿಂದ ಭಾನುವಾರ (ನ.28) ಏರ್ಪಡಿಸಿದ್ದ ‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆಗೆ ಚಾಲನೆ ನೀಡಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿದರು.

‘ರೈಡ್ ಫಾರ್ ಅಪ್ಪು’: ಪುನೀತ್​ ಸ್ಮರಣಾರ್ಥ ಬೈಕ್ ಮೆರವಣಿಗೆಗೆ ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ
ಡಾ. ಸಿ.ಎನ್. ಅಶ್ವತ್ಥ ನಾರಾಯಣ
TV9 Web
| Edited By: |

Updated on: Nov 28, 2021 | 1:49 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ನಮ್ಮೊಂದಿಗೆ ಇಲ್ಲ ಎಂಬುದು ಕಹಿ ಸತ್ಯ. ಆದರೆ ಅವರ ನೆನಪುಗಳು ಶಾಶ್ವತ. ಅಪ್ಪು ಹೆಸರನ್ನು ಅಮರವಾಗಿಸಲು ಅನೇಕ ಕೆಲಸಗಳನ್ನು ಮಾಡಲಾಗುತ್ತಿದೆ. ಪುನೀತ್​ ಸ್ಮರಣಾರ್ಥ ಅಭಿಮಾನಿಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಸೈಕಲ್ ಜಾಥಾ ನಡೆದಿತ್ತು. ಈಗ ಬೈಕ್​ ಮೆರವಣಿಗೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮಲ್ಲೇಶ್ವರ ಕ್ಷೇತ್ರದ ಶಾಸಕ, ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ (Dr C N Ashwath Narayan) ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ‘ಪುನೀತ್ ರಾಜ್​ಕುಮಾರ್ ಅಭಿನಯದ ಜೊತೆಗೆ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆಯಲ್ಲಿ ತೊಡಗಲು ಸದಾ ಪ್ರೇರಕ ಶಕ್ತಿಯಾಗಿ ಚಿರಾಯುವಾಗಿರುತ್ತಾರೆ’ ಎಂದು ಹೇಳಿದರು.

ಅಪ್ಪು ಅಗಲಿ ಒಂದು ತಿಂಗಳಾಗಿದೆ. ಅವರ ನೆನಪಿಗಾಗಿ ‘ಟೀಮ್ ದ್ವಿಚಕ್ರ’ ಮತ್ತು ‘ಇಂಚರ ಸ್ಟುಡಿಯೋ’ ವತಿಯಿಂದ ಭಾನುವಾರ (ನ.28) ಏರ್ಪಡಿಸಿದ್ದ ‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆಗೆ ಚಾಲನೆ ನೀಡಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿದರು. ‘ಪುನೀತ್ ಅವರ ಸಾಧನೆಯು ದಿನದಿನವೂ ಹೆಚ್ಚೆಚ್ಚು ಜನರನ್ನು ತಲುಪುತ್ತಿದೆ. ಇದು ನಮ್ಮ ವಿದ್ಯಾರ್ಥಿ ಸಮೂಹ ಸೇರಿದಂತೆ ಎಲ್ಲರಿಗೂ ಸ್ಫೂರ್ತಿ ಆಗಬೇಕು. ಪ್ರತಿಯೊಬ್ಬರೂ ತಂತಮ್ಮ ಕ್ಷೇತ್ರದಲ್ಲಿ ಸ್ವಂತಿಕೆ ಹಾಗೂ ಸಮಾಜಪರ ಮನೋಭಾವದೊಂದಿಗೆ ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.

‘ಸ್ವಾತಂತ್ರ್ಯ ಉದ್ಯಾನದಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ಮನಗಾಣಿಸುವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಅಶ್ವತ್ಥ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಡುಗಡೆ ಆಗಲಿದೆ ‘ಲಕ್ಕಿ ಮ್ಯಾನ್​’

ಮೃತರಾಗುವುದಕ್ಕೂ ಮುನ್ನ ಪುನೀತ್​ ರಾಜ್​ಕುಮಾರ್​ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆದರೆ ಆ ಚಿತ್ರಗಳು ತೆರೆ ಕಾಣುವುದಕ್ಕೂ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಪುನೀತ್​ ನಟಿಸುತ್ತಿದ್ದ ಒಂದೆರಡು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ ಎಂಬುದು ಸಮಾಧಾನಕರ ಸಂಗತಿ. ಆ ಪೈಕಿ ‘ಜೇಮ್ಸ್​’ ಸಿನಿಮಾ ರಿಲೀಸ್​ ಆಗುವುದು ಖಚಿತ ಎಂಬುದು ಈಗಾಗಲೇ ಗೊತ್ತಾಗಿದೆ. ಅಷ್ಟೇ ಅಲ್ಲದೇ, ಅಪ್ಪು ಜತೆ ಪ್ರಭುದೇವ  ಮತ್ತು ಡಾರ್ಲಿಂಗ್​ ಕೃಷ್ಣ ನಟಿಸಿರುವ ‘ಲಕ್ಕಿ ಮ್ಯಾನ್​’ ಶೂಟಿಂಗ್​ ಕೂಡ ಪೂರ್ಣಗೊಂಡಿದೆ. ಆ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ಡಿಸೆಂಬರ್​ ಅಥವಾ ಜನವರಿಯಲ್ಲಿ ‘ಲಕ್ಕಿ ಮ್ಯಾನ್​’ ಬಿಡುಗಡೆ ಮಾಡುವ ಗುರಿ ಇರಿಸಿಕೊಳ್ಳಲಾಗಿದೆ. ಅದಕ್ಕೆ ಅನುಗುಣವಾಗಿ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ.

ಇದನ್ನೂ ಓದಿ:

‘ನನ್ನ ಹುಟ್ಟುಹಬ್ಬಕ್ಕೆ ಅಪ್ಪು ಸೈಕಲ್​ ಗಿಫ್ಟ್​ ಮಾಡಿದ್ದ’; ವಿಶೇಷ ನೆನಪು ಮೆಲುಕು ಹಾಕಿದ ಶಿವಣ್ಣ

ಮೈತುಂಬ ಅಪ್ಪು ಚಿತ್ರ, 300 ಕಿಮೀ ಸೈಕಲ್​ ಸವಾರಿ; ಪುನೀತ್​ ಸಮಾಧಿಗೆ ಅಪರೂಪದ ಅಭಿಮಾನಿ ಭೇಟಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ