AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ 2’ ಚಿತ್ರದಲ್ಲಿ ಮೋಹನ್​ಲಾಲ್? ಭೇಟಿಯಿಂದ ಮೂಡಿತು ಅನುಮಾನ

ರಿಷಬ್ ಶೆಟ್ಟಿ ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು. ‘ನನಗೆ ಅವರು ಆಫರ್ ನೀಡಿದ್ದು ನಿಜ. ಆದರೆ, ಅದನ್ನು ನಾನು ಒಪ್ಪಿಲ್ಲ’ ಎಂದು ಅವರು ಹೇಳಿದ್ದರು. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

Rishab Shetty: ‘ಕಾಂತಾರ 2’ ಚಿತ್ರದಲ್ಲಿ ಮೋಹನ್​ಲಾಲ್? ಭೇಟಿಯಿಂದ ಮೂಡಿತು ಅನುಮಾನ
ಮೋಹನ್​ಲಾಲ್-ರಿಷಬ್
ರಾಜೇಶ್ ದುಗ್ಗುಮನೆ
|

Updated on:Apr 19, 2024 | 7:58 AM

Share

ರಿಷಬ್ ಶೆಟ್ಟಿ (Rishab Shetty) ಅವರು ಈಗ ಯಾರನ್ನೇ ಭೇಟಿ ಮಾಡಿದರೂ ಕುತೂಹಲ ಮೂಡುತ್ತದೆ. ಅವರು ಭೇಟಿ ಮಾಡಿದ ಕಲಾವಿದರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಾರೆ. ಈಗ ರಿಷಬ್ ಶೆಟ್ಟಿ ಅವರು ಮಲಯಾಳಂನ ಖ್ಯಾತ ನಟ ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ಇದರಿಂದ ಕುತೂಹಲ ಹೆಚ್ಚಿದೆ. ಅವರು ‘ಕಾಂತಾರ 2’ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿವೆ. ಸದ್ಯ ರಿಷಬ್ ಅವರು ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿ ಇದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ರಿಷಬ್ ಅವರು ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಸಖತ್ ಅಚ್ಚರಿ ಮೂಡಿಸಿದೆ. ಈ ಭೇಟಿ ಹಿಂದೆ ಕಾರಣ ಇದೆಯೋ ಅಥವಾ ಇದು ಸಹಜ ಭೇಟಿಯೋ ಅನ್ನೋ ಪ್ರಶ್ನೆಯನ್ನು ಫ್ಯಾನ್ಸ್ ಕೇಳುತ್ತಿದ್ದಾರೆ.

‘ಲೆಜೆಂಡರಿ ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ‘ಲೆಜೆಂಡರಿ ನಟ ಲೆಜೆಂಡರಿಯನ್ನು ಭೇಟಿ ಮಾಡಿದರು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು. ‘ನನಗೆ ಅವರು ಆಫರ್ ನೀಡಿದ್ದು ನಿಜ. ಆದರೆ, ಅದನ್ನು ನಾನು ಒಪ್ಪಿಲ್ಲ’ ಎಂದು ಅವರು ಹೇಳಿದ್ದರು. ಜೊತೆಗೆ ಕನ್ನಡ ಸಿನಿಮಾ ಮಾಡುವತ್ತ ರಿಷಬ್ ಶೆಟ್ಟಿ ಅವರು ಹೆಚ್ಚು ಗಮನ ಹರಿಸುತ್ತಿದ್ದಾರಂತೆ.

ಇದನ್ನೂ ಓದಿ: ‘ಕಾಂತಾರಾ ಪ್ರೀಕ್ವೆಲ್​ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಹೀರೋ ಆದರು. ಈಗ ಈ ಚಿತ್ರಕ್ಕೆ ಪ್ರೀಕ್ವೆಲ್ ಬರುತ್ತಿದೆ. ಹಿಂದೆ ಏನಾಗಿತ್ತು ಎನ್ನುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Fri, 19 April 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು