ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಅವರ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಅವರು ಎರಡನೇ ಬಾರಿಗೆ ತಂದೆ ಆಗಿದ್ದಾರೆ. ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ (Pragathi Shetty) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯ ಸಮಾಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ರಿಷಬ್ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ನಿಯ ಫೋಟೋ ಶೇರ್ ಮಾಡಿಕೊಂಡಿರುವ ರಿಷಬ್ ಅವರು, ‘ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ-ಮಗು ಆರೋಗ್ಯವಾಗಿದ್ದಾರೆ’ ಎಂದು ಪೋಸ್ಟ್ ಮಾಡಿದ್ದಾರೆ. ಮಗುವಿನ ಫೋಟೋವನ್ನು ಅವರು ಶೇರ್ ಮಾಡಿಕೊಂಡಿಲ್ಲ. ಸೆಲೆಬ್ರಿಟಿ ದಂಪತಿಯ ಮಗಳನ್ನು (Baby Girl) ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.
2017ರಲ್ಲಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಗೆ 2019ರಲ್ಲಿ ಮೊದಲ ಮಗು ಜನಿಸಿತು. ಪುತ್ರನಿಗೆ ರಣ್ವಿತ್ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಈಗ ಎರಡನೇ ಮಗುವಿಗೆ ಪ್ರಗತಿ ಶೆಟ್ಟಿ ಜನ್ಮ ನೀಡಿರುವುದು ಅವರ ಕುಟುಂಬದಲ್ಲಿ ಖುಷಿ ತಂದಿದೆ. ಮಗಳ ಆಗಮನದಿಂದ ಸಂಭ್ರಮಿಸುತ್ತಿರುವ ಈ ದಂಪತಿಗೆ ಚಿತ್ರರಂಗದ ಅನೇಕರು ಶುಭ ಕೋರಿದ್ದಾರೆ. ‘ಮುದ್ದಾದ ಮಗುವಿಗೆ ಜನ್ಮನೀಡಿದ ಪ್ರಗತಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಅಣ್ಣನಿಗೆ ಅಭಿನಂದನೆಗಳು. ನಮ್ಮ ಪ್ರೀತಿ, ಪ್ರಾರ್ಥನೆ ಸದಾ ನಿಮ್ಮೊಂದಿಗೆ’ ಎಂದು ನಟ ಶೈನ್ ಶೆಟ್ಟಿ ಬರೆದುಕೊಂಡಿದ್ದಾರೆ.
ಮೂಲತಃ ಮಂದಾರ್ತಿಯವರಾದ ಪ್ರಗತಿ ಶೆಟ್ಟಿ ಅವರು ರಿಷಬ್ ಶೆಟ್ಟಿಯ ಸಿನಿಪಯಣಕ್ಕೆ ಬೆಂಬಲವಾಗಿ ನಿಲ್ಲುವುದರ ಜೊತೆಗೆ ಸಂಸಾರದ ಕಡೆಗೂ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ಕಾಸ್ಟ್ಯೂಮ್ ಡಿಸೈನರ್ ಆಗಿ ಗುರುತಿಸಿಕೊಂಡಿದ್ದಾರೆ. ರಿಷಬ್ ನಟನೆ ಮತ್ತು ನಿರ್ದೇಶನದ ಚಿತ್ರಗಳಿಗೆ ಅವರು ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.
ಮೂಲ ಊರು ಮಂದಾರ್ತಿ ಆಗಿದ್ದರೂ ಕೂಡ ಪ್ರಗತಿ ಶೆಟ್ಟಿ ಅವರು ಬಾಲ್ಯ ಕಳೆದಿದ್ದು ಶಿವಮೊಗ್ಗದಲ್ಲಿ. ಅಲ್ಲಿನ ಸಹ್ಯಾದ್ರಿ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದ ಬಳಿಕ ಅವರು ಬೆಂಗಳೂರಿಗೆ ಬಂದು ಐಟಿ ಕಂಪನಿಯಲ್ಲಿ ಕೆಲವು ವರ್ಷಗಳ ಕಾಲ ಕೆಲಸ ಮಾಡಿದರು. ನಂತರ ರಿಷಬ್ ಶೆಟ್ಟಿ ಜೊತೆ ಅವರಿಗೆ ಪ್ರೀತಿ ಚಿಗುರಿತು. ಇಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಕ್ಕ ಬಳಿಕ 2017ರಲ್ಲಿ ಈ ಜೋಡಿ ಹಕ್ಕಿಗಳು ಹಸೆಮಣೆ ಏರಿದ್ದರು. ಮದುವೆ ನಂತರ ಸಿನಿಮಾರಂಗದಲ್ಲಿ ಪ್ರಗತಿ ಅವರು ತೊಡಗಿಕೊಂಡರು. ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’, ‘ಬೆಲ್ ಬಾಟಂ’, ‘ಕಥಾ ಸಂಗಮ’ ಮುಂತಾದ ಸಿನಿಮಾಗಳಿಗೆ ಅವರು ವಸ್ತ್ರ ವಿನ್ಯಾಸ ಮಾಡಿದ್ದಾರೆ.
ಇದನ್ನೂ ಓದಿ:
‘ಪೆದ್ರೂ’ ಚಿತ್ರಕ್ಕೆ ಬೆಂಗಳೂರು ಸಿನಿಮೋತ್ಸವದಲ್ಲಿ ಇಲ್ಲ ಮನ್ನಣೆ; ಬಹಿರಂಗ ಪತ್ರದಲ್ಲಿ ರಿಷಬ್ ಶೆಟ್ಟಿ ಅಸಮಾಧಾನ
‘ರಿಷಬ್ಗೆ ಹೀರೋಯಿನ್ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್ ಬಿ. ಶೆಟ್ಟಿ