‘ಕಾಂತಾರ’ ಹಾಡಿನ ವಿವಾದ; ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಕೇರಳ ಹೈಕೋರ್ಟ್​​ನ ನ್ಯಾಯಮೂರ್ತಿ ಎ. ಬದ್ರುದೀನ್ ಅವರು ರಿಷಬ್ ಹಾಗೂ ವಿಜಯ್​ಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಜತೆಗೆ ಅರ್ಜಿದಾರರಿಗೆ ಷರತ್ತುಗಳನ್ನು ಹಾಕಿದ್ದಾರೆ.

‘ಕಾಂತಾರ’ ಹಾಡಿನ ವಿವಾದ; ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು
ರಿಷಬ್-ವಿಜಯ್ ಕಿರಗಂದೂರು
Follow us
ರಾಜೇಶ್ ದುಗ್ಗುಮನೆ
|

Updated on: Feb 09, 2023 | 10:51 AM

ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ವಾರಹ ರೂಪಂ..’ ಹಾಡು (Varaharoopam Song) ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ‘ನಮ್ಮ ಟ್ಯೂನ್ ಕದಿಯಾಗಿದೆ’ ಎಂದು ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​​’ನವರು ಆರೋಪ ಮಾಡಿದ್ದರು. ಈ ವಿಚಾರ ಕೋರ್ಟ್​ನಲ್ಲಿದೆ. ಈಗ ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು ಹಾಗೂ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಅವರು ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಕೇರಳ ಹೈಕೋರ್ಟ್​​ನ ನ್ಯಾಯಮೂರ್ತಿ ಎ. ಬದ್ರುದೀನ್ ಅವರು ರಿಷಬ್ ಹಾಗೂ ವಿಜಯ್​ಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಜತೆಗೆ ಅರ್ಜಿದಾರರಿಗೆ ಷರತ್ತುಗಳನ್ನು ಹಾಕಿದ್ದಾರೆ. ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್​ನಿಂದ ಮಧ್ಯಂತರ ಅಥವಾ ಅಂತಿಮ ಆದೇಶ ಬರೋವರೆಗೆ ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ..’ ಹಾಡನ್ನು ಬಳಕೆ ಮಾಡುವಂತಿಲ್ಲ. ಈ ಪ್ರಕರಣದ ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶ ಇದೆ’ ಎಂದು ಬದ್ರುದೀನ್ ಹೇಳಿದ್ದಾರೆ.

ತೈಕುಡಂ ಬ್ರಿಡ್ಜ್​ನವರು ಕೋಯಿಕ್ಕೋಡ್​ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ‘ವರಾಹ ರೂಪಂ..’ ಹಾಡಿನಲ್ಲಿ ಬಳಕೆ ಆದ ಟ್ಯೂನ್ ‘ನವರಸಂ’ ಹಾಡಿನದ್ದು ಎನ್ನುವ ಆರೋಪ ಕೇಳಿ ಬಂತು. ಈ ಪ್ರಕರಣದ ಸದ್ಯ ಕೋರ್ಟ್​ನಲ್ಲಿ ವಿಚಾರಣೆ ಆಗುತ್ತಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಕಾಂತಾರ’ ಚಿತ್ರಕ್ಕೆ ಪ್ರೀಕ್ವೆಲ್

ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ‘ಕಾಂತಾರ’ಕ್ಕೆ ಪ್ರಿಕ್ವೆಲ್ ಬರಲಿದೆ ಎಂದು ಹೇಳಿದ್ದರು. ‘ಕಾಂತಾರದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ನಂತರ ವಿಜಯ್ ಅವರ ಬಳಿ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ. ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ‘ಕಾಂತಾರ ಭಾಗ 2’ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದಾರೆ. ನೀವು ನೋಡಿರುವುದೇ ಎರಡನೇ ಪಾರ್ಟ್​. ಮುಂದೆ ಬರೋದು ಈ ಚಿತ್ರದ ಮೊದಲ ಭಾಗ’ ಎಂದು ರಿಷಬ್ ಶೆಟ್ಟಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ